Lok Sabha Elections ಹೊಸ್ತಿಲಲ್ಲಿ ಮಿತ್ರ ಶೋಧ; ಬಿಜೆಪಿ ಪರಾಜಯಕ್ಕೆ ವಿಪಕ್ಷ ಕಾರ್ಯತಂತ್ರ


Team Udayavani, Jul 17, 2023, 7:15 AM IST

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಿತ್ರ ಶೋಧ; ಬಿಜೆಪಿ ಪರಾಜಯಕ್ಕೆ ವಿಪಕ್ಷ ಕಾರ್ಯತಂತ್ರ

ಲೋಕಸಭೆಯ ಚುನಾವಣೆಗಾಗಿ ಬಿಜೆಪಿ ಮತ್ತು ಕಾಂಗ್ರೆಸ್‌ ನೇತೃತ್ವದಲ್ಲಿ ಒಕ್ಕೂಟ ಸಿದ್ಧಗೊಳ್ಳುತ್ತಿದೆ. ಬಿಜೆಪಿಯನ್ನು ಸೋಲಿಸಲು ಪಣ ತೊಟ್ಟಿರುವ ಕಾಂಗ್ರೆಸ್‌ ನೇತೃತ್ವದಲ್ಲಿ 26 ಪಕ್ಷಗಳು ಬೆಂಗಳೂರಿನಲ್ಲಿ 2ನೇ ಹಂತದ ವ್ಯೂಹರಚನೆಗೆ ಸೋಮವಾರ, ಮಂಗಳವಾರ ಸಭೆ ನಡೆಸಲಿವೆ. ಇನ್ನು ಬಿಜೆಪಿ ಹೊಸದಿಲ್ಲಿಯಲ್ಲಿ ಸಭೆ ನಡೆಸಿ ಬಲವರ್ಧನೆ ಮಾಡಲಿದೆ. ಒಟ್ಟಿನಲ್ಲಿ ಎರಡೂ ಬಣಗಳು ಮಿತ್ರರಿಗಾಗಿ ಶೋಧ ಆರಂಭಿಸಿವೆ.

ಬಿಜೆಪಿ ಪರಾಜಯಕ್ಕೆ ವಿಪಕ್ಷ ಕಾರ್ಯತಂತ್ರ
ಬೆಂಗಳೂರು/ಹೊಸದಿಲ್ಲಿ: ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳ ಸಭೆ ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿದೆ. ಮುಂದಿನ ವರ್ಷದ ಎಪ್ರಿಲ್‌-ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಮಣಿಸುವ ಬಗ್ಗೆ ವ್ಯೂಹ ರಚನೆಯ ಎರಡನೇ ಹಂತವನ್ನು ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ.

ಒಟ್ಟು 26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗ ವಹಿಸುವ ನಿರೀಕ್ಷೆ ಇದೆ. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಬಿಜೆಪಿ ವಿರುದ್ಧದ ಹೊರಾಟದ ಚಿತ್ರಣ ಸ್ಪಷ್ಟವಾಗುವ ಸಂಭವವಿದೆ.
ಕಾಂಗ್ರೆಸ್‌ ಮತ್ತದರ ಮಿತ್ರರಾಗಿರುವ 26 ಪಕ್ಷಗಳು ಈ ಸಭೆಯಲ್ಲಿ ಭಾಗಿಯಾಗುವುದನ್ನು ಈಗಾಗಲೇ ಖಾತ್ರಿ ಪಡಿಸಿವೆ. ಈ ವಿಪಕ್ಷಗಳ ಒಟ್ಟು 48 ಮುಖಂಡರು ಪಾಲ್ಗೊಳ್ಳ  ಲಿದ್ದಾರೆ. ದೇಶದ ಹಲವು ರಾಜ್ಯಗಳ ಮುಖ್ಯ ಮಂತ್ರಿ  ಗಳು, ಮಾಜಿ ಉಪಮುಖ್ಯಮಂತ್ರಿಗಳ ಸಹಿತ ವಿವಿಧ ಮುಖಂಡರು ಚರ್ಚೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ವಿವಿಧ ರಾಜ್ಯಗಳಲ್ಲಿ ಸ್ಥಾನ ಹೊಂದಾಣಿಕೆ, ಹೊಸ ಮೈತ್ರಿಕೂಟಕ್ಕೆ ಇರಿಸಬಹುದಾದ ಹೆಸರಿನ ಬಗ್ಗೆ ಪ್ರಮುಖವಾಗಿ ಚರ್ಚೆಯಾಗಲಿದೆ.

ತೃಣಮೂಲ ಕಾಂಗ್ರೆಸ್‌ನ ವರಿಷ್ಠ ನಾಯಕಿ ಮತ್ತು ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಂಸದರಾದ ಅಭಿಷೇಕ್‌ ಬ್ಯಾನರ್ಜಿ, ಡೆರಿಕ್‌ ಒ ಬ್ರಿಯಾನ್‌, ಸಿಪಿಎಂನ ಸೀತಾರಾಂ ಯೆಚೂರಿ, ಸಮಾಜವಾದಿ ಪಕ್ಷದ ಅಖೀಲೇಶ್‌ ಯಾದವ್‌, ರಾಮ್‌ಗೊàಪಾಲ್‌ ಯಾದವ್‌, ಕೇರಳ ಕಾಂಗ್ರೆಸ್‌ (ಎಂ)ನ ಜೋಸ್‌ ಕೆ. ಮಣಿ, ಎಐಎಫ್ಬಿಯ ಜಿ. ದೇವರಾಜನ್‌ ಈಗಾಗಲೇ ಆಗಮಿಸಿದ್ದಾರೆ.

ಸೋಮವಾರ ಕಾಂಗ್ರೆಸ್‌ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ, ಕಾಂಗ್ರೆಸ್‌ನ ಸಂಘಟನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಹೊಸದಿಲ್ಲಿಯಿಂದ ವಿಶೇಷ ವಿಮಾನದಲ್ಲಿ ನಗರಕ್ಕೆ ಬರಲಿದ್ದಾರೆ. ಉಳಿದಂತೆ ಸಿಪಿಐನ ಡಿ. ರಾಜಾ, ಎನ್‌ಸಿಪಿಯ ಶರದ್‌ ಪವಾರ್‌, ಸುಪ್ರಿಯಾ ಸುಳೆ, ಬಿಹಾರದ ಮುಖ್ಯಮಂತ್ರಿ, ಜೆಡಿಯುನ ನಿತೀಶ್‌ ಕುಮಾರ್‌, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಝಾರ್ಖಂಡ್‌ನ‌ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌, ಶಿವಸೇನೆ (ಯುಬಿಟಿ)ಯ ಉದ್ಧವ್‌ ಠಾಕ್ರೆ, ಆದಿತ್ಯ ಠಾಕ್ರೆ, ಆರ್‌ಜೆಡಿಯ ಲಾಲೂ ಪ್ರಸಾದ್‌, ತೇಜಸ್ವಿ ಯಾದವ್‌, ನ್ಯಾಶನಲ್‌ ಕಾನ್ಫರೆನ್ಸ್‌ನ ಉಮರ್‌ ಅಬ್ದುಲ್ಲಾ, ಪಿಡಿಪಿಯ ಮೆಹಬೂಬಾ ಮುಫ್ತಿ, ಆರ್‌ಎಲ್‌ಡಿಯ ಜಯಂತ್‌ ಚೌಧರಿ ಆಗಮಿಸಲಿದ್ದಾರೆ.

ದಿಲ್ಲಿ ಸರಕಾರದ ಅಧಿಕಾರವನ್ನು ಮೊಟಕುಗೊಳಿಸುವ ಕೇಂದ್ರ ಸರಕಾರದ ನಿಲುವನ್ನು ವಿರೋಧಿಸುವುದಾಗಿ ಕಾಂಗ್ರೆಸ್‌ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಆಪ್‌ ಪಕ್ಷವೂ ಪೂರ್ಣ ಮನಸ್ಸಿನಿಂದ ಸಭೆಯಲ್ಲಿ ಪಾಲ್ಗೊಳ್ಳಲಿದೆ. ಪಾಟ್ನಾ ಸಭೆಯಲ್ಲಿ 15 ಪಕ್ಷಗಳು ಪಾಲ್ಗೊಂಡಿದ್ದರೆ ಬೆಂಗಳೂರು ಸಭೆಯಲ್ಲಿ ಈ ಸಂಖ್ಯೆ 26ಕ್ಕೆ ಏರಿದೆ.
ಮೈತ್ರಿಕೂಟದ ಸಭೆಯಲ್ಲಿ ಸೋನಿಯಾ ಗಾಂಧಿ ಪಾಲ್ಗೊಳ್ಳುತ್ತಿರುವುದು ಇದೇ ಮೊದಲು. ಮೈತ್ರಿಕೂಟದ ಸಂಚಾಲಕತ್ವ, ಮೈತ್ರಿಕೂಟದ ಮುಂದಿನ ಕಾರ್ಯತಂತ್ರ, ಸಮಾನ ಕಾರ್ಯಕ್ರಮಗಳ ಘೋಷಣೆ, ಮೈತ್ರಿ ಕೂಟದ ಹೆಸರು ಅಂತಿಮಗೊಳಿಸುವ ಪ್ರಯತ್ನ ಸಭೆಯಲ್ಲಿ ನಡೆಯಲಿದೆ. ಉಳಿದಂತೆ ಕೂಟದ ಸದಸ್ಯರ ಮಧ್ಯೆ ಇರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಪರಿಹರಿಸುವ ಪ್ರಯತ್ನ ನಡೆಯಲಿದೆ ಎಂದು ತಿಳಿದುಬಂದಿದೆ.

ಇಂದು ಡಿನ್ನರ್‌; ನಾಳೆ ಸಭೆ
ಸೋಮವಾರ ಸಂಜೆ ಆರು ಗಂಟೆಯಿಂದ ಸಭೆ ಆರಂಭಗೊಳ್ಳಲಿದ್ದು, ರಾತ್ರಿ 7.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏರ್ಪಡಿಸಿರುವ ಔತಣ ಕೂಟದಲ್ಲಿ ನಾಯಕರು ಪಾಲ್ಗೊಳ್ಳಲಿದ್ದಾರೆ. ಮಂಗಳವಾರ ಔಪಚಾರಿಕ ಸಭೆಗಳು ನಡೆಯಲಿವೆ.

ಇಬ್ರಾಹಿಂಗೆ ನಿತೀಶ್‌ ಕರೆ?
ಸಭೆಗೆ ಬರುವಂತೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ಬಿಹಾರದ ಸಿಎಂ ನಿತೀಶ್‌ ಕುಮಾರ್‌ ದೂರವಾಣಿ ಕರೆ ಮಾಡಿದ್ದರು ಎನ್ನಲಾಗಿದೆ. ಆದರೆ ಈ ಹಿಂದೆ ಪಾಟ್ನಾದಲ್ಲಿ ನಡೆದ ಸಭೆಗೆ ಆಹ್ವಾನ ಇರಲಿಲ್ಲ. ಅದೇ ರೀತಿ ಬೆಂಗಳೂರಿನ ಈ ಸಭೆಗೂ ಅಧಿಕೃತ ಆಹ್ವಾನ ಇಲ್ಲ. ಹೀಗಾಗಿ ಸಭೆಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

ಆಪ್‌ಗೆ ಕಾಂಗ್ರೆಸ್‌ ಬೆಂಬಲ
ದಿಲ್ಲಿಯಲ್ಲಿ ಐಎಎಸ್‌ ಅಧಿಕಾರಿಗಳ ನೇಮಕ ಮತ್ತು ಅವರ ಸೇವಾ ಚಟುವಟಿಕೆಗಳ ನಿಯಂತ್ರಣಕ್ಕೆ ಸಂಬಂಧಿಸಿದ ಕೇಂದ್ರ ಸರಕಾರದ ಅಧ್ಯಾದೇಶ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷವು ಆಮ್‌ ಆದ್ಮಿ ಪಕ್ಷವನ್ನು ಬೆಂಬಲಿಸಲಿದೆ. ಈ ಹಿನ್ನೆಲೆಯಲ್ಲಿ ಆಪ್‌ ನಾಯಕರು ಬೆಂಗಳೂರಿನಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸಲು ನಿರ್ಧರಿಸಿ ದ್ದಾರೆ. ಹೊಸದಿಲ್ಲಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, “ಅಧಿಕಾರಿಗಳ ನಿಯಂತ್ರಣಕ್ಕೆ ಸಂಬಂಧಿಸಿದ ಅಧ್ಯಾದೇಶವನ್ನು ಸಂಸತ್ತಿನಲ್ಲಿ ಮಂಡಿಸಿದ ಸಂದರ್ಭದಲ್ಲಿ ಕಾಂಗ್ರೆಸ್‌ ಅದನ್ನು ವಿರೋಧಿಸಲಿದೆ’ ಎಂದಿದ್ದಾರೆ.

ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಎಲ್ಲ ವಿಪಕ್ಷಗಳದ್ದೂ ಒಂದೇ ನಿಲುವು. ವಿಪಕ್ಷಗಳು ಆಡಳಿತದಲ್ಲಿ ಇರುವ ರಾಜ್ಯಗಳಲ್ಲಿ ರಾಜ್ಯಪಾಲರ ಮೂಲಕ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಅದಕ್ಕೆ ನಮ್ಮೆಲ್ಲರ ವಿರೋಧವಿದೆ.
-ಕೆ.ಸಿ. ವೇಣುಗೋಪಾಲ್‌,
ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ

ಮೋದಿ ಸೋಲಿಸುವ ವಿಪಕ್ಷಗಳ
ಯತ್ನ ಫಲಿಸದು: ಬೊಮ್ಮಾಯಿ
ಹುಬ್ಬಳ್ಳಿ: ವಿಪಕ್ಷಗಳು ಒಟ್ಟಾಗಿ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಪ್ರಯತ್ನಿಸುತ್ತಿವೆ. ಆದರೆ ಇದು ಯಾವುದೇ ಕಾರಣಕ್ಕೂ ಫ‌ಲಿ ಸುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿ ದ್ದಾರೆ. ವಿಪಕ್ಷಗಳ ಈ ಒಕ್ಕೂಟ ರಚನೆ, ಬೆಂಗಳೂರಿನಲ್ಲಿ ನಡೆಯುವ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ವಿಪಕ್ಷಗಳಿಗೆ ಸ್ವಂತ ಬಲವಿಲ್ಲ, ನಿ ರ್ದಿಷ್ಟ ಕಾರ್ಯಕ್ರಮವಿಲ್ಲ. ಮೋದಿ ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ. ವಿಪಕ್ಷಗಳ ಯಾವುದೇ ಕಸರತ್ತುಗಳು ಜನರ ಮುಂದೆ ನಡೆಯುವುದಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.