ಸೆಪ್ಟೆಂಬರ್ 5 ರವರೆಗೆ ಮುರುಘಾ ಶರಣರು ಪೊಲೀಸ್ ಕಸ್ಟಡಿಗೆ
Team Udayavani, Sep 2, 2022, 7:27 PM IST
ಚಿತ್ರದುರ್ಗ: ಇಬ್ಬರು ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ಶುಕ್ರವಾರ ಸೆಪ್ಟೆಂಬರ್ 5ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಗುರುವಾರ ರಾತ್ರಿ ಬಂಧಿಸಿದ ನಂತರ ಜೈಲಿನಲ್ಲಿ ಶ್ರೀಗಳಿಗೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದವು.ಅವರನ್ನು ಶುಕ್ರವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರು ಐದು ದಿನಗಳ ಕಸ್ಟಡಿಗೆ ಕೋರಿದ್ದಾರೆ. ಕೇಸರಿ ಉಡುಪಿನ ಸುತ್ತಲೂ ಬಿಳಿ ಬಟ್ಟೆಯನ್ನು ಸುತ್ತಿಕೊಂಡ ಅವರನ್ನು ಗಾಲಿಕುರ್ಚಿಯಲ್ಲಿ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು.
ಎದೆನೋವು ಎಂದು ದೂರಿದ ನಂತರ ಅವರನ್ನು ಕರೆದೊಯ್ಯಲಾದ ಆಸ್ಪತ್ರೆಯಿಂದ ಹಿಡಿದು, ದಾರಿಯುದ್ದಕ್ಕೂ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಪೊಲೀಸ್ ಭದ್ರತೆಯೊಂದಿಗೆ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು.
ಮಠ ನಡೆಸುತ್ತಿರುವ ಶಾಲೆಯಲ್ಲಿ ಓದುತ್ತಿರುವ ಹಾಗೂ ಹಾಸ್ಟೆಲ್ನಲ್ಲಿ ಉಳಿದುಕೊಂಡಿರುವ ಇಬ್ಬರು ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಪೋಕ್ಸೊ ಕಾಯ್ದೆ ಯಡಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.