ಗಮನಿಸಿ: ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದೂಡಲಾಗಿದೆ
Team Udayavani, Apr 25, 2021, 5:01 PM IST
ಬೆಂಗಳೂರು: ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಹೆಚ್ಚುತ್ತಿರುವ ಕೋವಿಡ್19 ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ: ವಾಹನ ದಾಖಲೆ ತೋರಿಸು ಎಂದ ಪೊಲೀಸರಿಗೆ ಕೋವಿಡ್ ಪಾಸಿಟಿವ್ ವರದಿ ತೋರಿಸಿದ!
ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಸಚಿವರು ಕಿವಿಮಾತು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.