ತಾಯಿಹಾಲು ಮಾರಾಟ: ಪರವಾನಿಗೆ ರದ್ದತಿಗೆ ಸೂಚನೆ; ಹೈಕೋರ್ಟ್‌ಗೆ ಕೇಂದ್ರ ಸರಕಾರದ ಮಾಹಿತಿ
Team Udayavani, Nov 13, 2024, 11:07 PM IST
ಬೆಂಗಳೂರು: ತಾಯಿ ಹಾಲನ್ನು ಸಂಗ್ರಹಿಸಿ, ಸಂಸ್ಕರಣೆ ಮಾಡಿ ಅದನ್ನು ಮಾರಾಟ ಮಾಡಲು ಖಾಸಗಿ ಕಂಪೆನಿಗಳಿಗೆ ನೀಡಿರುವ ಪರವಾನಿಗೆಯನ್ನು ರದ್ದುಗೊಳಿಸುವಂತೆ ಕರ್ನಾಟಕ ಸರಕಾರಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಕೇಂದ್ರ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.
ತಾಯಿ ಹಾಲಿನ ವಾಣಿಜ್ಯೀಕರಣವನ್ನು ತಡೆಯುವಂತೆ ಕೋರಿ ಮುನೇಗೌಡ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾ| ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ಕೇಂದ್ರ ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್, ತಾಯಿ ಹಾಲು ಸಂಗ್ರಹಿಸಲು ಖಾಸಗಿ ಸಂಸ್ಥೆಗಳಿಗೆ ನೀಡಲಾದ ಪರವಾನಿಗೆಯನ್ನು ರದ್ದುಪಡಿಸುವಂತೆ ಇತ್ತೀ ಚೆಗೆ ಕೇಂದ್ರದ ಆಯುಷ್ ಸಚಿವಾಲಯ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ ಎಂದರು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಬಿ. ವಿಶ್ವೇಶ್ವರಯ್ಯ, ಎದೆಹಾಲಿನ 50 ಎಂಎಲ್ ಬಾಟಲ್ ಹಾಗೂ 10 ಗ್ರಾಮ್ ಎದೆಹಾಲಿನ ಪೌಡರ್ ಪ್ಯಾಕೆಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಅವುಗಳ ಬೆಲೆ ಅತೀ ದುಬಾರಿಯಾಗಿದೆ. ಕ್ರಮವಾಗಿ 1,239 ರೂ. ಹಾಗೂ 313 ರೂ. ನಿಗದಿ ಮಾಡಲಾಗಿದೆ. ಆ ಮೂಲಕ ಎದೆಹಾಲನ್ನು ವಾಣಿಜ್ಯೀಕರಣ ಮಾಡಿ ಖಾಸಗಿ ಕಂಪೆನಿಗಳು ಸಿಕ್ಕಾಪಟ್ಟೆ ಲಾಭ ಮಾಡಿಕೊಳ್ಳುತ್ತಿವೆ ಎಂದು ದೂರಿದರು.
ಕೇಂದ್ರ ಸರಕಾರದ ವಾದದ ಹಿನ್ನೆಲೆ ಯಲ್ಲಿ ಕೇಂದ್ರದ ಆಯುಷ್ ಸಚಿವಾಲಯವನ್ನು ಪ್ರತಿವಾದಿ ಯನ್ನಾಗಿ ಅರ್ಜಿಯಲ್ಲಿ ಸೇರಿಸಲು ಅರ್ಜಿದಾರರಿಗೆ ಸೂಚಿಸಿದ ನ್ಯಾಯ ಪೀಠ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.