ಪರಿಶಿಷ್ಟ ವಿದ್ಯಾರ್ಥಿಗಳ “ಡ್ರಾಪ್‌ಔಟ್’ ಪತ್ತೆಗೆ ಸಮಿತಿ
Team Udayavani, Dec 8, 2017, 12:30 PM IST
ಬೆಂಗಳೂರು: ರಾಜ್ಯದಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು “ಡ್ರಾಪ್‌ಔಟ್’ (ಶಿಕ್ಷಣ ಮೊಟಕು) ಆಗುತ್ತಿರುವುದಕ್ಕೆ ಕಾರಣಗಳನ್ನು ಪತ್ತೆ ಹಚ್ಚಲು ವಿವಿಧ ಇಲಾಖೆಗಳನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸುವಂತೆ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಯಾವ ಹಂತದಲ್ಲಿ “ಡ್ರಾಪ್‌ಔಟ್’ ಆಗುತ್ತಿದ್ದಾರೆ. ಅದಕ್ಕೆ ಕಾರಣಗಳೇನು ಅನ್ನುವುದರ ಬಗ್ಗೆ ಸಮಗ್ರ ಅಧ್ಯಯನ ನಡೆಸಲು ಉನ್ನತ ಶಿಕ್ಷಣ, ತಾಂತ್ರಿಕ ಶಿಕ್ಷಣ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ನ್ನೊಳಗೊಂಡ ಒಂದು ಉನ್ನತ ಮಟ್ಟದ ಸಮಿತಿ ರಚಿಸಿ, ಅದರ ವರದಿ ಆಧರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಮಂಡಲದ ಸಮಿತಿ ಹೇಳಿದೆ. ಅಲ್ಲದೇ ವಸತಿ ಶಾಲೆಗಳಲ್ಲಿ ಎಸ್‌ಎಸ್ ಎಲ್‌ಸಿ ಮತ್ತು ಪಿಯು ವ್ಯಾಸಂಗ ಮಾಡುತ್ತಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಅನುತ್ತೀರ್ಣರಾದ ಸಂದರ್ಭದಲ್ಲಿ ವಿದ್ಯಾಭ್ಯಾಸ ಮೊಟಕುಗೊಳಿಸುತ್ತಿರುವುದರಿಂದ ಅಂತಹ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ಮುಂದುವರಿಸಲು ಅನುಕೂಲವಾಗುವಂತೆ ಊಟ-ವಸತಿ ಹಾಗೂ ವಿಶೇಷ ಬೋಧನೆ ನೀಡಲು ಪ್ರತ್ಯೇಕವಾಗಿ
ಯೋಜನೆಯೊಂದನ್ನು ರೂಪಿಸುವಂತೆಯೂ ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಎಸ್ಸಿ, ಎಸ್ಟಿ ವರ್ಗದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ 640 ವಸತಿ ಶಾಲೆಗಳು, 14 ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಒಟ್ಟು 1.02 ಲಕ್ಷ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸರ್ಕಾರ ಎಸ್ಸಿ, ಎಸ್ಟಿ ಮಕ್ಕಳ ಶಿಕ್ಷಣಕ್ಕೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅದಾಗ್ಯೂ ಮಕ್ಕಳು ಡ್ರಾಪ್‌ಔಟ್ ಆಗುತ್ತಿದ್ದಾರೆ. ಪದವಿ ಪೂರ್ವ ಶಿಕ್ಷಣ ಹಂತದಲ್ಲಿ ಈ ಪ್ರಮಾಣ ಹೆಚ್ಚಾಗುತ್ತಿದೆ ಅನ್ನುವುದನ್ನು ಗಮನಿಸಿರುವ ಸಮಿತಿಯು ಡ್ರಾಪ್‌ಔಟ್ ಪತ್ತೆಗೆ ಉನ್ನತ ಮಟ್ಟದ ಸಮಿತಿ ರಚಿಸುವಂತೆ ಶಿಫಾರಸು
ಮಾಡಿದೆ. ಒಟ್ಟು ವಸತಿ ಶಾಲೆ ಮತ್ತು ಕಾಲೇಜುಗಳ ಪೈಕಿ ಎಸ್ಸಿ ವಸತಿ ಶಾಲೆಗಳಲ್ಲಿ 269 ಮುರಾರ್ಜಿ ದೇಸಾಯಿ, 10 ಅಟಲ್‌ಬಿಹಾರಿ ವಾಜಪೇಯಿ, 110 ಕಿತ್ತೂರು ರಾಣಿ ಚೆನ್ನಮ್ಮ, 10 ಅಂಬೇಡ್ಕರ್ ವಸತಿ ಶಾಲೆಗಳು ಮತ್ತು 12 ಪದವಿ ಪೂರ್ವ
ವಿಜ್ಞಾನ ವಸತಿ ಕಾಲೇಜುಗಳಿವೆ. ಅದೇ ರೀತಿ ಎಸ್ಟಿ ವಸತಿ ಶಾಲೆಗಳಲ್ಲಿ 69 ಮುರಾರ್ಜಿ ದೇಸಾಯಿ, 1 ಅಟಲ್ ಬಿಹಾರಿ ವಾಜಪೇಯಿ,
46 ಕಿತ್ತೂರು ರಾಣಿ ಚೆನ್ನಮ್ಮ, 25 ಅಂಬೇಡ್ಕರ್, 2 ಪದವಿ ವಸತಿ ಶಾಲೆಗಳು, 10 ಏಕಲವ್ಯ ಮಾದರಿ ವಸತಿ ಶಾಲೆಗಳಿದ್ದು, ಈ ಶಾಲೆಗಳಲ್ಲಿ ಮೆರಿಟ್ ಆಧಾರದಲ್ಲಿ ಆಯಾ ತಾಲೂಕಿನ ಮಕ್ಕಳಿಗೆ ಆದ್ಯತೆ ನೀಡಬೇಕೆಂಬ ಮಾನ ದಂಡವನ್ನು ಕಡ್ಡಾಯವಾಗಿ ಪಾಲಿಸುವಂತೆ ವರದಿಯಲ್ಲಿ ಹೇಳಲಾಗಿದೆ.
ವಿಜ್ಞಾನ, ವಾಣಿಜ್ಯ ಕೋರ್ಸ್‌ಗೆ ಒತ್ತು ಕೊಡಿ
ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಮುಗಿಸಿದ ಮೇಲೆ ಹೆಚ್ಚಾಗಿ ಕಲಾ ವಿಷಯಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಕೇವಲ ಬಿ.ಎ. ಓದುವುದರಿಂದ ಖಾಸಗಿ ಕಂಪೆನಿಗಳಲ್ಲಿ ಉದ್ಯೋಗ ಸಿಗುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ವಿಜ್ಞಾನ ಮತ್ತು ವಾಣಿಜ್ಯ ಕೋರ್ಸ್‌ಗಳ ವ್ಯಾಸಂಗ ಮಾಡಲು ಸಮಾಜ ಕಲ್ಯಾಣ ಇಲಾಖೆಯಲ್ಲಿ ವಸತಿ ಶಿಕ್ಷಣ ಸಂಸ್ಥೆಗಳಿಗೆಂದು ಮೀಸಲಿಟ್ಟಿರುವ 26 ಸಾವಿರ ಕೋಟಿ ರೂ. ಅನುದಾನದಲ್ಲಿ ಆದ್ಯತೆ ಮೇರೆಗೆ ಬಳಸಿಕೊಂಡು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣದ ಹಂತದಲ್ಲಿರುವಾಗಲೇ ವಿಜ್ಞಾನ, ವಾಣಿಜ್ಯ ಹಾಗೂ ಇಂಗ್ಲಿಷ್ ವಿಷಯಗಳ ನುರಿತ ಪ್ರಾಧ್ಯಾಪಕರನ್ನು ನೇಮಿಸಿಕೊಂಡು ಆ ವಿಷಯಗಳ ಕಲಿಕೆಗೆ ಹೆಚ್ಚು ಒತ್ತು ಕೊಡಬೇಕು. ಜೊತೆಗೆ ಎಲ್ಲ ತಾಲೂಕುಗಳಲ್ಲಿ ವಿಜ್ಞಾನ ಮತ್ತು ವಾಣಿಜ್ಯ ಕೋರ್ಸ್‌ನ ಕಾಲೇಜುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ತೆರೆಯಬೇಕು ಎಂದು ಎಸ್ಸಿ, ಎಸ್ಟಿ ಕಲ್ಯಾಣ ಸಮಿತಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.