ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ ಈಗ ಅಪ್ರಸ್ತುತ : ಸತೀಶ ಜಾರಕಿಹೊಳಿ
Team Udayavani, Jan 1, 2021, 6:15 PM IST
ಬೆಳಗಾವಿ : ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ ಈಗ ಅಪ್ರಸ್ತುತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎದುರಿಸಿ ಪಕ್ಷ ಅಧಿಕಾರಕ್ಕೆ ತರಲಾಗುವುದು ನಂತರ ಶಾಸಕಾಂಗ ಸಭೆಯಲ್ಲಿ ಹಾಗೂ ಹೈಕಮಾಂಡ್ ನಲ್ಲಿ ಮುಂದಿನ ಸಿಎಂ ಯಾರಾಗಬೇಕು ಎಂದು ನಿರ್ಧರಿಸಲಾಗುತ್ತದೆ ಎಂದರು.
ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಭಿನ್ನಾಭಿಪ್ರಯವಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರಲ್ಲಿ ಏನೇ ಬಿನ್ನಾಬಿಪ್ರಾಯ ಇದ್ದರೂ ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಾಗಿದ್ದಾರೆ. ಕಾರ್ಯಕರ್ತರ ಮೇಲೆ ಪಕ್ಷ ನಡೆಯುತ್ತದೆ ಎಂದು ಸ್ಪಷ್ಟವಾಗಿ ಹೇಳಿದರು.
ಸಿಎಂ ಇಬ್ರಾಹಿಂ ಅವರೊಂದಿಗೆ ನಾನು ಈಗಾಗಲೇ ಚರ್ಚೆ ಮಾಡಿದ್ದೇನೆ. ಅವರು ಪಕ್ಷ ಬಿಟ್ಟು ಎಲ್ಲಿಯೂ ಹೋಗಲ್ಲ. ನಮ್ಮ ಜತೆಯೇ ಇರಲಿದ್ದಾರೆ. ಸಿಎಂ ಇಬ್ರಾಹಿಂ ಅವರು ಪಕ್ಷದೊಳಗಿನ ಕೆಲವು ಸಮಸ್ಯೆಗಳು ಬಗ್ಗೆ ಹೇಳಿದ್ದಾರೆ. ಅವುಗಳನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಪಕ್ಷದ ಚಿಹ್ನೆ ಮೇಲೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಎದುರಿಸುವ ಸಂಬಂಧ ಕಮಿಟಿ ರಚನೆ ಮಾಡಲಾಗಿದೆ. ಈಗಾಗಲೇ ಒಂದು ಬಾರಿ ಸಭೆ ನಡೆಸಲಾಗಿದ್ದು, ಕೆಲವರು ಪಕ್ಷದ ಚಿಹ್ನೆ ಬೇಕು ಎಂದರೆ ಇನ್ನು ಕೆಲವರು ಬೇಡ ಎಂಬ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ವಿಚಾರದಲ್ಲಿ ಗೊಂದಲವಿದ್ದು, ಹೈಕಮಾಂಡ್ ನಿರ್ಧಾರ ಏನು ಬರಲಿದೆ ಎಂದು ಕಾಯ್ದು ನೋಡೋಣ. ಸದ್ಯ ನಮ್ಮ ಚುನಾವಣೆ ತಯಾರಿ ನಡೆಯುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
MUST WATCH
ಹೊಸ ಸೇರ್ಪಡೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.