ಬೆಂಗಳೂರು ರಕ್ಷಿಸಿ ಬಿಜೆಪಿ ಪಾದಯಾತ್ರೆ; ತಿರುಗೇಟಿಗೆ ಕೈ ಸಜ್ಜು!
Team Udayavani, Mar 2, 2018, 11:48 AM IST
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗೂಂಡಾಗಿರಿ, ಭ್ರಷ್ಟಾಚಾರದಿಂದ ಬೆಂಗಳೂರು ರಕ್ಷಿಸಿ ಎಂಬ ಘೋಷವಾಕ್ಯದೊಂದಿಗೆ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆ ಶುಕ್ರವಾರ ಆರಂಭವಾಗಿದ್ದು, ಕಾಂಗ್ರೆಸ್ ಕೂಡ ಪ್ರತಿಭಟನೆಗೆ ಇಳಿದಿದ್ದು ತಿರುಗೇಟು ನೀಡಲು ಸಜ್ಜಾಗಿದೆ.
ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನ ಮತ್ತು ಗವಿ ಗಂಗಾಧರೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ಬಳಿಕ ದೇಗುಲದ ಬಳಿಯಿರುವ ಕೆಂಪೇಗೌಡರ ಪ್ರತಿಮೆಗೆ ಗೌರವ ಸಲ್ಲಿಸಿ ಪಾದಯಾತ್ರೆ ಆರಂಭಿಸಲಾಯಿತು.
ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್‌ಡೇಕರ್, ಸಚಿವ ಅನಂತ್‌ಕುಮಾರ್ ಬಿಜೆಪಿ ಶಾಸಕರು ,ಮುಖಂಡರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಬಿಜೆಪಿ ಪಾದಯಾತ್ರೆ ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಾ. 2ರಿಂದ 15ರವರೆಗೆ ನಡೆಯಲಿದೆ. ಮಾ. 15ರಂದು ಸಮಾರೋಪ ನಡೆಯಲಿದ್ದು, ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಆಗಮಿಸಲಿದ್ದಾರೆ.
ಕಾಂಗ್ರೆಸ್ ತಿರುಗೇಟು!
ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಲು ಮುಂದಾಗಿರುವ ಕಾಂಗ್ರೆಸ್ ಪತ್ರಿಕಾಗೋಷ್ಠಗಳನ್ನು ನಡೆಸುವ ಮೂಲಕ ತಿರುಗೇಟು ನೀಡಲು ಸಜ್ಜಾಗಿದೆ. ಇಂದು ಸಂಜೆ ಸಚಿವ ಕೆ.ಜೆ.ಜಾರ್ಜ್ ಸುದ್ದಿಗೋಷ್ಠಿ ನಡೆಸಲ್ಲಿದ್ದು, ನಾಳೆ ಸಚಿವರಾದ ಯು.ಟಿ.ಖಾದರ್ ಮತ್ತು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಅವಧಿಯಲ್ಲಿ ನಡೆದ ಹಗರಣಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ.
ಪ್ರತಿಭಟನೆ;ಪೊಲೀಸರ ತಡೆ
ಬಿಜೆಪಿ ಪಾದಯಾತ್ರೆ ವಿರುದ್ಧ ಹನುಮಂತನಗರದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದು ಅವರನ್ನು ಪೊಲೀಸರು ತಡೆದಿದ್ದಾರೆ.
ಜೆಡಿಎಸ್‌ನಿಂದಲೂ ಪಾದಯಾತ್ರೆ
ಬೆಂಗಳೂರು ನಗರಕ್ಕೆ ಜೆಡಿಎಸ್ ಕೊಡುಗೆಗಳು ಎಂಬ ಹೆಸರಿನಲ್ಲಿ ಬಸವನಗುಡಿ ದೊಡ್ಡಗಣಪತಿ ದೇವಾಲಯದಿಂದ ಜೆಡಿಎಸ್ 10 ದಿನಗಳ ಕಾಲ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಮಾರ್ಚ್ 6 ರಿಂದ 16 ರ ವರೆಗೆ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.