ಎಸ್ಸಿ, ಎಸ್ಟಿ ಕಾಯ್ದೆ ದುರ್ಬಳಕೆ ಸಲ್ಲದು: ಹೈಕೋರ್ಟ್
Team Udayavani, Nov 4, 2021, 5:18 AM IST
ಬೆಂಗಳೂರು: ಪ್ರತಿಯೊಂದು ಅಪರಾಧ ಪ್ರಕರಣದಲ್ಲೂ ಸಂತ್ರಸ್ತರು ಎಸ್ಸಿ, ಎಸ್ಟಿ ಜನಾಂಗಕ್ಕೆ ಸೇರಿದವರು ಎಂಬ ಕಾರಣವೊಂದರಿಂದಲೇ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ನಿಯಮಗಳನ್ನು ಅನ್ವಯಿಸಲಾಗದು ಎಂದು ಹೈಕೋರ್ಟ್ ಹೇಳಿದೆ.
ತಮ್ಮ ವಿರುದ್ಧದ ದೂರು ರದ್ದುಪಡಿಸುವಂತೆ ಕೋರಿ ನಗರದ ರಾಜಾಜಿನಗರ ನಿವಾಸಿಯೊಬ್ಬರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ರೀತಿ ಅಭಿಪ್ರಾಯಪಟ್ಟಿದೆ.
ಪ್ರತಿಯೊಂದು ಅಪರಾಧ ಪ್ರಕರಣದಲ್ಲಿ ಸಂತ್ರಸ್ತರು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಯುದಾಯಕ್ಕೆ ಸೇರಿದವರಾದರೆ, ಆಗ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3 ಅನ್ನು ವಿಧಿಸಲಾಗದು. ಅಪರಾಧದ ಹಿಂದಿನ ಉದ್ದೇಶವು ಜಾತಿ ನಿಂದನೆಯಾಗಿರದಿದ್ದರೆ ಎಸ್ಸಿ, ಎಸ್ಸಿ ಕಾಯ್ದೆಯ ನಿಬಂಧನೆಗಳನ್ನು ಹೇರದೆ, ಐಪಿಸಿ ಸೆಕ್ಷನ್‌ಗಳಡಿ ಪರಿಗಣಿಸುವುದು ಸೂಕ್ತ ಎಂದು ನ್ಯಾಯಪೀಠ ಹೇಳಿದೆ.
ಎಸ್ಸಿ, ಎಸ್ಟಿ ಕಾಯ್ದೆಯ ನಿಜವಾದ ಆಶಯ ದೌರ್ಜನ್ಯ ಮತ್ತು ತಾರತಮ್ಯದಿಂದ ಆ ಸಮುದಾಯವನ್ನು ರಕ್ಷಿಸುವುದಾಗಿದ್ದರೂ ಸಹ, ಅದನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶ ನೀಡಬಾರದು. ಹಾಗಾಗಿ ಇಂತಹ ಪ್ರಕರಣಗಳಲ್ಲಿ ಆರೋಪಪಟ್ಟಿಗಳನ್ನು ಸಲ್ಲಿಸುವಾಗ ವಿವೇಕದ ನಿರ್ಧಾರವನ್ನು ಕೈಗೊಳ್ಳುವ ಹೊಣೆಗಾರಿಕೆ ತನಿಖಾಧಿಕಾರಿಗಳ ಮೇಲಿರುತ್ತದೆ ಎಂದು ನ್ಯಾಯಪೀಠ ಹೇಳಿದೆ.
ಇದನ್ನೂ ಓದಿ:ವಿದೇಶಕ್ಕೆ ಕಳ್ಳಸಾಗಣೆಯಾಗುತ್ತಿದ್ದ ವಿಗ್ರಹ ವಶ
ಪ್ರಕರಣದ ಹಿನ್ನೆಲೆ
ಶ್ರೀಸಂಗಮ್ ಪ್ರಿಯ ಅವರ ದೂರು ಆಧರಿಸಿ ಬೆಂಗಳೂರಿನ ಹಲಸೂರು ಪೊಲೀಸರು ಅರ್ಜಿದಾರರ ವಿರುದ್ಧ ಎಸ್ಸಿ ಎಸ್ಟಿ ಕಾಯ್ದೆ ಸೆಕ್ಷನ 3(1)(ಎಫ್), 3(1)(ಜಿ) ಮತ್ತು ಐಪಿಸಿ ಸೆಕ್ಷನ್ 172 ಮತ್ತು 173 ರಡಿ ಎಫ್‌ಐಆರ್ ದಾಖಲಿಸಿದ್ದರು. ಇಬ್ಬರ ನಡುವೆ ಆಸ್ತಿ ವಿವಾದ ಏರ್ಪಟ್ಟಿತ್ತು. ಆದೇ ಕಾರಣಕ್ಕಾಗಿ ಶ್ರೀ ಸಂಗಮ್ ಪ್ರಿಯ ತಮ್ಮ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆ ದುರ್ಬಳಕೆ ಮಾಡಿಕೊಂಡು ಸುಳ್ಳು ಕೇಸು ದಾಖಲಿಸಿದ್ದಾರೆ. ಹಾಗಾಗಿ ಅದನ್ನು ರದ್ದುಗೊಳಿಸಬೇಕು ಎಂದು ಹೈಕೋರ್ಟ್ ಮೊರೆ ಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.