ಜ.19ಕ್ಕೆ ಕಾಂಗ್ರೆಸ್ ವೀಕ್ಷಕರಿಂದ ಸರಣಿ ಸಭೆ: ಡಿ.ಕೆ. ಶಿವಕುಮಾರ್
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಳಿಸಿದ ಎಐಸಿಸಿ ವೀಕ್ಷಕರು
Team Udayavani, Jan 15, 2024, 8:50 PM IST
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯ ಬೆನ್ನಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಈ ಸಂಬಂಧ ದೆಹಲಿಯಿಂದ ಆಗಮಿಸುತ್ತಿರುವ ವೀಕ್ಷಕರು ಸರಣಿ ಸಭೆಗಳನ್ನು ನಡೆಸಲಿದ್ದಾರೆ.
ಜ.19ರಂದು ದೆಹಲಿಯಿಂದ ಆಗಮಿಸಲಿರುವ ವೀಕ್ಷಕರು, ಜಿಲ್ಲಾ ಉಸ್ತುವಾರಿಗಳು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಕುರಿತು ಚರ್ಚೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾ ಸಿದ್ಧತೆಗಳು ಸೇರಿ ಹಲವು ವಿಷಯಗಳು ಚರ್ಚೆಗೆ ಬರಲಿವೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದ್ದು, ಈ ಹಿನ್ನೆಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಭಾನುವಾರ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಸಂಜೆ 4ಕ್ಕೆ ನಗರದ ಇಂದಿರಾ ಭವನದಲ್ಲಿ ಲೋಕಸಭಾ ಚುನಾವಣಾ ಸಮಿತಿ ಸಭೆ ಕರೆಯಲಾಗಿದೆ. ಅಲ್ಲಿ ಎಲ್ಲ ಉಸ್ತುವಾರಿ ಸಚಿವರು ಭಾಗವಹಿಸಲಿದ್ದು, ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಅವರು ನೀಡಿದ ವರದಿಗಳ ಮೇಲೆ ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
21ಕ್ಕೆ ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆ: ಇದಲ್ಲದೆ, ಜ.21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಚುನಾವಣೆ ಸಿದ್ಧತೆಗಳು, ಸರ್ಕಾರದ ಗ್ಯಾರಂಟಿಗಳನ್ನು ಮನೆ-ಮನೆಗೆ ತಲುಪಿಸುವುದು, ಕೇಂದ್ರ ಸರ್ಕಾರದ ವೈಫಲ್ಯಗಳು ಮತ್ತು ರಾಜ್ಯಕ್ಕಾದ ಅನ್ಯಾಯ ಇಂತಹ ಹಲವು ವಿಷಯಗಳ ಬಗ್ಗೆ ಅಲ್ಲಿ ಚರ್ಚೆ ಆಗಲಿದೆ ಎಂದು ಹೇಳಿದರು.
ರಾಜ್ಯದ ಜನರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದ ಉಪಮುಖ್ಯಮಂತ್ರಿ, ಈ ವರ್ಷ 220ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪ್ರದೇಶ ಎಂದು ಘೋಷಿಸಲಾಗಿದೆ. ಮತ್ತೆ ಇಂತಹ ಪರಿಸ್ಥಿತಿ ಬರಬಾರದು. ರೈತರ ಬದುಕು ಹಸನಾಗಬೇಕು ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ಚುನಾವಣೆಗೆ ಸಿದ್ಧತೆ
ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದೆ. ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಪಕ್ಷ ಗೆಲ್ಲಲಿದೆ. ಸಚಿವರನ್ನು ಕಣಕ್ಕಿಳಿಸುವ ಬಗ್ಗೆ ಅ ಧಿಕೃತ ಮಾಹಿತಿ ಇಲ್ಲ. ಆದರೆ ಪಕ್ಷದ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾನು ಬದ್ಧನಿದ್ದೇನೆ.
-ಮಧು ಬಂಗಾರಪ್ಪ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.