ಪ್ರತ್ಯೇಕ ಪರೀಕ್ಷೆ ವ್ಯವಸ್ಥೆ
Team Udayavani, Mar 11, 2020, 3:02 AM IST
ಬೆಂಗಳೂರು: ಮಂಗಳವಾರ ಕೊರೊನಾ ಸೋಂಕು ಪತ್ತೆಯಾದ 50 ವರ್ಷದ ಟೆಕ್ಕಿ ಪುತ್ರಿಗೆ ಬುಧವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಇದೆ. ಈ ವಿದ್ಯಾರ್ಥಿನಿಯನ್ನೂ ಆರೋಗ್ಯ ಇಲಾಖೆ ಕೊರೊನಾ ಸೋಂಕು ಶಂಕಿತಳು ಎಂದು ಗುರುತಿಸಿ, ಮನೆಯಲ್ಲೇ ಪ್ರತ್ಯೇಕ ನಿಗಾ ವಹಿಸಿದೆ. ಹೀಗಾಗಿ, ಪರೀಕ್ಷೆ ಕೈತಪ್ಪಬಹುದು ಎಂಬ ಆತಂಕವಿತ್ತು.
ಆದರೆ, ಪಿ.ಯು ಮಂಡಳಿಯು ಕೊರೊನಾ ಶಂಕಿತ ವಿದ್ಯಾರ್ಥಿನಿಗೆ ಬುಧವಾರ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಿದೆ. ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿರುವ ಪಿ.ಯು.ಮಂಡಳಿ ನಿರ್ದೇಶಕಿ ಎಂ.ಕನಗವಲ್ಲಿ, ಕೊರೊನಾ ಶಂಕಿತ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಲಂಡನ್ನಿಂದ ಬಂದ “ವರ’ ವೈದ್ಯರ ಅತಿಥಿ!: ಬೆಂಗಳೂರು ಮೂಲದ ಇಂಗ್ಲೆಂಡ್ನಲ್ಲಿ ನೆಲೆಸಿದ್ದ ಟೆಕ್ಕಿಯೊಬ್ಬರು ಮದುವೆ ಮಾಡಿಕೊಳ್ಳಲು ಬಂದು ಕೊರೊನಾ ತಪಾಸಣೆಯಿಂದ ಆಸ್ಪತ್ರೆ ಸೇರಿ, ವೈದ್ಯರ ಅತಿಥಿಯಾಗಿದ್ದಾರೆ. ಟೆಕ್ಕಿ, ಮಾರ್ಚ್ 11ಕ್ಕೆ ತನ್ನ ಮದುವೆ ನಿಗದಿಯಾಗಿದೆ ಎಂದು ಲಂಡನ್ನಿಂದ ಸೋಮವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ನಿಲ್ದಾಣದಲ್ಲಿ ಪ್ರಾಥಮಿಕ ಪರೀಕ್ಷೆಯಲ್ಲಿ ಜ್ವರ, ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನೇರವಾಗಿ ಆತನನ್ನು ರಾಜೀವ್ಗಾಂಧಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಂಡನ್ನಲ್ಲಿ ಎರಡು ಬಾರಿ ಸೋಂಕು ಪರೀಕ್ಷೆಯಾಗಿದ್ದರೂ, ಮತ್ತೂಮ್ಮೆ ಇಲ್ಲಿನ ಆಸ್ಪತ್ರೆಯಲ್ಲಿ ಸೋಂಕು ಪರೀಕ್ಷೆ ಮಾಡಿ, ಕೊರೊನಾ ತಗುಲಿಲ್ಲ ಎಂದು ದೃಢಪಟ್ಟ ಮೇಲೆ ಮಂಗಳವಾರ ಸಂಜೆ ಮನೆಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.