Sept.30 : ಮಂಗಳೂರು ಜಿ.ಆರ್.ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಸೀಟು ಮರುಹಂಚಿಕೆ
Team Udayavani, Sep 29, 2023, 8:54 PM IST
ಬೆಂಗಳೂರು: ಡಿಗ್ರಿ ಕೋರ್ಸುಗಳಿಗೆ 2022 23ರಲ್ಲಿ ಮಂಗಳೂರಿನ ಜಿ.ಆರ್ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆದಿದ್ದ 150 ಅಭ್ಯರ್ಥಿಗಳಿಗೆ ಸೆ. 30ರ ಬೆಳಿಗ್ಗೆ 11.00 ಕ್ಕೆ ಇಲ್ಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಹಾಜರಾಗಲು ಕೆಇಎ ಸೂಚಿಸಿದೆ.
ಸುಪ್ರೀಂಕೋರ್ಟ್ ಆದೇಶ ಹಾಗೂ ಸರ್ಕಾರದ ನಿರ್ದೇಶನದಂತೆ ಈ ಅಭ್ಯರ್ಥಿಗಳಿಗೆ ಇತರೆ ಕಾಲೇಜುಗಳಲ್ಲಿ ಸೀಟು ಮರು ಹಂಚಿಕೆಯಾಗಬೇಕಾಗಿರುತ್ತದೆ. ಈ ಕಾರಣದಿಂದಾಗಿ, ಅಭ್ಯರ್ಥಿಗಳಿಗೆ ಕೆಇಎ ಕಚೇರಿಗೆ ಹಾಜರಾಗಬೇಕೆಂದು ತಿಳಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಸದರಿ ಹಂಚಿಕೆಗೆ ಸಂಬಂಧಿಸಿದಂತೆ ಸೀಟ್ ಮ್ಯಾಟ್ರಿಕ್ಸ್ನ್ನು ಕೆಇಎ ವೆಬ್ಸೈಟಿನಲ್ಲಿ ಪ್ರಕಟಿಸಿರುವುದಾಗಿ ಹೇಳಲಾಗಿದೆ.
ಅಭ್ಯರ್ಥಿಗಳು 2022 23ನೇ ಸಾಲಿನಲ್ಲಿ ಕೆಇಎ ದಿಂದ ವಿತರಿಸಲಾದ ಪ್ರವೇಶ ಪತ್ರದ, ಜಿ.ಆರ್ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆದಿರುವ ದಾಖಲಾತಿಗಳು, ಫೋಟೋ ಐಡಿ ಕಾರ್ಡ್ ಮತ್ತು ಸಂಬಂಧಿಸಿದ ಇತರೆ ದಾಖಲೆಗಳೊಂದಿಗೆ ಹಾಜರಾಗಬೇಕೆಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.