D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ
ಗ್ಯಾರಂಟಿ ಜತೆಗೆ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದೇವೆ
Team Udayavani, May 20, 2024, 11:12 PM IST
ಬೆಂಗಳೂರು: ರಾಜ್ಯದ ಜನರಿಗೆ ತೃಪ್ತಿದಾಯಕ ಆಡಳಿತ ನೀಡಿದ್ದೇವೆ. ಗ್ಯಾರಂಟಿ ಯೋಜನೆಗಳ ಜತೆಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕಾಂಗ್ರೆಸ್ ಸರಕಾರ ನೀಡಿದೆ. ಜನರಿಗೆ ನಮ್ಮ ಸರಕಾರದ ಬಗ್ಗೆ ತೃಪ್ತಿಯಿದೆ. ಜನರ ವಿಶ್ವಾಸವನ್ನು ಗಳಿಸಿ ಒಂದು ವರ್ಷ ಪೂರೈಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಂದ ಕಾರಣಕ್ಕೆ ಒಂದಷ್ಟು ಅಭಿವೃದ್ಧಿ ಕೆಲಸಗಳು ಬಾಕಿ ಉಳಿದಿದ್ದವು. ಇವು ಕಾರ್ಯಗತಗೊಳ್ಳಬೇಕು, ಟೆಂಡರ್‌ಗಳನ್ನು ಕರೆಯಲು ಸಜ್ಜಾಗಬೇಕಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು.
ಕಾಂಗ್ರೆಸ್‌ಗೆ ಅವಕಾಶ ಕೊಟ್ಟಿರುವ ರಾಜ್ಯದ ಜನತೆ, ನಮಗೆ ಸಹಕಾರ ನೀಡಿರುವ ಅಧಿಕಾರಿಗಳು ಹಾಗೂ ಮಾಧ್ಯಮಗಳಿಗೆ ಹೃದಯ ಪೂರ್ವಕ ವಂದನೆಗಳು. ವಿಪಕ್ಷಗಳು ನಮ್ಮ ಬಗ್ಗೆ ಟೀಕೆ ಮಾಡುತ್ತವೆ. ಅವುಗಳನ್ನು ಸ್ವೀಕರಿಸಿ ಮುನ್ನಡೆಯಬೇಕು. ಕಾಂಗ್ರೆಸ್ ಸರಕಾರ ಅಧಿಕಾರ ಬಂದ ಮೊದಲನೇ ದಿನದಿಂದಲೇ ಟೀಕೆ ಪ್ರಾರಂಭ ಮಾಡಿದರು. ಅತ್ತೆ ಸೊಸೆಗೆ ಜಗಳ ತಂದಿಟ್ಟರು, ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರೂ ಸುಮ್ಮನೆ ಇರುವುದಿಲ್ಲ ಎಂದು ಹೇಳಿದರು. ಈ ಟೀಕೆಗಳಿಗೆಲ್ಲ ನಾವು ಉತ್ತರ ಕೊಟ್ಟಿದ್ದೇವೆ. ಜನರೂ ಉತ್ತರ ಕೊಡುತ್ತಾರೆ ಎನ್ನುವ ಆತ್ಮವಿಶ್ವಾಸ ನನಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.