ಶಾಲಾರಂಭ : ಮತ್ತೆ ಗೊಂದಲ
Team Udayavani, Dec 23, 2020, 6:00 AM IST
ಬೆಂಗಳೂರು: ಕೋವಿಡ್ ಎರಡನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಜ. 1ರಿಂದ ಎಸೆಸೆಲ್ಸಿ ಮತ್ತು ಪಿಯು ತರಗತಿ ಆರಂಭಿಸಬೇಕೇ ಬೇಡವೇ ಎಂಬ ಗೊಂದಲದಲ್ಲಿ ರಾಜ್ಯ ಸರಕಾರ ಮುಳುಗಿದೆ. ಕೋವಿಡ್ ತಾಂತ್ರಿಕ ಸಮಿತಿ ಈ ಸಂಬಂಧ ಶೀಘ್ರವೇ ಇನ್ನೊಂದು ಶಿಫಾರಸು ನೀಡಲಿದ್ದು, ಆದನ್ನು ಆಧರಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಸದ್ಯ ಈಗಾಗಲೇ ಘೋಷಿಸಿರುವಂತೆ ಜ. 1ಕ್ಕೆ ಎಸೆಸೆಲ್ಸಿ ಹಾಗೂ ಪಿಯು ತರಗತಿಗಳ ಆರಂಭಕ್ಕೆ ಸಿದ್ಧತೆ ನಡೆದಿದೆ. ಆದರೆ ಈ ನಡುವೆಯೇ ಸಲಹಾ ಸಮಿತಿಯು ಎರಡನೇ ಅಲೆ ಅಪಾಯ ಕುರಿತು ಎಚ್ಚರಿಸಿದೆ. ವೈರಸ್ ರೂಪಾಂತರದ ಆತಂಕವೂ ಇರು ವುದರಿಂದ ಶಾಲಾರಂಭದ ನಿರ್ಣಯ ವನ್ನು ಸರಕಾರ ಪುನರ್ ಪರಿಶೀಲಿಸಲಿದೆ ಎನ್ನಲಾಗಿದೆ.
ಇಂಗ್ಲೆಂಡ್‌ನಲ್ಲಿ ಪತ್ತೆಯಾಗಿರುವ ರೂಪಾಂತ ರಿತ ವೈರಾಣು ಹೆಚ್ಚು ವೇಗವಾಗಿ ಹರಡುತ್ತದೆ ಎನ್ನ ಲಾಗಿದೆ. ಹೀಗಾಗಿ ಶಾಲಾರಂಭದ ದಿನಾಂಕದ ಬಗ್ಗೆ ಇನ್ನೊಮ್ಮೆ ಸಮಿತಿ, ಸಿಎಂ ಜತೆಗೆ ಚರ್ಚಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ| ಸುಧಾಕರ್ ತಿಳಿಸಿದ್ದಾರೆ.
ನಡೆದಿದೆ ಸಿದ್ಧತೆ
ಈ ಮಧ್ಯೆ, ಜ. 1ರಿಂದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6ರಿಂದ 9ನೇ ತರಗತಿಗೆ ವಿದ್ಯಾಗಮ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಶಾಲಾರಂಭ ಇನ್ನಷ್ಟು ದಿನ ಮುಂದೂಡಿಕೆಯಾಗುವ ಸಾಧ್ಯತೆ ಇಲ್ಲದಿಲ್ಲ. ಆದರೆ ವಿದ್ಯಾಗಮ ಜ.1ರಿಂದ ಆರಂಭವಾಗಲಿದೆ. ಶಾಲಾರಂಭ ಮುಂದೂಡಲ್ಪಟ್ಟರೆ ಎಸೆಸೆಲ್ಸಿಗೂ ವಿದ್ಯಾಗಮ ನಡೆಸುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಫೆಬ್ರವರಿ ವರೆಗೆ ಸಿಬಿಎಸ್‌ಇ ಪರೀಕ್ಷೆ ಇಲ್ಲ
ಕೇಂದ್ರ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ)ಯ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿವರೆಗೆ ನಡೆಸುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಕೊರೊನಾ ಪರಿಸ್ಥಿತಿ ಆಧರಿಸಿ ಮತ್ತು ವಿಸ್ತೃತ ಸಮಾಲೋಚನೆಯ ಬಳಿಕವೇ ಪರೀಕ್ಷಾ ದಿನಾಂಕಗಳನ್ನು ನಿಗದಿಪಡಿಸಲಾಗುವುದು ಎಂದಿದ್ದಾರೆ.
ಮಕ್ಕಳ ಹಿತದೃಷ್ಟಿಯಿಂದ ಶಾಲಾರಂಭಕ್ಕೆ ಸಂಬಂಧಿಸಿ ಶಿಕ್ಷಣ ಇಲಾಖೆ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ. ಶಾಲಾರಂಭವು ಸುರಕ್ಷಿತವಾಗಿ, ಸುಲಲಿತವಾಗಿ ನಿರ್ವಹಣೆಯಾಗಲಿದೆ.
-ಸುರೇಶ್ ಕುಮಾರ್, ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.