ಕಾಂಗ್ರೆಸ್‌ನಿಂದ ದಲಿತರ ವಿದ್ಯಾರ್ಥಿವೇತನ ಸ್ಥಗಿತದ ಬಗ್ಗೆ ಅಪಪ್ರಚಾರ: ನಾರಾಯಣಸ್ವಾಮಿ ಖಂಡನೆ
Team Udayavani, Jul 20, 2022, 11:47 AM IST
ಬೆಂಗಳೂರು: ಎಸ್‍ಸಿ, ಎಸ್‍ಟಿಗಳಿಗೆ ವಿದ್ಯಾರ್ಥಿವೇತನವನ್ನು ತಡೆಹಿಡಿದಿಲ್ಲ. ಈ ಕುರಿತಂತೆ ಯಾವುದೇ ಸರಕಾರಿ ಆದೇಶ ಇಲ್ಲ. ಇದನ್ನು ಯಾರೂ ನಂಬಬಾರದು. ಸ್ಕಾಲರ್‌ಶಿಪ್ ತಡೆ ಹಿಡಿಯುವ ಕಾರ್ಯ ಅಥವಾ ದಲಿತರಿಗೆ ಕೊಡುವ ಸೌಲಭ್ಯಗಳನ್ನು ಸ್ಥಗಿತಗೊಳಿಸುವ ಕಾರ್ಯವನ್ನು ಬಿಜೆಪಿ ಸರಕಾರ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಮತ್ತು ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2020ರ ನವೆಂಬರ್ 26ರ ಪತ್ರಿಕೆಯೊಂದರ ದೆಹಲಿ ಆವೃತ್ತಿಯಲ್ಲಿ ಬಂದ ವರದಿಯನ್ನು ಆಧರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ತಪ್ಪು ಮಾಹಿತಿಯನ್ನು ಒಳಗೊಂಡಿದೆ. ಈ ವರದಿ ಸತ್ಯಾಂಶದಿಂದ ಕೂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರದಲ್ಲಿ ತಪ್ಪು ಸಂದೇಶಗಳನ್ನು ಕಾಂಗ್ರೆಸ್ ಪಕ್ಷದ ಕುಮ್ಮಕ್ಕಿನಿಂದ ರವಾನಿಸಲಾಗುತ್ತಿದೆ. ಆದರೆ, ಇದು ಪುರಾವೆ ಇಲ್ಲದ ವಿಷಯ. ಸ್ಪಷ್ಟ ಮಾಹಿತಿ ಇದ್ದರೂ ಕೆಲವರು ರಾಜಕೀಯ ದುರುದ್ದೇಶದಿಂದ ಅಪಪ್ರಚಾರದಲ್ಲಿ ತೊಡಗಿದ್ದು, ಇದು ಖಂಡನಾರ್ಹ ಎಂದು ಹೇಳಿದರು.
66 ಲಕ್ಷ ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ಸ್ಕಾಲರ್‌ಶಿಪ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ತಪ್ಪು ಮಾಹಿತಿ ಹರಡಲಾಗುತ್ತಿದೆ. ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರಗಳು ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳಿಗಾಗಿ ವಿಶೇಷ ಅನುದಾನ ನೀಡುತ್ತಿವೆ. ಅಲ್ಲದೆ, ಈ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ರಾಜ್ಯದಲ್ಲಿ ಎಸ್‍ಸಿ, ಎಸ್‍ಟಿ ಸಮುದಾಯದ ಅಭಿವೃದ್ಧಿಗೆ 27 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದರು.
ಇದನ್ನೂ ಓದಿ: ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಕಾರು
ಎಸ್‍ಟಿ ಸಮುದಾಯಕ್ಕೆ ವಿಶೇಷ ಪ್ರಾತಿನಿಧ್ಯ ಕೊಡಲು ಕರ್ನಾಟಕದಲ್ಲಿ ಪ್ರತ್ಯೇಕ ಇಲಾಖೆಯನ್ನು ರಚಿಸಲಾಗಿದೆ. ಕೇಂದ್ರದಲ್ಲಿ ಸಚಿವಸಂಪುಟ ಪುನಾರ್‌ರಚನೆ ವೇಳೆ ಈ ಸಮುದಾಯಗಳಿಗೆ ಆದ್ಯತೆ ಕೊಡಲಾಗಿದೆ. ಬಿಜೆಪಿ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ. ಕಾಂಗ್ರೆಸ್‍ನವರಿಗೆ ಚಲಾವಣೆಯಲ್ಲಿರಲು ಯಾವುದೇ ವಿಷಯ ಇಲ್ಲದ ಕಾರಣ ಇಂಥ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಎಸ್ಸಿ- ಎಸ್ಟಿ ಸಮುದಾಯಗಳ ವಿಚಾರದಲ್ಲಿ ಹಿಂದಿನ ಕಾಂಗ್ರೆಸ್ ಸರಕಾರಗಳು ಕಣ್ಣೊರೆಸುವ ತಂತ್ರವನ್ನಷ್ಟೇ ಮಾಡಿದ್ದವು. ಆದರೆ, ಅವರ ಸರ್ವತೋಮುಖ ಅಭಿವೃದ್ಧಿಗೆ ನೈಜ ಕಳಕಳಿಯಿಂದ ವಿವಿಧ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಜಾರಿಗೊಳಿಸುತ್ತಿವೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.