State Govt,ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್‌ಗೆ ಹೈಕೋರ್ಟ್ ನೋಟಿಸ್
ಸರಕಾರಿ ಕಟ್ಟಡ, ಪಾರ್ಕ್, ರಸ್ತೆಗಳಿಗೆ ಜೀವಂತ ರಾಜಕಾರಣಿಗಳ ಹೆಸರು
Team Udayavani, Mar 12, 2024, 9:08 PM IST
ಬೆಂಗಳೂರು: ಸರಕಾರದ ಅನುದಾನದಲ್ಲಿ ನಿರ್ಮಿಸಲಾದ ಸರಕಾರಿ ಕಟ್ಟಡ, ರಸ್ತೆ ಇತ್ಯಾದಿಗಳಿಗೆ ಜೀವಂತವಿರುವ ರಾಜಕಾರಣಿಗಳ ಹೆಸರು ಇಡುವುದನ್ನು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಮುಖ್ಯವಾಗಿ ದಾವಣಗೆರೆಯಲ್ಲಿ ಪಾರ್ಕ್, ಬಸ್ ನಿಲ್ದಾಣ, ಜಿ.ಪಂ ಸಭಾಂಗಣ ಮತ್ತಿತರ ಸರಕಾರಿ ಕಟ್ಟಡಗಳಿಗೆ ಸ್ಥಳೀಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹೆಸರು ಇಟ್ಟಿರುವುದನ್ನು ಅರ್ಜಿಯಲ್ಲಿ ಪ್ರಶ್ನಿಸಿಲಾಗಿದ್ದು, ಅದರಂತೆ ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ, ದಾವಣಗೆರೆ ಜಿಲ್ಲಾಧಿಕಾರಿ, ದಾವಣಗೆರೆ ನಗರ ಸಭೆ, ದಾವಣಗೆರೆ ಜಿಲ್ಲಾ ಪಂಚಾಯತ್‌ಗೂ ನೋಟಿಸ್ ಜಾರಿ ಮಾಡಲಾಯಿತು.
ಈ ಬಗ್ಗೆ ದಾವಣಗೆರೆಯ ವಕೀಲ ಎ.ಸಿ. ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿದ್ದು, ವಿಚಾರಣೆಯನ್ನು ಮೇ 29ಕ್ಕೆ ಮುಂದೂಡಲಾಯಿತು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಂ. ವಿನೋದ್ ಕುಮಾರ್, ಸರ್ಕಾರದ ಅನುದಾನಲ್ಲಿ ಕಟ್ಟಲಾದ ಸರ್ಕಾರಿ ಕಟ್ಟಡಗಳಿಗೆ ಜೀವಂತ ರಾಜಕಾರಣಿಗಳ ಹೆಸರು ಇಡಬಾರದು ಎಂದು 2012ರಲ್ಲಿ ಇದೇ ಹೈಕೋರ್ಟ್ ಆದೇಶವೊಂದನ್ನು ನೀಡಿದೆ. ಚನ್ನಗಿರಿ ಮಾಜಿ ಶಾಸಕ ಮಾಡಳು ವಿರೂಪಾಕ್ಷಪ್ಪ ಅವರನ್ನು ಹೆಸರನ್ನು ತಾಲೂಕ ಕ್ರೀಡಾಂಗಣಕ್ಕೆ ಇಡಲಾಗಿತ್ತು. ಸರ್ಕಾರದ ಅನುದಾನದಲ್ಲಿ ಕಟ್ಟಲಾದ ಆಟದ ಮೈದಾನಕ್ಕೆ ಸನ್ಮಾನ್ಯ ಮಾಡಾಳು ವಿರೂಪಾಕ್ಷಪ್ಪ ಆಟದ ಮೈದಾನ’ ಎಂದು ನಾಮಕರಣ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿತ್ತು. ಆಗ ಹೈಕೋರ್ಟ್ ಆದೇಶದಂತೆ ಮಾಡಾಳು ವಿರೂಪಾಕ್ಷಪ್ಪ ಆಟದ ಮೈದಾನ’ದ ಹೆಸರು ಬದಲಾಯಿಸಿ ತಾಲೂಕು ಆಟದ ಮೈದಾನ ಎಂದು ನಾಮಕರಣ ಮಾಡಲಾಗಿತ್ತು.
ಅದೇ ರೀತಿ ದಾವಣಗೆರೆಯಲ್ಲಿ ಸರ್ಕಾರದ ಅನುದಾನದಲ್ಲಿ ಕಟ್ಟಲಾದ ಅನೇಕ ಕಟ್ಟಡಗಳು, ಪಾರ್ಕ್, ಬಸ್ ನಿಲ್ದಾಣ, ರಸ್ತೆಗಳಿಗೆ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ ಅವರ ಹೆಸರಗಳನ್ನು ಇಡಲಾಗಿದೆ. ಇದನ್ನು ತೆರವುಗೊಳಿಸುವಂತೆ ಕೋರಿ ನೀಡಲಾದ ಮನವಿಗೆ ಜಿಲ್ಲಾಡಳಿತ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಾಲಯದ ಗಮನ ಸೆಳೆದರು.
ಅದರಂತೆ, ಹೈಕೋರ್ಟ್ 2012ರಲ್ಲಿ ನೀಡಿದ ಆದೇಶ ಆಧರಿಸಿ ಹಾಗೂ ಅರ್ಜಿದಾರರು 2023ರ ಜುಲೈ 25ರಂದು ಸಲ್ಲಿಸಿರುವ ಮನವಿಯಂತೆ ಸರ್ಕಾರದ ಅನುದಾನದಲ್ಲಿ ಕಟ್ಟಲಾಗಿರುವ ಕಟ್ಟಡಗಳಿಗೆ ಇನ್ನೂ ಜೀವಂತವಾಗಿರುವ ರಾಜಕಾರಣಿಗಳಾದ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹೆಸರು ಇಟ್ಟಿರುವುದನ್ನು ತೆರವುಗೊಳಿಸಲು ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು
ಅರ್ಜಿಯಲ್ಲಿ ಏನಿದೆ?
ದಾವಣಗೆರೆ ನಗರಸಭೆಯು ಸಾರ್ವಜನಿಕರ ಹಣದಿಂದ ಹಳೆ ಪುಣೆ-ಬೆಂಗಳೂರು ರಸ್ತೆಯಲ್ಲಿ ಕಟ್ಟಿರುವ ಬಸ್ ನಿಲ್ದಾಣಕ್ಕೆ ಶಾಮನೂರು ಶಿವಶಂಕರಪ್ಪ ಬಸ್ ಸ್ಟಾಂಡ್’ ಎಂದು ಹೆಸರಿಡಲಾಗಿದೆ. ಕುಂದವಾಡ ಗ್ರಾಮದಲ್ಲಿರುವ ಕುಂದವಾಡ ಕೆರೆ ಸಹ ದಾವಣಗೆರೆ ನಗರಸಭೆ ನಿರ್ಮಾಣ ಮಾಡಿ, ನಿರ್ವಹಣೆ ಮಾಡುತ್ತಿದೆ. ದಾವಣಗೆರೆ ನಗರದ ಕುಡಿಯುವ ನೀರಿಗಾಗಿ ಬಳಸಲಾಗಿರುವ ಈ ಕೆರೆಯ ಹೆಸರನ್ನು ಎಸ್.ಎಸ್. ಮಲ್ಲಿಕಾರ್ಜುನ ಸಾಗರ’ ಎಂದು ಇಡಲಾಗಿದೆ. ಜಿ.ಪಂ ಸಭಾಂಗಣಕ್ಕೆ ಎಸ್.ಎಸ್. ಮಲ್ಲಿಕಾರ್ಜುನ ಸಭಾಂಗಣ ಎಂದು ಹೆಸರಿಡಲಾಗಿದೆ. ನಗರಸಭೆಯ ಸಭಾಂಗಣಕ್ಕೆ ಡಾ. ಶಾಮನೂರು ಶಿವಶಂಕರಪ್ಪ ಸಭಾಂಗಣ’ ಎಂದು ನಾಮಕರಣ ಮಾಡಲಾಗಿದೆ. ನಗರದಲ್ಲಿರುವ ಪಾರ್ಕ್‌ಗೆ ಡಾ. ಶಾಮನೂರು ಶಿವಶಂಕರಪ್ಪ ಉದ್ಯಾನವನ’ ಎಂದು ಹೆಸರಿಡಲಾಗಿದೆ. ಹುಡ್ಕೊà ಬಡಾವಣೆಗೆ ಎಸ್‌ಎಸ್‌ಎಂ ನಗರ’ (ಡಾ. ಶಾಮನೂರು ಶಿವಶಂಕರಪ್ಪ ನಗರ ಎಂದು ಹೆಸರಿಡಲಾಗಿದೆ. ಇದು ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.