ಅಕ್ಟೋಬರ್ 15ರ ವರೆಗೆ ಶಾಲೆಗಿಲ್ಲ ಮಕ್ಕಳ ಭೇಟಿ
Team Udayavani, Oct 1, 2020, 5:50 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ವಿದ್ಯಾರ್ಥಿಗಳು ಅಕ್ಟೋಬರ್ 15ರ ವರೆಗೂ ಭೇಟಿ ನೀಡುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.
ಶಾಲಾರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಹಾಗೂ ಈ ಸಂಬಂಧ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಪ್ರಮಾಣಿತ ಕಾರ್ಯಸೂಚಿ ವಿಧಾನ (ಎಸ್‌ಒಪಿ) ಸಿದ್ಧಪಡಿಸಿದೆ. ಹಾಗೆಯೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಾಲಾರಂಭಕ್ಕಾಗಿ ಜನಪ್ರತಿನಿಧಿಗಳಿಂದ ಸಲಹೆ ಯನ್ನು ಆಹ್ವಾನಿಸಿದ್ದಾರೆ. ಆದರೆ ಶಾಲಾರಂಭವು ಅ. 15ರ ತನಕ ಸಾಧ್ಯವೇ ಇಲ್ಲ ಎಂಬುದನ್ನು ಇಲಾಖೆ ಸ್ಪಷ್ಟ ಪಡಿಸಿದೆ ಮತ್ತು ಅ. 15ರ ಅನಂತರ ಪರಿಸ್ಥಿತಿ ಹೇಗಿದೆ ಎಂಬು ದರ ಆಧಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ.
ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಕೇಂದ್ರ ಸರಕಾರದ ಗೃಹ ಇಲಾಖೆಯ ಮಾರ್ಗ ಸೂಚಿಯಂತೆ ಸೆ. 21ರಿಂದ ಕಂಟೈನ್ಮೆಂಟ್ ವಲಯ ಹೊರತುಪಡಿಸಿ 9ರಿಂದ 12ನೇ ತರಗತಿಗಳನ್ನು ತೆರೆದು ವಿದ್ಯಾರ್ಥಿಗಳಿಗೆ ಸಂದೇಹ ಪರಿಹಾರಕ್ಕಾಗಿ ಶಾಲೆಗೆ ಭೇಟಿ ನೀಡಲು ಅನುಮತಿ ನೀಡಲಾಗಿತ್ತು. ಆದರೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟಂಬರ್ ಅಂತ್ಯದ ವರೆಗೆ ವಿದ್ಯಾರ್ಥಿಗಳು ಭೇಟಿ ನೀಡದಿರಲು ಇಲಾಖೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.