Karnataka Politics: ಸಮಾಜವಾದಿ ಪಕ್ಷದ ಅಖೀಲೇಶ್ ಯಾದವ್ ಕರೆ ಮಾಡಿದ್ದರು; ಈಶ್ವರಪ್ಪ
Team Udayavani, Mar 30, 2024, 8:12 PM IST
ಶಿವಮೊಗ್ಗ: ಸಮಾಜವಾದಿ ಪಕ್ಷದ ಅಖೀಲೇಶ್ ಯಾದವ್ ಕರೆ ಮಾಡಿದ್ದರು. ಆದರೆ ನಾನು ಸ್ವೀಕರಿಸಲಿಲ್ಲ. “ಕಾಲ್ ಮಿ ಅರ್ಜೆಂಟ್’ ಅಂತ ಮೆಸೇಜ್ ಮಾಡಿದ್ದರು. ನಾನು ಪ್ರತಿಕ್ರಿಯೆ ನೀಡಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹುಶಃ ಅವರ ಪಕ್ಷದಿಂದ ಟಿಕೆಟ್ ನೀಡಲು ಕರೆ ಮಾಡಿರಬಹುದು. ಆದರೆ ನಾನು ಹಿಂದುತ್ವವನ್ನು ನನ್ನ ತಾಯಿ ಅಂದುಕೊಂಡವನು. ಅದಕ್ಕೆ ಯಾವತ್ತೂ ಮೋಸ ಮಾಡುವುದಿಲ್ಲ. ಶಿಕಾರಿಪುರದಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿದರು. ಈಗ ಕಾಂಗ್ರೆಸ್‌ನಿಂದ ಡಮ್ಮಿ, ದುರ್ಬಲ ಅಭ್ಯರ್ಥಿಯನ್ನು ಹಾಕಿಸಿಕೊಂಡು ಬಂದಿದ್ದಾರೆ. ಇಂತಹ ನೀತಿಗೆಟ್ಟ ರಾಜಕಾರಣವನ್ನು ನಾನೆಂದೂ ಮಾಡಿಲ್ಲ. ಶಿಕಾರಿಪುರದಲ್ಲಿ ಹಂಚಿರುವಷ್ಟು ಹಣ ರಾಜ್ಯದ ಯಾವುದೇ ಕ್ಷೇತ್ರದಲ್ಲೂ ಹಂಚಿಲ್ಲ. ಆದರೂ ಸಿಕ್ಕಿದ್ದು 10 ಸಾವಿರ ಮುನ್ನಡೆ ಮಾತ್ರ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.