ಹಿರಿಯ ಸಚಿವರಿಗೆ ವೇಣುಗೋಪಾಲ ತರಾಟೆ
Team Udayavani, Sep 1, 2017, 9:27 AM IST
ಬೆಂಗಳೂರು: ಪಕ್ಷದ ಸೂಚನೆಯನ್ನು ನಿರ್ಲಕ್ಷ ಮಾಡುತ್ತಿರುವ ಹಿರಿಯ ಸಚಿವರನ್ನು ಕೆ.ಸಿ. ವೇಣುಗೋಪಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ ವೇಣುಗೋಪಾಲ, ಹಿರಿಯ ಸಚಿವರು
ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ಪ್ರತಿಕ್ರಿಯೆಯನ್ನೇ ನೀಡುತ್ತಿಲ್ಲ. ಕೆಪಿಸಿಸಿ ಕಚೇರಿಗೆ ಬಂದು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಸಾಧನೆಗಳನ್ನು ಹೇಳುತ್ತಿಲ್ಲ ಎಂದು ಹಿರಿಯ ಸಚಿವರಾದ ಕಾಗೋಡು ತಿಮ್ಮಪ್ಪ, ಆರ್.ವಿ. ದೇಶಪಾಂಡೆ, ಎಚ್.ಸಿ. ಮಹದೇವಪ್ಪ, ಎಚ್.ಕೆ. ಪಾಟೀಲ್ ಅವರ ಬಗ್ಗೆ ವೇಣುಗೋಪಾಲ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಬೆಳಿಗ್ಗೆಯಿಂದ ಪಕ್ಷದ ಪದಾಧಿಕಾರಿಗಳ ಚಳಿ ಬಿಡಿಸಿದ್ದ
ಕೆ.ಸಿ.ವೇಣುಗೋಪಾಲ ಸಂಜೆ ಸಚಿವರಿಗೂ ಚಳಿ ಬಿಡಿಸಿದ್ದು, 24/7 ಪಕ್ಷದ ಸಂಘಟನೆ ಮಾಡುವಂತೆ ತಾಕೀತು ಮಾಡಿದ್ದಾರೆ.
ಪಕ್ಷದ ಕೆಲಸ ಮಾಡಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಸಚಿವರು ಕೇವಲ ಸರ್ಕಾರದ ಕೆಲಸ ಮಾಡುವುದಲ್ಲ. ನಿಮಗೆ ವಹಿಸಿರುವ ಉಸ್ತುವಾರಿ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆಯನ್ನೂ ಮಾಡಬೇಕೆಂದು ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಸಭೆ ಬಳಿಕ ಕೆ.ಸಿ.ವೇಣುಗೋಪಾಲ ರಾತ್ರಿಯೇ ಕೇರಳಕ್ಕೆ ವಾಪಸ್ ತೆರಳಿದರು.
ಬೆಂಗಳೂರು-ಮೈಸೂರು ವೀಕ್: ಬೂತ್ ಮಟ್ಟದ ಕಾರ್ಯಕರ್ತರ ಸಮಿತಿ ರಚನೆಯಲ್ಲಿ ಬೆಂಗಳೂರು ಹಾಗೂ ಮೈಸೂರು ವಿಭಾಗ ಬಹಳ ಹಿಂದೆ ಉಳಿದಿವೆ ಎಂದು ತಿಳಿದು ಬಂದಿದೆ. ಬೆಳಗಾವಿ ವಿಭಾಗ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದು, ಕಲಬುರುಗಿ ವಿಭಾಗ ಎರಡನೇ ಸ್ಥಾನದಲ್ಲಿದೆ. ಬೆಂಗಳೂರು ವಿಭಾಗದ ಕೆಲವು ಕ್ಷೇತ್ರಗಳಲ್ಲಿ ಶಾಸಕರು ಮತ್ತು ಕಳೆದ ಬಾರಿಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಸಮಿತಿ ರಚನೆಯಲ್ಲಿ ಸಹಕಾರ
ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತಂತೆ ಸಂಬಂಧಪಟ್ಟ ಸಚಿವರನ್ನೂ ವೇಣುಗೋಪಾಲ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಮಿತಿ ರಚನೆ ಮಾಡದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನೂ ಬದಲಾಯಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಬೇಡಿಕೆ ಇಟ್ಟಿರುವುದು ಆ ಸಮುದಾಯದ ಹಕ್ಕು. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರ ಹಕ್ಕು ಪಡೆದುಕೊಳ್ಳಲು ಅವಕಾಶವಿದೆ. ಇದರ ಹಿಂದೆ ಕಾಂಗ್ರೆಸ್ ಪಾತ್ರ ಇಲ್ಲ. ಹಿಂದಿ ಹೇರಿಕೆ ಕೇಂದ್ರ ಸರ್ಕಾರದ ಕುತಂತ್ರವಾಗಿದ್ದು, ಅದಕ್ಕೂ
ಕಾಂಗ್ರೆಸ್‌ಗೂ ಸಂಬಂಧವಿಲ್ಲ.
ಕೆ.ಸಿ.ವೇಣುಗೋಪಾಲ, ಕಾಂಗ್ರೆಸ್ ಉಸ್ತುವಾರಿ
ಅಕ್ರಮ ಗಣಿ ಪ್ರಕರಣ ಶೀಘ್ರ ವರದಿ: ಪರಂ
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅಕ್ರಮ ಗಣಿಗಾರಿಕೆ ಕುರಿತು ಸರ್ಕಾರ ನೇಮಿಸಿರುವ ಅಧಿಕಾರಿಗಳ ಸಮಿತಿ ಇನ್ನೂ ವರದಿ ನೀಡಿಲ್ಲ. ಹೀಗಾಗಿ, ತಪ್ಪಿತಸ್ಥರ ವಿರುದ್ಧ ಇನ್ನೂ ಕಠಿಣ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿಯವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಹೇಳಿದ್ದ ರಾಜ್ಯ ಸರ್ಕಾರ ಚುನಾವಣೆ ಸಮೀಪಿಸುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ವಿಳಂಬವಾಗಿರುವ ಬಗ್ಗೆ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಅವರನ್ನು ಪತ್ರಕರ್ತರು ಪ್ರಶ್ನಿಸಿದರು. ಆಗ ಪರಮೇಶ್ವರ್ ಮಧ್ಯಪ್ರವೇಶಿಸಿ ಈ ಉತ್ತರ ನೀಡಿದರು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ ಶೇ.80ರಷ್ಟು ಭರವಸೆಯನ್ನು ಈಡೇರಿಸಿದ್ದೇವೆ ಎಂದು ವೇಣುಗೋಪಾಲ್ ಹೇಳಿದಾಗ, ಅದಕ್ಕೆ ಅಕ್ರಮ ಗಣಿಗಾರಿಕೆ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದ್ದನ್ನು ಪತ್ರಕರ್ತರು ನೆನಪಿಸಿದರು. ಈ ಪ್ರಶ್ನೆಗೆ ಪರಮೇಶ್ವರ್ ಉತ್ತರಿಸುತ್ತಾ, ನಮ್ಮ ಅವಧಿಯಲ್ಲಿಯೇ ಅಕ್ರಮ ಗಣಿಗಾರಿಕೆ ಮಾಡಿದವರ ವಿರುದ್ಧ ಕ್ರಮ
ಕೈಗೊಳ್ಳುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.