ಶಾಲಾರಂಭ ನಿರ್ಧಾರ ನ. 6ರಂದು?
Team Udayavani, Nov 3, 2020, 6:00 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಆರಂಭದ ಕುರಿತು ನ. 6ರಂದು ಸರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಶಾಲೆ-ಕಾಲೇಜು ಆರಂಭ ಸಂಬಂಧ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ನ. 4ರಿಂದ 6ರ ವರೆಗೆ ಮೂರು ದಿನ ಅಧಿಕಾರಿಗಳು, ಶಿಕ್ಷಣ ತಜ್ಞರು, ಜನಪ್ರತಿನಿಧಿಗಳ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯ ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ನ. 6ರಂದು ಶಾಲಾರಂಭಕ್ಕೆ ಸಂಬಂಧಿಸಿ ದಂತೆ ಸರಕಾರದಿಂದ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ದೀರ್ಘ ವಿರಾಮದ ಬಳಿಕ ಶಾಲೆಗೆ ಹಾಜರಾದ ಶಿಕ್ಷಕರು
ದೀರ್ಘ ವಿರಾಮದ ಬಳಿಕ ಶಿಕ್ಷಕರು ಸೋಮವಾರದಿಂದ ಶಾಲೆಗೆ ಹಾಜರಾಗಿದ್ದಾರೆ. ವಿದ್ಯಾಗಮ ಪ್ರಗತಿ ಪರಿಶೀಲನೆ, ತರಗತಿ ಆರಂಭವಾದ ಬಳಿಕ ಮಾಡಬೇಕಾದ ತುರ್ತು ಕಾರ್ಯಗಳ ಸಹಿತ ವಿದ್ಯಾರ್ಥಿಗಳ ಕಲಿಕೆಯ ನಿರಂತರತೆಗೆ ಏನೇನು ಮಾಡ ಬಹುದು ಎಂಬುದರ ಕಾರ್ಯಗಳನ್ನು ಆರಂಭಿಸಿದ್ದಾರೆ ಎಂದು ಸಾ. ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕಿ ಮಮತಾ ವಿ. ನಾಯಕ್ ಮಾಹಿತಿ ನೀಡಿದ್ದಾರೆ.
ಶಾಲೆಗಳಿಗೆ ಮಕ್ಕಳು ಬರುವಂತಿಲ್ಲ ಮತ್ತು ಮಕ್ಕಳನ್ನು ಶಾಲೆಗೆ ಕರೆಯುವಂತಿಲ್ಲ. ಆದರೆ ಶಾಲಾ ಶೈಕ್ಷಣಿಕ ಚಟು ವಟಿಕೆಗಳನ್ನು ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಶಿಕ್ಷಕರು ಏನೇನು ಮಾಡಬೇಕು ಎಂಬ ಬಗ್ಗೆ ವಿವರವಾದ ಮಾಹಿತಿಯನ್ನು ಈಗಾಗಲೇ ಮುಖ್ಯಶಿಕ್ಷಕರ ಮೂಲಕ ಶಿಕ್ಷಕರಿಗೆ ತಲುಪಿಸಿ ದ್ದೇವೆ. ಕೊರೊನಾ ತಡೆ ಕಾರ್ಯದಲ್ಲಿರುವ ಶಿಕ್ಷಕರನ್ನು ಹೊರತುಪಡಿಸಿ ಉಳಿದ ಶಿಕ್ಷಕರು ಶಾಲೆಗೆ ಹಾಜರಾಗಿದ್ದಾರೆ ಎಂದು ಅವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್‌ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.