ರಾಜ್ಯದಲ್ಲೂ ಸಂಚರಿಸಲಿವೆ ಸಮುದ್ರ ವಿಮಾನಗಳು
ಬೈಂದೂರು, ಮಲ್ಪೆ , ಮಂಗಳೂರಿನಲ್ಲಿ ವಾಟರ್ ಏರೋಡ್ರೋಮ್ ಅಭಿವೃದ್ಧಿ: ಸೋಮಣ್ಣ
Team Udayavani, Jul 14, 2022, 7:20 AM IST
ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋ ದ್ಯಮ ಉತ್ತೇಜಿಸುವ ಜತೆಗೆ ಆರ್ಥಿಕ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಕಡಲ ತೀರಗಳು ಹಾಗೂ ಜಲಾಶಯಗಳಲ್ಲಿ ವಾಟರ್ ಏರೋಡ್ರೋಮ್ (ಸಮುದ್ರ ವಿಮಾನ) ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದು ಮೂಲ ಸೌಕರ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಬುಧವಾರ ಕರ್ನಾಟಕ ಸಮಗ್ರ ನಾಗರಿಕ ವಿಮಾನಯಾನ ನೀತಿ ರೂಪಣೆ ಕಾರ್ಯಾಗಾರದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಗರಿಕ ವಿಮಾನಯಾನ ಸಂಪರ್ಕದ ಮೂಲಕ 9 ಕಡೆ ವಾಟರ್ ಏರೋಡ್ರೋಮ್ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದರು.
ಕಾಳಿ ನದಿ, ಬೈಂದೂರು, ಮಲ್ಪೆ, ಮಂಗಳೂರು, ತುಂಗಭದ್ರಾ, ಕೆಆರ್‌ಎಸ್, ಲಿಂಗನಮಕ್ಕಿ, ಆಲಮಟ್ಟಿ ಮತ್ತು ಹಿಡಕಲ್ ಜಲಾಶಯಗಳನ್ನು ವಾಟರ್ ಏರೋಡ್ರೋಮ್ ಅಭಿವೃದ್ಧಿಪಡಿಸುವ ಸ್ಥಳಗಳನ್ನಾಗಿ ಸದ್ಯಕ್ಕೆ ಗುರುತಿಸಲಾಗಿದೆ ಎಂದರು.
ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಸಮಗ್ರ ನಾಗರಿಕ ವಿಮಾನಯಾನ ನೀತಿ ರೂಪಿಸು ವುದು ಅಗತ್ಯ. ರಾಜ್ಯದ ವಿಮಾನ ನಿಲ್ದಾಣಗಳ ನಿರ್ವಹಣೆ ಹೊಣೆಯನ್ನು ಪ್ರತ್ಯೇಕ ಸಂಸ್ಥೆ ಅಥವಾ ಸರಕಾರಕ್ಕೆ ವಹಿ ಸುವುದು ಸೂಕ್ತ ಎಂದರು.
ಹೆಲಿಪೋರ್ಟ್‌ಗಳ ನಿರ್ಮಾಣ
ಮಡಿಕೇರಿ, ಚಿಕ್ಕಮಗಳೂರು ಮತ್ತು ಹಂಪಿ ಯಲ್ಲಿ ಹೆಲಿಪೋರ್ಟ್‌ಗಳನ್ನು ಸ್ಥಾಪಿಸಲು ಕಾರ್ಯ ಸಾಧ್ಯತೆ ಮತ್ತು ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಚಿಕ್ಕಮಗಳೂರು, ಹರಿಹರ, ಕುಶಾಲನಗರ ಮತ್ತು ಅಥಣಿಯಲ್ಲಿ ಕಿರು ವಿಮಾನ ನಿಲ್ದಾಣ ಸ್ಥಾಪಿಸುವ ಚಿಂತನೆ ಇದೆ ಎಂದರು.
ಶಿವಮೊಗ್ಗ ವಿಮಾನ ನಿಲ್ದಾಣ ಈ ವರ್ಷಾಂತ್ಯ ದೊಳಗೆ ಉದ್ಘಾಟನೆ ಆಗಲಿದೆ. ವಿಜಯಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ರಾಜ್ಯದ ಬಗ್ಗೆ ಮೆಚ್ಚುಗೆ
ಇದಕ್ಕೂ ಮೊದಲು ಕಾರ್ಯಾಗಾರದಲ್ಲಿ ಮಾತನಾಡಿದ ಕೇಂದ್ರ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಉಷಾ ಪಡಿ ಅವರು, ವಿಮಾನಯಾನ ನೀತಿ ರೂಪಣೆ ಕುರಿತು ಕಾರ್ಯಾಗಾರ ಆಯೋಜಿಸಿರುವ ಮೊದಲ ರಾಜ್ಯ ಕರ್ನಾಟಕ. ಪ್ರತಿ ರಾಜ್ಯಕ್ಕೂ ಇಂಥ ವಿಮಾನಯಾನ ನೀತಿ ಅಗತ್ಯ ಇದೆ. ರಾಜ್ಯದ ವಿಮಾನಯಾನ ಯೋಜನೆಗಳಿಗೆ ಕೇಂದ್ರದ ನೆರವು ಒದಗಿಸಲಾಗುವುದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಲ್ಲೆಲ್ಲಿ ಏರೋಡ್ರೋಮ್?
ಕಾಳಿ ನದಿ, ಬೈಂದೂರು, ಮಲ್ಪೆ, ಮಂಗ ಳೂರು, ತುಂಗಭದ್ರಾ, ಕೆಆರ್‌ಎಸ್, ಲಿಂಗನ ಮಕ್ಕಿ, ಆಲಮಟ್ಟಿ, ಹಿಡಕಲ್ ಜಲಾಶಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.