ಸಿಎಂ ಗೆಲ್ಲಿಸಲು ಬಾದಾಮಿ ರಣಾಂಗಣಕ್ಕೆ ಮಹಾ ಸೇನೆ,ಸತೀಶ್ ಜಾರಕಿಹೊಳಿ!
Team Udayavani, Apr 25, 2018, 11:39 AM IST
ಬಾದಾಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಶ್ರೀರಾಮುಲು ಸ್ಪರ್ಧೆಯಿಂದಾಗಿ ಬಾದಾಮಿಯಲ್ಲಿ ಜಿದ್ದಾಜಿದ್ದಿನ ರಣಕಣ ನಿರ್ಮಾಣವಾಗಿದ್ದು ಸದ್ಯ ಜಾತಿ ರಾಜಕೀಯದ ಅಖಾಡವಾಗಿ ಬದಲಾಗಿದೆ.
ಸತೀಶ್ ಜಾರಕಿಹೋಳಿ ಕ್ಷೇತ್ರಕ್ಕೆ ಎಂಟ್ರಿ!
ವಾಲ್ಮೀಕಿ ಸಮುದಾಯದ ನಾಯಕ ಸತೀಶ್ ಜಾರಕಿಹೊಳಿ ಸಿಎಂ ನಾಮಪತ್ರ ಸಲ್ಲಿಸುವಾಗಲೇ ಕ್ಷೇತ್ರಕ್ಕೆ ಆಗಮಿಸಿದ್ದು, ತಮ್ಮ ಸಮುದಾಯದ ನಿರ್ಣಾಯಕ ಮತಗಳು ಶ್ರೀರಾಮುಲುವತ್ತ ಹೋಗದಂತೆ ಮಾಡಲು ರಣ ತಂತ್ರ ಆರಂಭಿಸಿದ್ದಾರೆ.
ಮಂಗಳವಾರ ರಾತ್ರಿ 2 ಗಂಟೆಗೂ ಹೆಚ್ಚು ಕಾಲ ಬಾದಾಮಿಯ ಕೃಷ್ಣ ಹೆರಿಟೇಜ್ ನಲ್ಲಿ ಸತೀಶ್ ಜಾರಕಿಹೊಳಿ ಮತ್ತು ಸಿಎಂ ಸಿದ್ದರಾಮಯ್ಯ ಗುಪ್ತ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಕ್ಷೇತ್ರದಲ್ಲಿ ಬೀಡು ಬಿಟ್ಟ ಮಹಾಸೇನೆ!
ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಕ್ಕೂ ಹೆಚ್ಚು ಮಂದಿ ಕುರುಬ ಸಮುದಾಯದ ಮುಖಂಡರು ಮತ್ತು ಸದಸ್ಯರು ಸಿಎಂ ಸಿದ್ದರಾಮಯ್ಯ ಗೆಲುವಿಗಾಗಿ ಬಾದಾಮಿಯಲ್ಲಿ ಭರ್ಜರಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹತ್ತಾರು ಎತ್ತಿನ ಬಂಡಿಗಳಲ್ಲಿ ಆಗಮಿಸಿರುವ ಸಿದ್ದರಾಮಯ್ಯ ಅಭಿಮಾನಿಗಳು ಗೆಲ್ಲಲೆ ಬೇಕೆಂದು ಬೆವರು ಸುರಿಸುತ್ತಿದ್ದಾರೆ.
ನಮ್ಮ ಸಮುದಾಯಯ ಧೀಮಂತ ನಾಯಕ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಸೋಲಬಾರದು . ಬಾದಾಮಿಯಲ್ಲಿ ಗೆದ್ದು ಮತ್ತೆ ಮುಖ್ಯಮಂತ್ರಿಯಾಗಬೇಕು ಹೀಗಾಗಿ ನಾವು ಸಾವಿರಾರು ಸಂಖ್ಯೆಯಲ್ಲಿ ಬಂದು ಅವರ ಗೆಲುವಿಗಾಗಿ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.
ಜೆಡಿಎಸ್ ತಟಸ್ಥ ?
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತೀವ್ರ ಪೈಪೋಟಿ ನೀಡುವ ಹಿನ್ನೆಲೆಯಲ್ಲಿ ಬಾದಾಮಿಯಲ್ಲಿ ರಾಮುಲುಗೆ ಅನುಕೂಲ ಆಗಲು ಜೆಡಿಎಸ್ ಕ್ಷೇತ್ರದಲ್ಲಿ ಒಂದಿಷ್ಟು ಸ್ಪರ್ಧೆಯಲ್ಲಿ ತಟಸ್ಥ ಸ್ಥಿತಿಗೆ ಮುಂದಾಗಿದೆ ಎಂದು ಗುಸು ಗುಸು ಕ್ಷೇತ್ರದಲ್ಲಿ ಸುಳಿದಾಡತೊಡಗಿದೆ. ಜೆಡಿಎಸ್ ಅಭ್ಯರ್ಥಿ ಹನುಮಂತಪ್ಪ ಮಾವಿನಮರದ ನಾಮಪತ್ರ ಸಲ್ಲಿಸಿದ್ದರೂ ಪ್ರಚಾರದಲ್ಲಿ ಹೆಚ್ಚಿನ ತೀವ್ರತೆ ತೋರದೆ ಬಿಜೆಪಿಗೆ ನೆರವಾಗುವ ನಿಟ್ಟಿನಲ್ಲಿ ಸಾಗಬಹುದಾಗಿದೆ ಎಂಬ ಸುದ್ದಿ ಹೆಚ್ಚು ಕೇಳಿಬರತೊಡಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.