ಕೆಪಿಟಿಸಿಎಲ್ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ
Team Udayavani, Dec 23, 2023, 2:30 PM IST
ಬೆಂಗಳೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ತಾಂತ್ರಿಕ ವಿಭಾಗದಲ್ಲಿ 15-20 ವರ್ಷದಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡು ಸೇವಾ ಭದ್ರತೆ ಒದಗಿಸುವ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ಕಾನೂನಿನ ಅವಕಾಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಶನಿವಾರ ಈ ಕುರಿತು ಮಾತನಾಡಿದ ಸಚಿವರು, “ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಲ್ಲಿ ಸ್ಟೇಷನ್ ಆಪರೇಟರ್ ಗಳು, ಸ್ಟೇಷನ್ ಸಹಾಯಕರು, ಗ್ಯಾಂಗ್ ಮೆನ್ ಮತ್ತು ಮೀಟರ್ ರೀಡರ್ ಹುದ್ದೆಗಳಲ್ಲಿ ಸಾಕಷ್ಟು ಮಂದಿ 15-20 ವರ್ಷಗಳಿಗಿಂತ ಹೆಚ್ಚು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸೇವಾ ಭದ್ರತೆ ಒದಗಿಸಿ ಒಳಗುತ್ತಿಗೆ ವ್ಯಾಪ್ತಿಗೆ ತರಲು ಸರ್ಕಾರ ಯೋಚಿಸಿದೆ,” ಎಂದು ತಿಳಿಸಿದರು.
“ಈ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯು ಈಗಾಗಲೇ ಒಂದು ಸುತ್ತಿನ ಸಮಾಲೋಚನೆ ನಡೆಸಿದೆ. ವಿವಿಧ ಹುದ್ದೆಗಳಲ್ಲಿ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುತ್ತಿರುವವರನ್ನು ಒಳಗುತ್ತಿಗೆಗೆ ಒಳಪಡಿಸುವ ಕುರಿತು ನಿಯಮಗಳಲ್ಲಿ ಅವಕಾಶಗಳಿರುವ ಬಗ್ಗೆ ಪರಿಶೀಲಿಸಿ ಇದೇ ಡಿಸೆಂಬರ್ 29ರೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ವರದಿ ಆಧರಿಸಿ ಸರಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ,” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.