ಪಾರ್ವತಮ್ಮ ರಾಜ್ ಕುಮಾರ್ ವಿಧಿವಶ: ಗಣ್ಯಾತೀಗಣ್ಯರಿಂದ ಅಂತಿಮ ನಮನ
Team Udayavani, May 31, 2017, 8:38 AM IST
ಬೆಂಗಳೂರು: ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೊಳಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವರನಟ ಡಾ.ರಾಜ್‌ಕುಮಾರ್ ಅವರ ಪತ್ನಿ ,ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಬುಧವಾರ ನಸುಕಿನ 4.40 ರ ವೇಳೆಗೆ ವಿಧಿವಶರಾಗಿದ್ದಾರೆ. ಅವರಿಗೆ 77 ವರ್ಷ ಪ್ರಾಯವಾಗಿತ್ತು.
ಕೊನೆಯುಸಿರೆಳೆದಿರುವುದನ್ನು ಆಸ್ಪತ್ರೆಯ ವೈದ್ಯ ಡಾ. ಸಂಜಯ್ ಕುಲಕರ್ಣಿ ಸ್ಪಷ್ಟಪಡಿಸಿದ ಬಳಿಕ
ಪಾರ್ವತಮ್ಮ ಪಾರ್ಥಿವ ಶರೀರವನ್ನು ಪುತ್ರ ರಾಘವೇಂದ್ರ ರಾಜ್ ಕುಮಾರ್ ಅವರ ನಿವಾಸಕ್ಕೆ ತರಲಾಗಿದ್ದು, ಬೆಳಗ್ಗೆ ಸದಾಶಿವ ನಗರದ ಸ್ವಗೃಹದ ಎದುರು ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಗಣ್ಯರು ಆಗಮಿಸುವ ಹಿನ್ನಲೆಯಲ್ಲಿ ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ಪತಿಯ ಸಮಾಧಿಯ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನಡೆಯಲಿದೆ.
ಡಿಸೆಂಬರ್ 6, 1939ರಲ್ಲಿ ಮೈಸೂರಿನ ಸಾಲಿಗ್ರಾಮ ಎಂಬ ಹಳ್ಳಿಯಲ್ಲಿ ಜನಿಸಿದ ಪಾರ್ವತಮ್ಮ ಅವರು 1953 ಜೂ.25 ರಂದು ಡಾ. ರಾಜ್ ಕುಮಾರ್ ಅವರನ್ನು ವಿವಾಹವಾಗಿದ್ದರು.
ಪತಿಯ ಚಿತ್ರರಂಗದ ಪಯಣಕ್ಕೆ ಸಹಕಾರಿಯಾಗಿದ್ದ ಅವರು ಖ್ಯಾತ ನಿರ್ಮಾಪಕಿಯಾಗಿ ಹಲವು ಸೂಪರ್ ಚಿತ್ರಗಳನ್ನು ನೀಡಿದ್ದರು. ನಂಜುಂಡಿ ಕಲ್ಯಾಣ, ಗಜಪತಿ ಗರ್ವಭಂಗ ಸೇರಿದಂತೆ 80 ಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ನಿರ್ಮಾಣ ಮಾಡಿದ ಹಿರಿಮೆ ಪಾರ್ವತಮ್ಮ ಅವರದ್ದು.
ಪಾರ್ವತಮ್ಮ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು , ರಾಜಕೀಯ ರಂಗದ ಗಣ್ಯರು ಸೇರಿದಂತೆ ಚಿತ್ರಪ್ರೇಮಿಗಳು, ರಾಜ್ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ರಾಜ್ ಕುಮಾರ್ ಅವರೊಂದಿಗಿನ ಸುಮಧುರ ದಾಂಪತ್ಯದಲ್ಲಿ ಮೂವರು ಪುತ್ರರು,ಇಬ್ಬರು ಪುತ್ರಿಯರನ್ನು ಪಡೆದಿದ್ದರು. ಹಿರಿಯ ಪುತ್ರ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ,ಪುನೀತ್ ರಾಜ್‌ಕುಮಾರ್, ಪುತ್ರಿಯರಾದ ಪೂರ್ಣಿಮಾ ಮತ್ತು ಲಕ್ಷ್ಮೀ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಚಿತ್ರರಂಗಕ್ಕೆ ಗಣನೀಯ ಕೊಡುಗೆ ನೀಡಿದ್ದನ್ನು ಪುರಸ್ಕರಿಸಿ ಬೆಂಗಳೂರು ವಿಶ್ವವಿದ್ಯಾಲಯ ಪಾರ್ವತಮ್ಮ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.
ರಾಜ್ ಅಭಿನಯಿಸಿದ್ದ ತ್ರಿಮೂರ್ತಿ ಚಿತ್ರ ಪಾರ್ವತಮ್ಮ ಹುಟ್ಟು ಹಾಕಿದ್ದ ವಜ್ರೇಶ್ವರಿ ಕಂಬೈನ್ಸ್‌ನಲ್ಲಿ ನಿರ್ಮಾಣ ಮಾಡಿದ ಮೊದಲ ಚಿತ್ರವಾಗಿದ್ದು ಭಾರೀ ಯಶಸ್ಸು ಕಂಡಿತ್ತು.
ನೇತ್ರದಾನ
ಪತಿಯಂತೆಯೇ ನೇತ್ರದಾನ ಮಾಡಿ ಪಾರ್ವತಮ್ಮ ರಾಜ್‌ಕುಮಾರ್ ಅವರು ಆದರ್ಶಪ್ರಾಯರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.