ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ
Team Udayavani, Apr 6, 2020, 5:08 PM IST
ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ (44) ಅವರು ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಬುಲೆಟ್ ಪ್ರಕಾಶ್ ಅವರು ನಗರದ ಫೋರ್ಟೀಸ್ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು.
ಬುಲೆಟ್ ಪ್ರಕಾಶ್ ಅವರು ಬಹು ಅಂಗಾಗ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆಯಿಂದಲೇ ಪ್ರಕಾಶ್ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸುತ್ತಾ ಹೋಗಿತ್ತು. ಬುಲೆಟ್ ಪ್ರಕಾಶ್ ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ನಾಳೆ ಮಧ್ಯಾಹ್ನ ಬುಲೆಟ್ ಪ್ರಕಾಶ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಕನ್ನಡ ಚಿತ್ರರಂಗದ ವಿಶಿಷ್ಟ ಹಾಸ್ಯನಟ
ಇದುವರೆಗೂ 300ಕ್ಕೂ ಅಧಿಕ ಕನ್ನಡ ಸಿನೇಮಾಗಳಲ್ಲಿ ಅಭಿನಯಿಸಿರುವ ಬುಲೆಟ್ ಪ್ರಕಾಶ್ ಅವರು ತಮ್ಮ ವಿಶಿಷ್ಟ ದೇಹ ಮತ್ತು ಮ್ಯಾನರಿಸಂ ಮೂಲಕ ಚಿತ್ರರಸಿಕರ ಮನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಸಾಧು ಕೋಕಿಲ ಹಾಗೂ ಬುಲೆಟ್ ಪ್ರಕಾಶ್ ಕಾಮಿಡಿ ಕಾಂಬಿನೇಷನ್ ಹಲವು ಕನ್ನಡ ಚಿತ್ರಗಳಲ್ಲಿ ಪ್ರೇಕ್ಷಕರಿಗೆ ಮನರಂಜನೆ ನೀಡುವಲ್ಲಿ ಯಶಸ್ವಿಯಾಗಿತ್ತು.
2015ರಲ್ಲಿ ಬುಲೆಟ್ ಪ್ರಕಾಶ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.