ಹಿರಿಯ ವಿಜ್ಞಾನಿ ರೊದ್ದಂ ನರಸಿಂಹ ಇನ್ನಿಲ್ಲ
Team Udayavani, Dec 15, 2020, 12:21 AM IST
ಬೆಂಗಳೂರು: ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ವಿಜ್ಞಾನಿ, ಪ್ರೊಫೆಸರ್ ರೊದ್ದಂ ನರಸಿಂಹ (87) ಅವರು ಸೋಮವಾರ ರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದು ಒಂದು ವಾರದಿಂದ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ ಕೊನೆ ಉಸಿರೆಳೆದರು.
1933ರ ಜು. 20ರಂದು ಜನಿಸಿದ್ದ ನರಸಿಂಹ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಇ ಪದವಿ ಪಡೆದ ಬಳಿಕ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಹಾಗೂ ಕ್ಯಾಲಿಫೊರ್ನಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉನ್ನತ ವ್ಯಾಸಂಗ ಮತ್ತು ಸಂಶೋಧನೆ ನಡೆಸಿದ್ದರು.
‘ಫ್ಲುಯಿಡ್ ಡೈನಮಿಕ್ಸ್’ ಅವರ ನೆಚ್ಚಿನ ಹಾಗೂ ಪರಿಣತಿಯ ಕ್ಷೇತ್ರವಾಗಿತ್ತು. 200ಕ್ಕೂ ಅಧಿಕ ಸಂಶೋಧನಾ ಪ್ರಕಟಣೆಗಳ ಲೇಖಕರಾಗಿ ನೂರಾರು ಯುವ ವಿಜ್ಞಾನಿಗಳಿಗೆ ಮಾರ್ಗದರ್ಶಕರಾಗಿ ಅವರು ಜನಪ್ರಿಯರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.