1666 ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ : ಸಚಿವ ಡಾ‌.ನಾರಾಯಣಗೌಡ

Team Udayavani, Sep 8, 2021, 4:57 PM IST

Scientific Training for  1666 Sports Teachers by Sports Department : Minister Dr Narayana Gowda

ಬೆಂಗಳೂರು : ತಳಮಟ್ಟದಿಂದಲೇ ಕ್ರೀಡಾಪಟುಗಳನ್ನು ತಯಾರು ಮಾಡಲು ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 1666 ದೈಹಿಕ ಶಿಕ್ಷಕರಿಗೆ ಗುಣಮಟ್ಟದ ವೈಜ್ಞಾನಿಕ ತರಬೇತಿ ನೀಡಲು ಯೋಜನೆ ಸಿದ್ದವಾಗಿದೆ. ಶೀಘ್ರದಲ್ಲೇ ತರಬೇತಿ ಆರಂಭಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಸರ್ಕಾರ ಈಗಾಗಲೆ ವಿವಿಧ ಯೋಜನೆ ಜಾರಿಗೆ ಬಂದಿದೆ. ಅದಕ್ಕಿಂತ ಮುಖ್ಯವಾಗಿ ತಳಮಟ್ಟದಲ್ಲೇ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡಲು ದೈಹಿಕ ಶಿಕ್ಷರಿಗೇ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ ನೀಡಲು ತೀರ್ಮಾನಿಸಲಾಗಿದೆ. ವಿಕಾಸ ಸೌಧದಲ್ಲಿ ಇಂದು (ಸಪ್ಟೆಂಬರ್ 7) ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗಿದೆ. ಕ್ರೀಡಾ ವಿಜ್ಞಾನ ಕೇಂದ್ರದ ಮೂಲಕ ಗ್ರಾಮೀಣ ಮಟ್ಟದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲಾಗುತ್ತಿದ್ದು, ಅಂತವರಿಗೆ ತರಬೇತಿ ಪಡೆದ 1666 ಪರಿಣಿತ ದೈಹಿಕ ಶಿಕ್ಷಕರಿಂದ ತರಬೇತಿ ನೀಡಲಾಗುವುದು. ಶಿಕ್ಷಣ ಇಲಾಖೆಯಿಂದ ಈಗಾಗಲೇ 1666 ದೈಹಿಕ ಶಿಕ್ಷಕರ ಪಟ್ಟಿ ಪಡೆಯಲಾಗಿದ್ದು, ತಿಂಗಳಾಂತ್ಯದಲ್ಲಿ ಕ್ರೀಡಾ ಇಲಾಖೆಯಿಂದ ತರಬೇತಿ ನೀಡಲು ಆರಂಭಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ : ಅನುಶ್ರೀ ಜೈಲಿಗೆ ಹೋಗುವುದು ಪಕ್ಕಾ:ಪ್ರಶಾಂತ್ ಸಂಬರಗಿ|UDAYAVANI NEWS BULLETIN|8/9/2021

ಖೇಲೊ ಇಂಡಿಯಾ ಕೇಂದ್ರ ಪ್ರಾರಂಭಿಸಲು ಹಣ ಬಿಡುಗಡೆಯಾದರೂ ಆರಂಭವಾಗದ ಕೇಂದ್ರ : ಸಚಿವರು ಗರಂ

ಇದೇ ವೇಳೆ ಖೇಲೊ ಇಂಡಿಯಾ ಕೇಂದ್ರದ ಬಗ್ಗೆ ಚರ್ಚಿಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 31 ಕೇಂದ್ರಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಈಗಾಗಲೆ ಅನುದಾನ ನೀಡಿದೆ. ಪ್ರತಿ ಕೇಂದ್ರದ ಮೂಲಕ ಸೌಕರ್ಯಕ್ಕೆ ರೂ.5 ಲಕ್ಷ ಹಾಗೂ ತರಬೇತಿಗೆ ರೂ. 5 ಲಕ್ಷ ನೀಡಿದೆ. ಆದರೆ ಈ ವರೆಗೆ ಯಾವುದೇ ಪ್ರಕ್ರಿಯೆ ಆರಂಭವಾಗಿಲ್ಲ. ಕೇವಲ ಘೋಷಣೆಗೆ ಯೋಜನೆ ಸೀಮಿತವಾದರೆ ಹೇಗೆ. ತಕ್ಷಣ ಕೆಲಸ ಆರಂಭಿಸದಿದ್ದರೆ ಸುಮ್ಮನಿರಲ್ಲ. ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದರು. ವಾರದೊಳಗೆ ಕೆಲಸ ಆರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದರು.

ಸೆ. 24 ರಂದು ವೈಮಾನಿಕ ತರಬೇತಿ ಶಾಲೆ ಪುನಾರಂಭ

ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆರಂಭ ಆಗಲೇಬೇಕು. ಇನ್ನಷ್ಟು ಸಮಯ ನೀಡಲು ಸಾಧ್ಯವಿಲ್ಲ. ಅಧಿವೇಶನ ಮುಗಿದ ಮಾರನೆ ದಿನ ವೈಮಾನಿಕ ತರಬೇತಿ ಶಾಲೆ ಪುನಾರಂಭ ಆಗಬೇಕು. ಮುಖ್ಯ ಮಂತ್ರಿಗಳನ್ನು ಆಹ್ವಾನಿಸಿ, ಉದ್ಘಾಟಿಸಲಾಗುವುದು ಎಂದು ಸಚಿವ ಡಾ. ನಾರಾಯಣ ಗೌಡ ತಿಳಿಸಿದರು. 45 ಹಳೆ ವಿದ್ಯಾರ್ಥಿಗಳಿದ್ದು, ಈಗಾಗಲೆ 35 ವಿದ್ಯಾರ್ಥಿಗಳು ತರಬೇತಿ ಪಡೆಯಲು ಬರುವುದಾಗಿ ತಿಳಿಸಿದ್ದಾರೆ. ಹಿಂದಿನ ಶುಲ್ಕ ದರದಲ್ಲೇ ತರಬೇತಿ ನೀಡಲಾಗುವುದು.  ಹೊಸದಾಗಿ ಪ್ರವೇಶ ಪಡೆಯುವವರಿಗೆ ಪರಿಷ್ಕೃತ ದರ ನಿಗದಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಂದಿನ‌ ಮಾರ್ಚ್ 5 ರಿಂದ ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಕ್ರೀಡೆಯ ಆಯೋಜನೆಗೆ ರೂ. 25 ಕೋಟಿ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೂಲ ಸೌಕರ್ಯಕ್ಕಾಗಿ ರೂ. 18 ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರಕ್ಕೂ ರೂ. 22 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅರ್ಥಿಕ ಇಲಾಖೆ ಪರಿಶೀಲನೆಯಲ್ಲಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಅಲ್ಲದೆ ಅತಿ ಶೀಘ್ರದಲ್ಲಿ ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ನ ಲೋಗೋ, ಥೀಮ್ ಸಾಂಗ್, ಜೆರ್ಸಿ ಲಾಂಚ್ ಆಗಬೇಕು ಎಂದು ಸಚಿವರು ತಿಳಿಸಿದ್ದಾರೆ.

ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕ್ರೀಡಾ ಇಲಾಖೆ ಆಯುಕ್ತ ವೆಂಕಟೇಶ್, ಇಲಾಖೆ ಅಧಿಕಾರಿಗಳು ಉಪಸ್ಥಿರಿದ್ದರು.

ಇದನ್ನೂ ಓದಿ : ಕೋವಿಡ್ : ಮನೆಮನೆಗೆ ತೆರಳಿ ಲಸಿಕೆ ನೀಡಿಯೆಂದು ಆದೇಶಿಸಲು ಸಾಧ್ಯವಿಲ್ಲ : ಸುಪ್ರೀಂ ಅಭಿಪ್ರಾಯ

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.