ಶಾಲಾ ಶುಲ್ಕ ಸಂಗ್ರಹ ನಿರ್ಬಂಧ ಆದೇಶ ರದ್ದು ಕೋರಿ ಅರ್ಜಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್
Team Udayavani, Aug 28, 2020, 1:00 AM IST
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರಿಂದ ಶಾಲಾ ಪ್ರವೇಶ ಶುಲ್ಕ ಸ್ವೀಕರಿಸಬಾರದೆಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ಕರ್ನಾಟಕ ಖಾಸಗಿ ಶಾಲೆಗಳ ಸಮಿತಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.
ಅರ್ಜಿದಾರರ ಪರ ನ್ಯಾಯವಾದಿ ಎಂ. ಪಿ. ಶ್ರೀಕಾಂತ್ ವಾದ ಮಂಡಿಸಿ, 2020-21ನೇ ಸಾಲಿನಲ್ಲಿ ಶುಲ್ಕ ಸಂಗ್ರಹಕ್ಕೆ ಅನುಮತಿ ಕೋರಿ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಂದ ಕನಿಷ್ಠ ಶೇ. 50ರಷ್ಟು ಶುಲ್ಕ ಸಂಗ್ರಹಕ್ಕೆ ಅನುಮತಿ ನೀಡುವಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.