ಶಾ ಎಫೆಕ್ಟ್: ಬಿಡುವಿಲ್ಲದ ಸರಣಿ ಸಭೆ

Team Udayavani, Oct 2, 2017, 7:10 AM IST

shah.jpg

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತೆ ರಾಜ್ಯಕ್ಕೆ ಬರಲು ದಿನಗಣನೆ ಆರಂಭವಾಗುತ್ತಿದ್ದಂತೆ ಪಕ್ಷದ ರಾಜ್ಯ ಘಟಕ ತನ್ನ ಚಟುವಟಿಕೆಗಳನ್ನು ಚುರುಕುಗೊಳಿಸಿದೆ. ಮುಂಬರುವ ವಿಧಾನಸಭೆ ಚುನಾವಣೆ ಮತ್ತು ನವೆಂಬರ್‌ನಲ್ಲಿ ನಡೆಯಲಿರುವ ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಗಳ ಸಿದಟಛಿತೆ ಕುರಿತಂತೆ ಭಾನುವಾರ ಸರಣಿ ಸಭೆಗಳನ್ನು ನಡೆಸಿದೆ. ನಗರದ ಹೊರವಲಯದ ಕಲ್ಯಾಣ ಮಂಟಪದಲ್ಲಿ ವಿಧಾನಸಭೆ ಚುನಾವಣೆಗಾಗಿ ನೇಮಕಗೊಂಡಿರುವ ಪೂರ್ಣಾವಧಿ ವಿಸ್ತಾರಕರ ಪ್ರಶಿಕ್ಷಣ ವರ್ಗ ನಡೆದರೆ, ಮಲ್ಲೇಶ್ವರದಲ್ಲಿರುವ
ರಾಜ್ಯ ಬಿಜೆಪಿ ಕಚೇರಿಯಲ್ಲಿ ನವಕರ್ನಾಟಕ ನಿರ್ಮಾಣ ಪರಿವರ್ತನಾ ರಥಯಾತ್ರೆ ಜಿಲ್ಲಾ ಯಾತ್ರಾ ಪ್ರಮುಖರು, ಇತ್ತೀಚೆಗೆ ನೇಮಕಗೊಂಡಿರುವ ಸಾಂಪ್ರದಾಯಿಕ ಪ್ರಚಾರ ಸಮಿತಿ ಮತ್ತು ಅಸಾಂಪ್ರದಾಯಿಕ ಪ್ರಚಾರ ಸಮಿತಿ
ಸದಸ್ಯರೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗಿದೆ.

ಕಳೆದ ಆಗಸ್ಟ್‌ನಲ್ಲಿ ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್‌ ಶಾ, ಪಕ್ಷದ ರಾಜ್ಯ ಘಟಕದ ನಿಷ್ಕ್ರಿಯತೆ, ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಸಂಘಟನೆ ಕಾರ್ಯ ಚುರುಕುಗೊಳಿಸುವಂತೆ ತಾಕೀತು ಮಾಡಿದ್ದರು. ಅಲ್ಲದೆ, ಭಿನ್ನಮತ ದೂರವಿಟ್ಟು ಒಗ್ಗಟ್ಟಿನ ಕೆಲಸ ಮಾಡುವಂತೆ ನಿರ್ದೇಶಿಸಿದ್ದರು. ಅದಾದ ಬಳಿಕ ಸಂಘಟನಾ ಕೆಲಸಗಳನ್ನು ಚುರುಕುಗೊಳಿಸಿದ್ದ ಬಿಜೆಪಿ ಸರಣಿ ಸಭೆಗಳನ್ನು ನಡೆಸಿತ್ತು. ಆದರೆ, ಒಂದು ವಾರದಿಂದ ಮತ್ತೆ ಪಕ್ಷದಲ್ಲಿ ಅಸಮಾಧಾನ ಹೊಗೆಯಾಡತೊಡಗಿತ್ತು.

ಈ ಮಧ್ಯೆ ಅ. 2ರಿಂದ ಕೇರಳ ಪ್ರವಾಸದಲ್ಲಿರುವ ಅಮಿತ್‌ ಶಾ, ಅ. 4ರಂದು ಮಂಗಳೂರಿನಲ್ಲಿ ಪಕ್ಷದ ಪ್ರಮುಖರು ಹಾಗೂ ಸಾಂಪ್ರದಾಯಿಕ ಪ್ರಚಾರ ಸಮಿತಿ ಮತ್ತು ಅಸಾಂಪ್ರದಾಯಿಕ ಪ್ರಚಾರ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಘಟಕ ಪಕ್ಷ ಸಂಘಟನೆ ಕುರಿತಂತೆ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಬೇಕಿದ್ದು, ಅದಕ್ಕಾಗಿ ಗುರುವಾರ ಸರಣಿ ಸಭೆಗಳನ್ನು ಏರ್ಪಡಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ಶಾ ರಾಜ್ಯ ಮುಖಂಡರಿಗೆ ನೀಡಿರುವ ಸೂಚನೆಗಳ ಪೈಕಿ ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆ ವಿಷಯ ಪ್ರಮುಖವಾದದ್ದು. ಈ ಹಿನ್ನೆಲೆಯಲ್ಲಿ ಹೊರವಲಯದಲ್ಲಿ ನಡೆದ ಪೂರ್ಣಾವಧಿ ವಿಸ್ತಾರಕರ ಸಭೆಯಲ್ಲಿ ವಿಸ್ತಾರಕರು ಇದುವರೆಗೆ ಮಾಡಿರುವ ಕೆಲಸಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಪ್ರಮುಖವಾಗಿ ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆ ಕುರಿತಂತೆ ವಿವರ ಪಡೆಯಲಾಗಿದೆ.

ಗೈರು ಹಾಜರಿ ನಡುವೆ ಸಭೆ: ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತು ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಬೂತ್‌ ಸಮಿತಿ, ಸಾಂಪ್ರದಾಯಿಕ ಪ್ರಚಾರ ಸಮಿತಿ ಮತ್ತು ಅಸಾಂಪ್ರದಾಯಿಕ ಪ್ರಚಾರ (ಸಾಮಾಜಿಕ ಜಾಲತಾಣ ಪ್ರಚಾರ) ಸಮಿತಿಗಳನ್ನು ರಚಿಸಿದ್ದು, ಈಗಾಗಲೇ ಬೂತ್‌ ಸಮಿತಿ ಸಭೆ ನಡೆದಿದೆ. ಉಳಿದೆರಡು ಸಮಿತಿಗಳ ಸಭೆ ಬಾಕಿ ಇದ್ದು, ಅಮಿತ್‌ ಶಾ ಬರುವುದರೊಳಗಾಗಿ ಈ ಸಭೆಗಳನ್ನು ನಡೆಸಬೇಕೆಂಬ ಉದ್ದೇಶದಿಂದ ಸಾಂಪ್ರದಾಯಿಕ ಪ್ರಚಾರ ಸಮಿತಿ
ನೇತೃತ್ವ ವಹಿಸಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮತ್ತು ಅಸಾಂಪ್ರದಾಯಿಕ ಪ್ರಚಾರ ಸಮಿತಿ ನೇತೃತ್ವ
ವಹಿಸಿರುವ ಸಂಸದ ಪ್ರಹ್ಲಾದ ಜೋಶಿ ಅವರ ಗೈರು ಹಾಜರಿ ನಡುವೆಯೇ ಭಾನುವಾರ ಎರಡೂ ಸಭೆಗಳನ್ನು ಪಕ್ಷದ
ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮತ್ತು ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಅವರು ನಡೆಸಿದ್ದಾರೆ.

ಟಾಪ್ ನ್ಯೂಸ್

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.