ದ್ವಿತೀಯ ಪಿಯು ಅರ್ಧವಾರ್ಷಿಕ ಪರೀಕ್ಷೆ: ಕಾಲೇಜು ಹಂತದಲ್ಲಿಯೇ ಮೌಲ್ಯಮಾಪನ?
Team Udayavani, Nov 17, 2021, 5:15 AM IST
ಬೆಂಗಳೂರು: ದ್ವಿತೀಯ ಪಿಯು ಅರ್ಧವಾರ್ಷಿಕ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಕಾಲೇಜು ಹಂತದಲ್ಲಿಯೇ ಮೌಲ್ಯಮಾಪನ ಮಾಡುವುದು, ಪ್ರಥಮ ಹಾಗೂ ದ್ವಿತೀಯ ಪಿಯು ಅರ್ಧವಾರ್ಷಿಕ ಪರೀಕ್ಷೆಗಳನ್ನು ಏಕ ಕಾಲದಲ್ಲೇ ನಡೆಸುವುದು ಮುಂತಾದ ಕೆಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆಗಳಿವೆ.
ವಾರ್ಷಿಕ ಪರೀಕ್ಷೆ ಮಾದರಿಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆಗೂ ಒಂದೇ ಪ್ರಶ್ನೆಪತ್ರಿಕೆ ನೀಡಿ, ರಾಜ್ಯಮಟ್ಟದಲ್ಲೇ ಮೌಲ್ಯಮಾಪನ ಮಾಡಿಸಲು ಇಲಾಖೆ ಚಿಂತನೆ ನಡೆಸಿತ್ತು. ಇದಕ್ಕೆ ಉಪನ್ಯಾಸಕರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು, ಪಿಯು ಉಪನ್ಯಾಕರು ಮತ್ತು ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳ ಸಭೆ ನಡೆಸಿ ಹಲವು ವಿಷಯಗಳನ್ನು ಚರ್ಚಿಸಲಾಗಿದೆ.
ಅರ್ಧವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಕಾಲೇಜು ಹಂತದಲ್ಲೇ ಮೌಲ್ಯಮಾಪನ ಮಾಡಬೇಕು, ಪ್ರಥಮ ಮತ್ತು ದ್ವಿತೀಯ ಪಿಯುಪರೀಕ್ಷೆಗಳನ್ನು ಒಂದೇ ಬಾರಿಗೆ ನಡೆಸಬೇಕು ಮುಂತಾದ ಉಪನ್ಯಾಸಕರ ಬೇಡಿಕೆಗಳಿಗೆ ಸಭೆಯಲ್ಲಿ ಪೂರಕಸ್ಪಂದನೆ ದೊರೆತಿದೆ. ಆದ್ದರಿಂದ ಪರೀಕ್ಷಾ ವೇಳಾಪಟ್ಟಿ ಬದಲಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ಬೆಂಗಳೂರು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ
ಇಂದು ಮತ್ತೊಂದು ಸಭೆ
ಪರೀಕ್ಷಾ ನಿಯಮಗಳನ್ನು ಬದಲಾ ಯಿಸುವುದು, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಯಾವ ರೀತಿಯ ಪರಿಸ್ಥಿತಿ ಇದೆ, ಕಾಲೇಜುಗಳಲ್ಲಿ ಎಷ್ಟರ ಮಟ್ಟಿಗೆ ಪಾಠಗಳಾಗಿವೆ ಮುಂತಾದ ವಿಷಯಗಳ ಕುರಿತು ಪರಿಶೀಲಿಸಲು ಬುಧವಾರ ಇಲಾಖೆ ಅಧಿಕಾರಿಗಳು, ಜಿಲ್ಲಾ ಉಪ ನಿರ್ದೇಶಕರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಪರೀಕ್ಷಾ ನಿಯಮಗಳನ್ನು ಬದಲಾಯಿಸುವಂತೆ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಪ್ರತಿನಿಧಿಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಇಲಾಖೆ ಮತ್ತು ಸರಕಾರದ ಮಟ್ಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು.
– ಆರ್. ಸ್ನೇಹಲ್,
ನಿರ್ದೇಶಕರು, ಪಿಯು ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.