ಸಂತೋಷ್‌ ಪಾಟೀಲ್‌ ನಿಗೂಢ ಸಾವು ಪ್ರಕರಣ: ಚುರುಕುಗೊಂಡ ತನಿಖೆ; 2 ವಿಶೇಷ ತಂಡ ರಚನೆ

Team Udayavani, Apr 15, 2022, 7:00 AM IST

Untitled-1

ಉಡುಪಿ: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಹೆಚ್ಚಿನ ತನಿಖೆಗಾಗಿ ಎರಡು ವಿಶೇಷ ತಂಡಗಳನ್ನು ಜಿಲ್ಲಾ ಪೊಲೀಸ್‌ ಇಲಾಖೆ ರಚಿಸಿದೆ. ಮಲ್ಪೆ ವೃತ್ತ ನಿರೀಕ್ಷಕ ಹಾಗೂ ಬ್ರಹ್ಮಾವರ ವೃತ್ತ ನೀರಿಕ್ಷಕರ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.

ಒಂದು ತಂಡ ಬೆಳಗಾವಿಗೆ ತೆರಳಿದ್ದು, ಸಂತೋಷ್‌ಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಕಲೆ ಹಾಕುತ್ತಿದೆ. ನಗರದ ಹೊಟೇಲ್‌ನಲ್ಲಿ ಸೋಮವಾರ ರಾತ್ರಿ/ಮಂಗಳವಾರ ಮುಂಜಾನೆ ವೇಳೆ ಸಂತೋಷ್‌ ಅವರು ವಾಟ್ಸ್‌ ಆ್ಯಪ್‌ನಲ್ಲಿ ಸಚಿವ ಈಶ್ವರಪ್ಪ ಅವರ ಹೆಸರು ಉಲ್ಲೇಖೀಸಿ ಶೇ. 40 ಕಮಿಷನ್‌ ಕೇಳುತ್ತಾರೆ ಎಂದು ಆರೋಪ ಮಾಡಿ ಸಂದೇಶವನ್ನು ಮಾಧ್ಯಮ ಮಿತ್ರರಿಗೆ ಮತ್ತು ಆಪ್ತರಿಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಉಡುಪಿ ಪೊಲೀಸ್‌ ನಿರೀಕ್ಷಕ ಪ್ರಮೋದ್‌ ಕುಮಾರ್‌ ತನಿಖಾಧಿಕಾರಿ ಯಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಸಂತೋಷ್‌ ಪಾಟೀಲ್‌ ಜತೆಗೆ ಲಾಡ್ಜ್ನಲ್ಲಿ ಉಳಿದುಕೊಂಡಿದ್ದ ಸ್ನೇಹಿತರಾದ ಪ್ರಶಾಂತ್‌ ಶೆಟ್ಟಿ, ಸಂತೋಷ್‌ ಮಡಿಕೇರಿ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿ ಸಿದ್ದು, ಅವರ ಹೇಳಿಕೆಯ  ವೀಡಿಯೋ ದಾಖಲಿಸಿಕೊಂಡಿದ್ದಾರೆ. ಇಬ್ಬರು ಗೆಳೆಯರೊಂದಿಗೆ ತನಿಖಾಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ.

ತಾಂತ್ರಿಕ ತನಿಖೆ ಮಹತ್ವದ ಪಾತ್ರ:  ಇಡೀ ಪ್ರಕರಣದಲ್ಲಿ ತಾಂತ್ರಿಕ  ತನಿಖೆ ಮಹತ್ವದ ಪಾತ್ರ ವಹಿಸಲಿದೆ. ಸಿಸಿಟಿವಿ ಫ‌ೂಟೇಜ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಬೈಲ್‌ ಕರೆಗಳ ಪರಿಶೀಲನೆ, ವಾಟ್ಸಪ್‌ ಸಂದೇಶ ಕಳುಹಿಸಿರುವ ಖಚಿತತೆ ಬಗ್ಗೆ ಆಳವಾದ ತನಿಖೆ ನಡೆಯುತ್ತಿದೆ. ತಾಂತ್ರಿಕ ತನಿಖೆ ಗಾಗಿಯೇ ಒಂದು ತಂಡವನ್ನು ನಿಯೋಜಿಸಲಾಗಿದ್ದು, ಕಾರ್ಯ ಪ್ರವೃತ್ತವಾಗಿದೆ. ಈಗಾಗಲೆ ಮಣಿಪಾಲ ಮತ್ತು ಮಂಗಳೂರಿಂದ ಬಂದಿರುವ (ಎರಡು ಪ್ರತ್ಯೇಕ ಎಫ್ಎಸ್‌ಐಎಲ್‌ ತಂಡ) ವಿಧಿ ವಿಜ್ಞಾನ ವಿಭಾಗದ ತಜ್ಞರು ಘಟನ ಸ್ಥಳದಲ್ಲಿದ್ದ ಎಲ್ಲ ಮಾದರಿಗಳನ್ನು ಪರಿಶೀಲಿಸಿ, ಕೊಂಡೊಯ್ದಿದ್ದು, ವಿಶ್ಲೇಷಣೆ ನಡೆ ಯುತ್ತಿದೆ.

 ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕೇಸು:

ಈ ಪ್ರಕರಣದಲ್ಲಿ ಜನಪ್ರತಿನಿಧಿಯೊಬ್ಬರು ಆರೋಪಿಯಾಗಿರುವುದರಿಂದ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ. ತನಿಖಾಧಿಕಾರಿಗಳು ತನಿಖೆ ನಡೆಸಿ ತನಿಖಾ ವರದಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ.

ಟಾಪ್ ನ್ಯೂಸ್

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

25-kota

Kota: ಮರೆಯಾಗುತ್ತಿವೆ ಮೇಟಿ ಪೂಜೆ, ರಾಶಿ ಪೂಜೆ

17-katapady

Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!

14-malpe

Malpe: ನಿರಂತರ ರಜೆ: ಬೀಚ್‌ಗಳಲ್ಲಿ ಪ್ರವಾಸಿಗರ ದಟ್ಟಣೆ

Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ

Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ

Online Trading: ಉಡುಪಿ ಮೂಲದ ವ್ಯಕ್ತಿಗೆ 27 ಲಕ್ಷ ರೂ. ವಂಚನೆ

Online Trading: ಆನ್‌ಲೈನ್‌ ಲಿಂಕ್‌ ಅಪ್ಲಿಕೇಶನ್‌ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

abhimanyu kashinath next movie suri loves sandhya

Abhimanyu Kashinath; ಸೂರಿ ಲವ್‌ ಗೆ ಉಪ್ಪಿ ಮೆಚ್ಚುಗೆ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.