ಸವಾಲಾಗುತ್ತಿರುವ ಶುಲ್ಕ ನಿಗದಿ
Team Udayavani, Jan 28, 2021, 6:20 AM IST
ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ನಿಗದಿ ವಿಷಯವು ಸರಕಾರಕ್ಕೆ ತಲೆನೋವಾಗುತ್ತಿದ್ದು, ಅವಸರದಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಆದರೆ ಪಾಲಕರು ಆತಂಕ ಪಡಬೇಕಾಗಿಲ್ಲ. ಶಾಲೆಗಳು ಶುಲ್ಕ ಪಾವತಿಸುವಂತೆ ಒತ್ತಡ ಹಾಕಿದಲ್ಲಿ ದೂರು ನೀಡಬಹುದು ಎಂದು ಸಚಿವರು ತಿಳಿಸಿದ್ದಾರೆ.
ಶೇ.30ರಿಂದ 35ರಷ್ಟು ಅಥವಾ ಶೇ.25ರಿಂದ 50ರಷ್ಟು ಶುಲ್ಕ ವಿನಾ ಯಿತಿ ಬಗ್ಗೆ ಸರಕಾರ ಯೋಚಿಸುತ್ತಿದೆ. ಇದಕ್ಕೆ ಶಾಲೆಗಳ ಆಡಳಿತ ಮಂಡಳಿ ಗಳು ಒಪ್ಪುತ್ತಿಲ್ಲ. ಶೇ.10ಕ್ಕಿಂತ ಜಾಸ್ತಿ ಶುಲ್ಕ ಇಳಿಸಿದರೆ ಶಿಕ್ಷಕರಿಗೆ ವೇತನ ನೀಡು ವುದಿಲ್ಲ ಎಂದು ಹೇಳಿವೆ.
ಇತರ ತರಗತಿ: ಇಂದು ಸಭೆ :
ಪ್ರಥಮ ಪಿಯುಸಿ ಹಾಗೂ 9ನೇ ತರಗತಿ ಆರಂಭ ಸಹಿತ ಶೈಕ್ಷಣಿಕ ವಿಷಯಗಳನ್ನು ಚರ್ಚಿಸಲು ಗುರುವಾರ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ಅವರು ಸಭೆ ನಡೆಸಲಿದ್ದಾರೆ. 9ನೇ ತರಗತಿ ವಿದ್ಯಾರ್ಥಿಗಳಿಗೆ ನಿತ್ಯದ ತರಗತಿಗಳು ಆರಂಭವಾದಲ್ಲಿ ವಿದ್ಯಾಗಮವನ್ನು 4ನೇ ತರಗತಿವರೆಗೂ ವಿಸ್ತರಿಸುವ ಸಾಧ್ಯತೆಯಿದೆ. ಆದರೆ 1ರಿಂದ 3ನೇ ತರಗತಿ ವಿದ್ಯಾರ್ಥಿಗಳಿಗೆ ರೇಡಿಯೋ ತರಗತಿಗಳು ಈ ಹಿಂದಿನಂತೆ ಮುಂದುವರಿಯಲಿವೆ ಎಂದು ಮೂಲಗಳು ತಿಳಿಸಿವೆ.
20 ಸಾವಿರ ಶಿಕ್ಷಕರ ನೇಮಕ : ಸುರೇಶ್ ಕುಮಾರ್ :
ಬೆಂಗಳೂರು: ಮುಂದಿನ ಎರಡು ವರ್ಷಗಳಲ್ಲಿ ರಾಜ್ಯ ಸರಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿದ್ದಾರೆ.ರಾಜ್ಯ ಸರಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಸಹಿತ ಶಿಕ್ಷಣ ಇಲಾಖೆಯ ವಿವಿಧ ಸ್ತರಗಳ ನೌಕರರ ಸಂಘಗಳ ಪದಾಧಿಕಾರಿಗಳ ಜತೆಗಿನ ಸಭೆಯಲ್ಲಿ ಅವರು ಈ ವಿಷಯವನ್ನು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.