ಯೋಧ ಸಂದೀಪ್ ಶೆಟ್ಟಿ ಅಂತ್ಯಕ್ರಿಯೆ
Team Udayavani, Feb 2, 2017, 3:45 AM IST
ಹಾಸನ: ಜಮ್ಮು ಕಾಶ್ಮೀರದ ಗುರೇಜ್ನ ಸೈನ್ಯದ ಬೇಸ್ಕ್ಯಾಂಪ್ನಲ್ಲಿ ಜ. 25ರಂದು ಹಿಮಪಾತಕ್ಕೆ ಸಿಲುಕಿ ಹುತಾತ್ಮರಾದ ಹಾಸನ ತಾಲೂಕು ದೇವಿಹಳ್ಳಿಯ ಯೋಧ ಸಂದೀಪ್ ಶೆಟ್ಟಿ ಅಂತ್ಯಕ್ರಿಯೆ ಜನಸಾಗರದ ನಡುವೆ ಸಕಲ ಸರಕಾರಿ ಗೌರವ ಮತ್ತು ಸೇನಾ ಗೌರವದೊಂದಿಗೆ ನೆರವೇರಿತು.
ಸಂದೀಪ್ ಶೆಟ್ಟಿಯ ಪಾರ್ಥಿವ ಶರೀರ ಮಂಗಳವಾರ ಕಾಶ್ಮೀರದಿಂದ ವಿಮಾನದ ಮೂಲಕ ಬೆಂಗಳೂರಿಗೆ ಬಂದು ರಾತ್ರಿ 12.50ರ ವೇಳೆಗೆ ಹಾಸನ ಜಿಲ್ಲೆಗೆ ಆಗಮಿಸಿತು. ತಡರಾತ್ರಿಯಲ್ಲಿ ಆಗಮಿಸಿದ ಯೋಧನ ಪಾರ್ಥಿವ ಶರೀರವನ್ನು ಹಾಸನ ಮೆಡಿಕಲ್ ಕಾಲೇಜಿನ ಆಸ್ಪತ್ರೆಯ ಶೈತ್ಯಾಗಾರದಲ್ಲಿ ಇರಿಸಲಾಗಿತ್ತು. ಬುಧವಾರ ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಅಪರಾಹ್ನ 1.30ರ ವೇಳೆಗೆ ಯೋಧನ ಸ್ವಗ್ರಾಮ ದೇವಿಹಳ್ಳಿಗೆ ತರಲಾಯಿತು. ಮೃತನ ಮನೆಯ ಬಳಿ ಗೌರವ ಸಲ್ಲಿಸಿ ಅನಂತರ ಸಂದೀಪ್ ಶೆಟ್ಟಿ ಅವರ ಜಮೀನಿನ ಬಳಿ ಅರ್ಧ ಗಂಟೆಗಳ ಕಾಲ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಈ ವೇಳೆ ಅಲ್ಲಿ ಸೇರಿದ್ದ ಐದು ಸಾವಿರಕ್ಕೂ ಹೆಚ್ಚು ಜನರು “ಸಂದೀಪ್ ಶೆಟ್ಟಿ ಅಮರ್ ರಹೇ…’ ಘೋಷಣೆ ಕೂಗಿ ಗೌರವ ಸಲ್ಲಿಸಿದರು. ಬಳಿಕ ಸೇನಾ ಸಿಬಂದಿ ಸೇನಾ ಪಡೆ ಪರವಾಗಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ಗೌರವ ವಂದನೆ ಸಲ್ಲಿಸಿದರು. ಅನಂತರ ಕುಟುಂಬದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.