ಅರಣ್ಯ ಮತ್ತು ಜೀವ ವೈವಿಧ್ಯತೆಯನ್ನು ಉಳಿಸಿ: ಯದುವೀರ್ ಒಡೆಯರ್
ಅರಣ್ಯ ಅಭಿವೃದ್ದಿ ನಿಗಮದ ಸುವರ್ಣ ಮಹೋತ್ಸವದ ಕ್ರೀಡಾಕೂಟಕ್ಕೆ ಚಾಲನೆ
Team Udayavani, Jun 15, 2022, 1:03 PM IST
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿರುವ ಅರಣ್ಯ, ದೇಶದ ಈಶಾನ್ಯ ರಾಜ್ಯವನ್ನು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಅದೇ ರೀತಿ ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವಂತಹ ಜೀವ ವೈವಿಧ್ಯ ಅಮೇಜಾನ್ ಕಾಡುಗಳಲ್ಲಿ ಮಾತ್ರ ಕಾಣಬಹುದು. ಇಂತಹ ವೈವಿಧ್ಯಮಯ ಅರಣ್ಯ ಹಾಗು ಜೀವವೈವಿಧ್ಯತೆಯನ್ನು ಉಳಿಸಿ ಮುಂದಿನ ಪೀಳಿಗೆಗೂ ಉಳಿಸುವಂತಹ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಮೈಸೂರಿನ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
“ಕರ್ನಾಟಕ ಶ್ರೀಗಂಧದ ಬೀಡು. ಕರ್ನಾಟಕ ರಾಜ್ಯದಲ್ಲಿರುವ ಅರಣ್ಯ ಸಂಪತ್ತು ದೇಶದ ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿದರೆ ಬೇರೆ ಯಾವ ರಾಜ್ಯಗಳಲ್ಲೂ ಕಂಡುಬರುವುದಿಲ್ಲ. ಅದೇರೀತಿ ನಮ್ಮ ಪಶ್ಚಿಮ ಘಟ್ಟದದಲ್ಲಿ ಕಂಡುಬರುವ ಜೀವವೈವಿಧ್ಯ ಅಮೇಜಾನ್ ಅರಣ್ಯದಲ್ಲಿ ಮಾತ್ರ ಕಾಣಬಹುದು. ಇಂತಹ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಅರಣ್ಯ ಅಭಿವೃದ್ದಿ ನಿಗಮ ವಿಶೇಷ ಕೊಡುಗೆಯನ್ನು ನೀಡುತ್ತಿದೆ. ಒಂದು ನಿಗಮ 50 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸುವುದು ಸಾಮಾನ್ಯ ವಿಷಯವಲ್ಲ. ರಾಜ್ಯದಲ್ಲಿರುವ ಈ ಸಂಪತ್ತನ್ನ ಉಳಿಸಿ ಬೆಳೆಸುವುದು ಹಾಗೂ ಮುಂದಿನ ಪೀಳಿಗೆಗೆ ಸಿಗುವಂತೆ ಮಾಡುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಬೇಕಾಗಿದೆ. ಪರಿಸರ ಉಳಿಸುವುದು ಹಾಗೂ ಬೆಳೆಸುವುದು ನಮ್ಮ ಹಾಗೂ ಜನಸಾಮಾನ್ಯರ ಆದ್ಯ ಕರ್ತವ್ಯವಾಗಬೇಕು” ಎಂದು ಹೇಳಿದರು.
ಕರ್ನಾಟಕ ಅರಣ್ಯ ನಿಗಮದ ಅಧ್ಯಕ್ಷರಾದ ಶ್ರೀಮತಿ ತಾರಾ ಅನುರಾಧ ಮಾತನಾಡಿ, ಅರಣ್ಯಗಳ ಸಂರಕ್ಷಣೆಯ ನಿಟ್ಟಿನಲ್ಲಿ ಪ್ರಾರಂಭಿಸಲಾಗಿರುವ ನಿಗಮ ಕಳೆದ 5 ದಶಕಗಳಲ್ಲಿ ಸಾವಿರಾರು ಹೆಕ್ಟೇರ್ ಅರಣ್ಯ ಹಾಳಾಗುವುದನ್ನು ತಪ್ಪಿಸಿದೆ. ಇದೇ ವೇಳೆ, ಸಾವಿರಾರು ಉದ್ಯೋಗಾವಕಾಶವನ್ನು ಸೃಷ್ಟಿಸಿದೆ. ಅರಣ್ಯಗಳ ಒತ್ತುವರಿ ತಡೆಯಲು ಇರುವ ನಿಗಮದ ತನ್ನ ಸುವರ್ಣ ಮಹೋತ್ಸವ ಆಚರಿಸುತ್ತಿದ್ದು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅರಣ್ಯ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ರಾಧಾದೇವಿ ಐ.ಎಫ್.ಎಸ್, ಉಪಾಧ್ಯಕ್ಷರಾದ ರೇವಣ್ಣಪ್ಪ, ನಿಗಮದ ಅಧಿಕಾರಿಗಳು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ನೌಕರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.