![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 16, 2020, 1:00 PM IST
ಮೈಸೂರು: ಸರಸ್ವತಿಪುರಂ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ದರೋಡೆಗೆ ಹೊಂಚು ಹಾಕುತ್ತಿದ್ದ 8 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಶರತ್, ಸುಮಂತ್, ಧರ್ಮೇಶ್, ಶಶಾಂಕ್, ದಿನೇಶ್.ಸುನೀಲ್ ಕುಮಾರ್, ಕಾರ್ತಿಕ್, ಮಹದೇವ್ ಎಂದು ಗುರುತಿಸಲಾಗಿದೆ. ಇವರಿಂದ ಕೃತ್ಯಕ್ಕೆ ಬಳಸಲಾಗುತ್ತಿದ್ದ 1 ಮಾರುತಿ ವ್ಯಾನ್, 4 ಬೈಕ್, 11 ಮೊಬೈಲ್, 6ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.
ಈ ಪ್ರಕರಣ ಸಂಬಂಧ 5 ಇತರೆ ಠಾಣೆಯ ಪ್ರಕರಣವನ್ನೂ ಪೊಲೀಸರು ಬೇಧಿಸಿದ್ದಾರೆ. ಸಂಚು ಮಾಡುತ್ತಿದ್ದ ವೇಳೆ ಲಾಂಗ್, ಹಾಕಿ ಸ್ಟಿಕ್, 5 ಪ್ಯಾಕೆಟ್ ಖಾರದಪುಡಿ, ಎರಡು ಡ್ರ್ಯಾಗರ್, ಮಂಕಿ ಕ್ಯಾಪ್, ವಿಕೆಟ್‌ಗಳು ಕೂಡ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತರಿಂದ ಹಲವು ಪ್ರಕರಣಗಳ ಮಾಹಿತಿ ಬೆಳಕಿಗೆ ಬಂದಿದೆ. ಆರೋಪಿಗಳು ದರೋಡೆಯನ್ನೇ ವೃತ್ತಿಯಾಗಿ ಮಾಡಿಕೊಂಡಿದ್ದು, ಇವರ ಗುಂಪಿನಲ್ಲಿ 30 ಜನರು ಇರುವುದು ತಿಳಿದು ಬಂದಿದೆ. ಈಗ ಏಂಟು ಜನ ಸೆರೆ ಸಿಕ್ಕಿದ್ದಾರೆ. ಉಳಿದವರನ್ನು ಸದ್ಯದಲ್ಲೆ ಬಂಧಿಸಲಾಗುವುದು. ಬಂಧಿತರಿಂದ ಕೇಸ್ ದಾಖಲಾಗದ ಪ್ರಕರಣಗಳ ಬಗ್ಗೆಯೂ ಮಾಹಿತಿ ಸಿಕ್ಕಿದೆ. ಇವರಿಂದ ಮುಂದೆ ಆಗಬೇಕಿದ್ದ ಅನಾಹುತಗಳು ತಪ್ಪಿವೆ ಎಂದು ಮೈಸೂರಿನಲ್ಲಿ ಡಿಸಿಪಿ ಪ್ರಕಾಶ್ ಗೌಡ ಹೇಳಿಕೆ ನೀಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.