![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 20, 2022, 6:11 PM IST
ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.ಉಡುಪಿ ನಗರ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಯಾಗಿದ್ದು ಈಶ್ವರಪ್ಪ ಮೇಲಿನ ಆರೋಪಕ್ಕೆ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಹೇಳಲಾಗಿದೆ.
ಪ್ರಕರಣದಲ್ಲಿ ಖುಲಾಸೆಯಾಗುತ್ತಿದ್ದಂತೆ ಮಾಜಿ ಸಚಿವ ಈಶ್ವರಪ್ಪ ಅವರ ಶಿವಮೊಗ್ಗ ನಿವಾಸದಲ್ಲಿ ಸಂಭ್ರಮಾಚರಣೆ ನಡೆಸಲಾಗುತ್ತಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ನಾನು ಮುಕ್ತವಾಗಿ ಹೊರಗೆ ಬಂದಿದ್ದೇನೆ, ಆವತ್ತೇ ಹೇಳಿದ್ದೆ, ಆರೋಪದಿಂದ ಮುಕ್ತವಾಗಿ ಬರುತ್ತೇನೆ ಎಂದು. ಮನೆ ದೇವತೆ ಚೌಡೇಶ್ವರಿ ಆಶೀರ್ವಾದದಿಂದ , ಇಡೀ ದೇಶದ ಸಾಧು ಸಂತರ ಆಶೀರ್ವಾದ ನೀಡಿದ್ದರು. ನಮ್ಮ ಪಕ್ಷದ ನಾಯಕರು, ಕಾರ್ಯಕರತರು ಮುಜುಗರದಲ್ಲಿದ್ದರು, ಅವರೆಲ್ಲರೂ ಮುಜುಗರದಿಂದ ಹೊರ ಬಂದಿದ್ದಾರೆ ಎಂದರು.
ನನ್ನನ್ನು ಮತ್ತೆ ಸಚಿವನನ್ನಾಗಿ ಮಾಡುವುದು ಬಿಜೆಪಿಗೆ ಬಿಟ್ಟದ್ದು, ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದರು. ಈಗ ನಮ್ಮ ನಾಯಕರಾದ ಬಿ.ಎಸ್ . ಯಡಿಯೂರಪ್ಪ ಅವರು ಕರೆ ಮಾಡಿದ್ದರು. ಧೈರ್ಯವಾಗಿರಪ್ಪ, ಏನೂ ಆಗುವುದಿಲ್ಲಎಂದು ಹೇಳಿದರು, ಹಿಂದೆಯೂ ಹೇಳಿದ್ದರು ಎಂದರು.
ನಿರಾಧಾರವಾಗಿ ಆರೋಪ ಬಂದುದರಿಂದ ನನಗೆ ನೋವು ಇತ್ತು. ರಾಜಕಾರಣದಲ್ಲಿ ಆರೋಪಗಳು ಸಹಜ, ಆರೋಪದಿಂದ ಮುಕ್ತನಾದ ತೃಪ್ತಿ ಇದೆ ಎಂದರು.
ಗುತ್ತಿಗೆದಾರ ಸಂತೋಷ್ ಪಾಟೀಲ್ “ತಾವು ಮಾಡಿರುವ ಕೆಲಸಕ್ಕೆ ಹಣ ಬಿಡುಗಡೆ ಮಾಡಲು 40 ಪರ್ಸೆಂಟ್ ಲಂಚ ಕೇಳುತ್ತಿದ್ದಾರೆ’ ಎಂದು ಆರೋಪಿಸಿದ್ದರು. ಅಲ್ಲದೆ ತಮ್ಮ ಸಾವಿಗೆ ಈಶ್ವರಪ್ಪ ಕಾರಣ ಎಂದು ವಾಟ್ಸ್ ಆ್ಯಪ್ ಮೆಸೇಜ್ ಮಾಡಿ ಏ.12 ರಂದು ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು. ಬಳಿಕ ರಾಜಕೀಯ ಒತ್ತಡದ ಕಾರಣದಿಂದ ಕೆ.ಎಸ್.ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿಡಿದ್ದರು.
ಸಂತೋಷ್ ಪಾಟೀಲ್ ವೈಯಕ್ತಿಕ ಕಾರಣಗಳಿಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ನೆಲೆಗಟ್ಟಿನಲ್ಲಿ ತನಿಖೆ ಮುಂದುವರಿಸಲಾಗುತ್ತಿದೆ. 1890 ಪುಟಗಳ ತನಿಖಾ ವರದಿ ಸಲ್ಲಿಕೆಯಾಗಿದ್ದು, ಆ ಪೈಕಿ 85 ಪುಟಗಳ ಅಂತಿಮ ವರದಿ ಸಲ್ಲಿಕೆಯಾಗಿದ್ದು, ಆತ್ಮಹತ್ಯೆ ಪ್ರಚೋದನೆ ನೀಡುವಲ್ಲಿ ಈಶ್ವರಪ್ಪ ಅವರ ಪಾತ್ರವಿಲ್ಲ ಎಂದು ವರದಿ ನೀಡಲಾಗಿದೆ ಎಂದು ತಿಳಿದು ಬಂದಿದೆ. ತಾನೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ಎಫ್ ಎಸ್ ಎಲ್ ವರದಿ ನೀಡಿತ್ತು ಎನ್ನುವ ವಿಚಾರವನ್ನು ಪ್ರಸ್ತಾಪಿಸಲಾಗಿದ್ದು, ಸಾಲಗಾರರಿಗೆ ಹಣ ಮರುಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದೂ ಶಂಕಿಸಲಾಗಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.