ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಮತ್ತೆ ಸಿಸಿಬಿ ಕಸ್ಟಡಿಗೆ
Team Udayavani, Nov 19, 2020, 11:55 AM IST
ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ಮತ್ತು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಮತ್ತೆ ಒಂದು ದಿನದ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.
ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮುಂದೆ ಹಾಜರುಪಡಿಸಿದರು. ಈ ವೇಳೆ ಸಂಪತ್ ರನ್ನು 10 ದಿನ ಕಸ್ಟಡಿಗೆ ನೀಡುವಂತೆ ಸಿಸಿಬಿ ಪರ ವಕೀಲರು ಮನವಿ ಮಾಡಿದ್ದರು. ಆದರೆ ಕೋರ್ಟ್ ಮತ್ತೆ ಒಂದು ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರ ಅಳಿಯ ನವೀನ್ ಮುಸ್ಲಿಂ ಸಮುದಾಯ ಧರ್ಮಗುರುಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರಿಂದ ಆಕ್ರೋಶಗೊಂಡ ಕೆಲ ಕಿಡಿಗೇಡಿಗಳು, ಆ.11ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ, ಅವರ ಕಚೇರಿ, ಸೋದರ ಅಳಿಯ ನವೀನ್ ಮನೆ ಹಾಗೂ ಎರಡು ಪೊಲೀಸ್ ಠಾಣೆಗಳ ಮೇಲೆ ಒಂದು ಸಾವಿರಕ್ಕೂ ಅಧಿಕ ಮಂದಿ ಮಾರಕಾಸ್ತ್ರಗಳಿಂದ ಧ್ವಂಸ ಮಾಡಿದ್ದರು. ಅಲ್ಲದೆ, ಬೆಂಕಿ ಹಚ್ಚಿ ವಿಧ್ವಂಸಕ ಕೃತ್ಯ ಎಸಗಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸಿಸಿಬಿ ಪೊಲೀಸರು ಸುಮಾರು 300ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಚಾರ್ಜ್ ಶೀಟ್ ಹಾಕುತ್ತಿದ್ದಂತೆ ಅವರು ನಾಪತ್ತೆಯಾಗಿದ್ದರು. ಸೋಮವಾರ ಸಂಜೆ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.