IT ದಾಳಿ:ಪತ್ತೆಯಾದ ಅಘೋಷಿತ ಸಂಪತ್ತು ಎಷ್ಟು ಗೊತ್ತೆ?
Team Udayavani, Jan 6, 2019, 10:55 AM IST
ಬೆಂಗಳೂರು: ಸ್ಯಾಂಡಲ್ಪುಡ್ ದಿಗ್ಗಜರ ಮೇಲೆ ನಡೆದ ಐಟಿ ದಾಳಿಯಲ್ಲಿ ಒಟ್ಟು 109 ಕೋಟಿ ರೂಪಾಯಿ ಮೌಲ್ಯದ ಅಘೋಷಿತ ಆಸ್ತಿ ಪತ್ತೆಯಾಗಿದೆ ಎನ್ನುವ ವಿವರಗಳನ್ನು ಆದಾಯ ತೆರಿಗೆ ಅಧಿಕಾರಿಗಳು ಅಧಿಕೃತವಾಗಿ ಭಾನುವಾರ ಮಾಧ್ಯಮ ಪ್ರಕಟಣೆಯಲ್ಲಿ ಬಹಿರಂಗ ಪಡಿಸಿದ್ದಾರೆ.
21 ಸ್ಥಳಗಳಲ್ಲಿ ಕರ್ನಾಟಕ ಮತ್ತು ಗೋವಾ ವಲಯದ 180 ಮಂದಿ ಐಟಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 2.85 ಕೋಟಿ ನಗದು, 25.3 ಕೆ.ಜಿ ಚಿನ್ನಾಭರಣ ಸೇರಿ 109 ಕೋಟಿ ರೂಪಾಯಿ ಮೌಲ್ಯದ ಅಘೋಷಿತ ಆಸ್ತಿ ಪತ್ತೆಯಾಗಿದೆ.
ಜಾರಿ ನಿರ್ದೇಶನಾಲಯಕ್ಕೂ ಐಟಿ ಇಲಾಖೆ ಮಾಹಿತಿ ರವಾನೆ ಮಾಡಿದ್ದು ಪ್ರಕರಣ ವರ್ಗಾವಣೆ ಆದರೆ ಸ್ಯಾಂಡಲ್ವುಡ್ ದಿಗ್ಗಜರಿಗೆ ಸಂಕಷ್ಟ ಎದುರಾಗಬಹುದು.
ಮೂರು ತಿಂಗಳ ಕಾಲ ಗೌಪ್ಯ ತನಿಖೆ ನಡೆಸಿ ಈ ದಾಳಿ ನಡೆಸಲಾಗಿದ್ದು, ತೆರಿಗೆ ವಂಚನೆ ಅವ್ಯವಹಾರದ ಕುರಿತು ಶೀಘ್ರದಲ್ಲೇ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಐಟಿ ಹೇಳಿದೆ.
ಚಿತ್ರಮಂದಿರದಲ್ಲಿ ದಾಖಲೆ ರಹಿತವಾಗಿ ಸಂಗ್ರಹಿಸಿದ ನಗದು,ಆಡಿಯೋ ಹಕ್ಕು, ಡಿಜಿಟಲ್ ಹಕ್ಕುಗಳ ಮೂಲದ ಅವ್ಯವಹಾರ ನಡೆಸಿದ ಹಣ ಇದಾಗಿದೆ ಎಂದು ಐಟಿ ಇಲಾಖೆ ಹೇಳಿದೆ.
ಆದರೆ ದಾಳಿಯಲ್ಲಿ ವೈಯಕ್ತಿಕವಾಗಿ ಯಾರ ಬಳಿ ಎಷ್ಟು ಸಂಪತ್ತು ಪತ್ತೆಯಾಗಿದೆ ಎನ್ನುವ ವಿಚಾರವನ್ನು ಬಹಿರಂಗ ಪಡಿಸದೆ ಜಾಣತನವನ್ನು ತೋರಿದ್ದಾರೆ.
ಪ್ರಖ್ಯಾತ ನಟರಾದ ಶಿವರಾಜ್ಕುಮಾರ್, ಪುನೀತ್ ರಾಜ್ಕುಮಾರ್, ಸುದೀಪ್ ಮತ್ತು ಯಶ್, ನಿರ್ಮಾಪಕರಾದ ರಾಕ್ಲೈನ್ ವೆಂಕಟೇಶ್,ಸಿ.ಆರ್.ಮನೋಹರ್, ವಿಜಯ್ ಕಿರಗಂದೂರು ಮತ್ತು ಜಯಣ್ಣ ಅವರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿ 2 ದಿನಗಳ ಕಾಲ ನಿರಂತರ ದಾಖಲೆಗಳ ಪರಿಶೀಲನೆ ನಡೆಸಿದ್ದರು.
ನಾಳೆ ವಿಚಾರಣೆಗೆ ಹಾಜರಾಗಿ
ನಾಲ್ವರು ನಿರ್ಮಾಪಕರು ಮತ್ತು ನಾಲ್ವರು ನಟರಿಗೆ ಸೋಮವಾರ ಐಟಿ ವಿಚಾರಣೆಗೆ ಹಾಜರಾಗುವಂತೆ ಐಟಿ ನೊಟೀಸ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.