ಮದ್ಯ ನಿಷೇಧಕ್ಕೆ ಗಂಭೀರ ಚಿಂತನೆ: ಸಿದ್ದರಾಮಯ್ಯ
Team Udayavani, Aug 30, 2017, 9:36 AM IST
ಮೈಸೂರು: “ಈ ಪ್ರಶಸ್ತಿ ಪ್ರದಾನ ಮಾಡಲು ನನಗೆ ನೈತಿಕತೆ ಇಲ್ಲ. ಆದರೂ ಸಂಯಮದಿಂದಿದ್ದೇನೆ ಎಂದು ಪ್ರದಾನ ಮಾಡುತ್ತಿದ್ದೇನೆ’ ಹೀಗೆಂದವರು ಮುಖ್ಯಮಂತ್ರಿ ಸಿದ್ದರಾಮಯ್ಯ. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಯಮ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
“ನಾನು ವಿದ್ಯಾರ್ಥಿ ದಿಸೆಯಲ್ಲಿ ಹಾಗೂ ಲಾಯರ್ ಆಗಿದ್ದಾಗ ಮದ್ಯಪಾನ ಮಾಡಿದ್ದೇನೆ. ಹೀಗಾಗಿ ಈ ಪ್ರಶಸ್ತಿ ಪ್ರದಾನ ಮಾಡಲು ನನಗೆ ನೈತಿಕತೆ ಇಲ್ಲ’ ಎಂದರು. ರಾಜ್ಯದಲ್ಲಿ ಮದ್ಯಪಾನ ನಿಷೇಧಕ್ಕೆ ಗಂಭೀರ ಚಿಂತನೆ ನಡೆಸುತ್ತೇನೆ. ಆದರೆ, ಒಂದು ರಾಜ್ಯದಲ್ಲಿ ನಿಷೇಧಿಸುವುದರಿಂದ ಪರಿಣಾಮ ಬೀರುವುದಿಲ್ಲ. ಬದಲಿಗೆ ಮದ್ಯವ್ಯಸನಿಗಳು ಪಕ್ಕದ ರಾಜ್ಯಗಳಿಂದ ತಂದು ಕುಡಿಯುವವರಿದ್ದಾರೆ. ಕರ್ನಾಟಕದಲ್ಲಿ ಸಾರಾಯಿ ನಿಷೇಧ ಮಾಡಿದ್ದರಿಂದ ಹಳ್ಳಿ ಜನರು ಕುಡಿಯುವುದನ್ನು ಬಿಟ್ಟಿಲ್ಲ. ಜತೆಗೆ ಹಳ್ಳಿಗಳಲ್ಲಿ ಕದ್ದು ಮದ್ಯ ಮಾರಾಟ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ, ಇಡೀ ದೇಶದಲ್ಲಿ ಮದ್ಯಪಾನ ನಿಷೇಧವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಖ್ಯಾತ ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ್, ಹುಣಸೂರು ತಾಲೂಕು ಕಟ್ಟೆಮಳಲವಾಡಿಯ ಬೆಳಕು ಸಂಸ್ಥೆ ಸಂಸ್ಥಾಪಕ
ನಿಂಗರಾಜ್ ಮಲ್ಲಾಡಿ ಹಾಗೂ ತುಮಕೂರಿನ ಆಚರ್ಡ್ ಸಂಸ್ಥೆ ಅಧ್ಯಕ್ಷ ಡಾ.ಎಚ್.ಜಿ.ಸದಾಶಿವಯ್ಯ ಅವರಿಗೆ ಸಂಯಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.