ಲಾಕ್ ಡೌನ್ ಸಮಯದಲ್ಲಿ ಸಣ್ಣ, ಮಧ್ಯಮ ಕೈಗಾರಿಕೆಗಳನ್ನು ಉಳಿಸಿ: ಕುಮಾರಸ್ವಾಮಿ ಮನವಿ
Team Udayavani, Jul 17, 2020, 1:58 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಮತ್ತು ಲಾಕ್ ಡೌನ್ ಕಾರಣದಿಂದ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಬದುಕುವುದೇ ಕಷ್ಟವಾಗಿದೆ. ಇವರಿಗೆ ರಾಜ್ಯ ಸರಕಾರ ನೆರವು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. ಈ ಕೈಗಾರಿಕೆಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ. ರಾಜ್ಯ ಸರ್ಕಾರ ಈ ಸಣ್ಣ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ವಿನಾಯಿತಿ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ರಾಜ್ಯದಲ್ಲಿ ಸುಮಾರು ಆರು ಲಕ್ಷಕ್ಕೂ ಹೆಚ್ಚುಮಂದಿ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರು ನೋಂದಾಯಿಸಿಕೊಂಡಿದ್ದು, ಇದರಲ್ಲಿ ಶೇಕಡ ಅರ್ಧಕ್ಕಿಂತ ಹೆಚ್ಚು ಬೆಂಗಳೂರಿನ ಉದ್ಯಮಿಗಳು. ರಾಜ್ಯ ಸರಕಾರದ ಬಿಡ್ ನಲ್ಲಿ ಭಾಗವಹಿಸಲು ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರಿಗೆ ಮುಂಗಡ ಹಣ ಪಾವತಿ ಕಡ್ಡಾಯ ಮಾಡಿರುವುದನ್ನು ರದ್ದುಗೊಳಿಸಬೇಕು ಎಂದು ಎಚ್ ಡಿಕೆ ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರದ ರೀತಿಯಲ್ಲಿ ರಾಜ್ಯ ಸರ್ಕಾರವು ಸಣ್ಣ, ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ ಈ ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ. ಇವರೊಂದಿಗೆ ಸುಮಾರು 40 ಲಕ್ಷಕ್ಕೂ ಹೆಚ್ಚು ಉದ್ಯೋಗಸ್ಥರಿದ್ದಾರೆ ರಾಜ್ಯ ಸರ್ಕಾರ ತಡಮಾಡದೆ ತಕ್ಷಣವೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಕೊರೋನಾ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ.
— H D Kumaraswamy (@hd_kumaraswamy) July 17, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.