ಕೊಡಗಿನಲ್ಲಿ ಇಂದಿನಿಂದ ಶಾಲಾ-ಕಾಲೇಜು ಆರಂಭ
Team Udayavani, Aug 16, 2019, 3:00 AM IST
ಮಡಿಕೇರಿ/ಬೆಳಗಾವಿ: ಮಹಾಮಳೆಯ ಪರಿಣಾಮ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ಕೊಡಗು ಜಿಲ್ಲೆಯಲ್ಲಿ ಮಳೆ ಕೊಂಚ ಬಿಡುವು ನೀಡಿದೆ. ಹೀಗಾಗಿ ಶುಕ್ರವಾರದಿಂದ ಎಲ್ಲ ಶಾಲಾ, ಕಾಲೇಜುಗಳು ಹಾಗೂ ಅಂಗನವಾಡಿಗಳು ಪುನಾರಂಭಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಆದರೆ ಮಳೆಹಾನಿ ಸಂತ್ರಸ್ತರು ಆಶ್ರಯ ಪಡೆದಿರುವ ಶಾಲಾ, ಕಾಲೇಜುಗಳು ಹಾಗೂ ಅಂಗನವಾಡಿಗಳ ವಿದ್ಯಾರ್ಥಿಗಳಿಗೆ ರಜೆ ಇರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾಡಳಿತದ ವತಿಯಿಂದ ಪರಿಹಾರ ಕಾರ್ಯಗಳು ನಡೆಯುತ್ತಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಿಹಾರ ಕೇಂದ್ರ ಮತ್ತು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಲ್ಲಿ ಧೈರ್ಯ ತುಂಬುತ್ತಿದ್ದು, ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.
ಆರು ಶವಗಳಿಗಾಗಿ ಶೋಧ: ವಿರಾಜಪೇಟೆಯ ತೋರ ಗ್ರಾಮದಲ್ಲಿ ಆ. 9ರಂದು ಗುಡ್ಡ ಕುಸಿದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣ್ಣಿನಡಿ ಸಿಲುಕಿಕೊಂಡಿರುವ ಆರು ಮೃತದೇಹಗಳ ಶೋಧ ಕಾರ್ಯ ಚುರುಕುಗೊಂಡಿದೆ.
ರಜೆ ಮುಂದುವರಿಕೆ: ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರಿಹಾರ ಕೇಂದ್ರ ಗಳಾಗಿ ಬಳಕೆಯಾಗುತ್ತಿರುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ಆ.16 ರಿಂದ 20ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಎಸ್. ಬಿ. ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.