![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 14, 2022, 10:40 AM IST
ಬೆಳಗಾವಿ: ಉಡುಪಿಯ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅಂತ್ಯಕ್ರಿಯೆ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆಯಿತು.
ಕಾಂಗ್ರೆಸ್ ನಾಯಕರ ತೀವ್ರ ವಿರೋಧ ಹಾಗೂ ಪ್ರತಿಭಟನೆಯ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸೇರಿ ಸಂತೋಷ್ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿದರು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಗ್ರಾಮದಲ್ಲಿ ಮೂರು ಮದುವೆ ಇದ್ದ ಕಾರಣ ಬೇಗ ಅಂತ್ಯಕ್ರಿಯೆ ಮುಗಿಸುವಂತೆ ಗ್ರಾಮಸ್ಥರು ಕೋರಿದ್ದರು. ಜೊತೆಗೆ ಮೃತ ಸಂತೋಷ್ ಸಂಬಂಧಿಕರು ಮೃತದೇಹದ ಮುಂದೆ ಪ್ರತಿಭಟನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಜಮೀನಿಗೆ ತಂದು, ಲಿಂಗಾಯತ ವಿಧಿವಿಧಾನಗಳಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಇದನ್ನೂ ಓದಿ:ಪ್ರಾಥಮಿಕ ತನಿಖೆ ಆಗುವವರೆಗೂ ಈಶ್ವರಪ್ಪ ರಾಜೀನಾಮೆ ಪಡೆಯಲ್ಲ: ಸಿಎಂ ಬೊಮ್ಮಾಯಿ
ಈ ಸಂದರ್ಭದಲ್ಲಿ ವಿಧಿವಿಧಾನಗಳು ಮುಗಿಯುತ್ತಿದ್ದಂತೆ ಅಂತ್ಯಸಂಸ್ಕಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದರು. ಶವದ ಎದುರು ಧರಣಿ ನಡೆಸಿದರು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಆಪ್ತ ಅಡಿವೇಶ ಇಟಗಿ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಪರಿಹಾರ ಘೋಷಣೆ ಮಾಡಬೇಕು ಹಾಗೂ ಬಾಕಿ ಬಿಲ್ ಮಂಜೂರಾತಿ ಮಾಡಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲೇ ಇರುವ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಇಲ್ಲವೇ ಬಿಜೆಪಿ ಮುಖಂಡರು ಸ್ಥಳಕ್ಕೆ ಬರಬೇಕು ಎಂದು ಶಾಸಕಿ ಹೆಬ್ಬಾಳ್ಕರ್ ಪಟ್ಟು ಹಿಡಿದಿದ್ದರು. ಆಗ ಗ್ರಾಮಸ್ಥರು ನ್ಯಾಯಕ್ಕಾಗಿ ಹೋರಾಡೋಣ, ಈಗ ಅಂತ್ಯಕ್ರಿಯೆ ನೆರವೇರಿಸೋಣ ಎಂದರು. ನಂತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.