ಪ್ರತ್ಯೇಕ ಧರ್ಮ: ಪಂಚ ಪೀಠಾಧೀಶರ ಸಭೆ ಇಂದು
Team Udayavani, Aug 23, 2017, 9:20 AM IST
ಬೆಂಗಳೂರು: ಬೆಳಗಾವಿಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಯ ಬೃಹತ್ ರಾಲಿ ಬೆನ್ನಲ್ಲೇ ಪಂಚ
ಪೀಠಾಧೀಶರು ಪ್ರತ್ಯೇಕ ಸಭೆ ನಡೆಸಲು ನಿರ್ಧರಿಸಿದ್ದಾರೆ. ಸಭೆ ಬುಧವಾರ ಬೆಳಗ್ಗೆ 11 ಗಂಟೆಗೆ ವಿಜಯನಗರದ
ಮನುವನದಲ್ಲಿ ನಡೆಯಲಿದೆ. ಸಭೆ ನೇತೃತ್ವವನ್ನು ಪಂಚಾಚಾರ್ಯರ ಪೈಕಿ ಕೇದಾರ ಪೀಠದ ಸ್ವಾಮೀಜಿ ಹೊರತು ಪಡಿಸಿ, ಬಾಳೆಹೊನ್ನೂರು, ಉಜ್ಜಯಿನಿ, ಶ್ರೀಶೈಲ ಹಾಗೂ ಕಾಶಿ ಪೀಠದ ಸ್ವಾಮೀಜಿಗಳು ವಹಿಸಲಿದ್ದಾರೆ.
ಇವರೊಂದಿಗೆ ವಿರಕ್ತ ಮಠದ ಮುರಗೋಡು, ಹುಕ್ಕೇರಿ, ಮುನವಳ್ಳಿ ಹಾಗೂ ಕವಟಗಿಮಠ ಸ್ವಾಮೀಜಿಗಳೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುತ್ತೂರು ಮಠ ಹಾಗೂ ತುಮಕೂರು ಸಿದ್ದಗಂಗಾ ಶಿವಕುಮಾರ ಸ್ವಾಮಿಜಿಗೂ ಆಹ್ವಾನ ನೀಡಲಾಗಿದ್ದು, ಸಭೆಗೆ ಹಾಜರಾಗುವುದು ಅನುಮಾನ ಎಂದು ತಿಳಿದು ಬಂದಿದೆ.
ಸಮಾನ ಕುರ್ಚಿ: ಇದುವರೆಗೂ ವೇದಿಕೆಗಳಲ್ಲಿ ತಾವು ಎಲ್ಲರಿಗಿಂತಲೂ ಮೇಲು ಎಂದು ಬಿಂಬಿಸಲು ಎತ್ತರಕ್ಕೆ
ಕುರ್ಚಿ ಹಾಕಿಸಿಕೊಳ್ಳುತ್ತಿದ್ದ ಪಂಚ ಪೀಠಾಧೀಶರು, ವೇದಿಕೆಯಲ್ಲಿ ಸಮಾನವಾಗಿ ಕೂರಲು ಸಹಮತ ವ್ಯಕ್ತಪಡಿಸಿದ್ದಾರೆ
ಎಂದು ಹೇಳಲಾಗಿದ್ದು, ಇನ್ನು ಮುಂದೆ ಬಸವಣ್ಣನ ಹೆಸರನ್ನೂ ಬಳಸಲು ಆಸಕ್ತಿ ಹೊಂದಿದ್ದಾರೆ ಎಂದು ತಿಳಿದು
ಬಂದಿದೆ. ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಪಂಚಾಚಾರ್ಯರು
ನಿರ್ಧರಿಸಿದ್ದು, ಬುಧವಾರ ಸಂಜೆ 8 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರ ಸಮಯ ಪಡೆದುಕೊಂಡಿದ್ದಾರೆ.
ಬೆಳಗಾವಿ ಜಿಲ್ಲಾಧ್ಯಕ್ಷಗೆ ನೋಟಿಸ್: ಪ್ರತ್ಯೇಕ ಧರ್ಮಕ್ಕೆ ಬೆಂಬಲ ಸೂಚಿಸಿರುವ ವೀರಶೈವ ಮಹಾಸಭೆಯ ಬೆಳಗಾವಿ ಜಿಲ್ಲಾಧ್ಯಕ್ಷ ಶಂಕರಣ್ಣ ಬಿಜಾಪುರ ಅವರಿಗೆ ವೀರಶೈವ ಮಹಾಸಭೆ ಕಾರಣ ಕೇಳಿ ನೋಟಿಸ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.