ಬೇಡಿಕೆ ಈಡೇರಿಸದಿದ್ದರೆ ಶಾಲಾ-ಕಾಲೇಜು ಬಂದ್ ಎಚ್ಚರಿಕೆ
Team Udayavani, Aug 11, 2017, 11:22 AM IST
ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿ, ಖಾಸಗಿ ಪಾಲಿಟೆಕ್ನಿಕ್ಗಳನ್ನು ವೇತನಾನುದಾನಕ್ಕೆ ಒಳಪಡಿಸುವುದು, ಕಾಲ್ಪನಿಕ ವೇತನ ಭಡ್ತಿ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಸೆಪ್ಟಂಬರ್ ಮೂರನೇ ವಾರದಲ್ಲಿ ರಾಜ್ಯಾದ್ಯಂತ ಶಾಲಾ-ಕಾಲೇಜು ಬಂದ್ ಮಾಡಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಹಾಗೂ ನೌಕರರ ಒಕ್ಕೂಟ ನಿರ್ಧರಿಸಿದೆ.
ಪತ್ರಿಕಾಗೋಷ್ಠಿ ನಡೆಸಿದ ವಿಧಾನಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ ಹಾಗೂ ಸದಸ್ಯರಾದ ಬಸವರಾಜ ಹೊರಟ್ಟಿ, ಪುಟ್ಟಣ್ಣ, ಸುಮಾರು 22 ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಹೀಗಾಗಿ, ಶಾಲಾ-ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸುವುದು. ಬೇಡಿಕೆಗಳ ಈಡೇರಿಕೆಗೆ ಸರಕಾರಕ್ಕೆ ಒಂದು ವಾರ ಗಡುವು ನೀಡಿದ್ದು, ಅಷ್ಟರಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಸಭೆ ನಡೆಸಿ ಸೆ. 20 ಅಥವಾ 21ರಂದು ಶಾಲಾ-ಕಾಲೇಜು ಬಂದ್ ಸಹಿತ ಅನಿರ್ದಿಷ್ಟಾವಧಿ ಮುಷ್ಕರ ನಡೆಸಬೇಕಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.