Shimoga Airport; ಆ.31ರಿಂದ ವಿಮಾನಯಾನ ಸೇವೆ ಆರಂಭ
Team Udayavani, Aug 29, 2023, 2:47 PM IST
ಬೆಂಗಳೂರು: ಶಿವಮೊಗ್ಗದಲ್ಲಿ ರಾಜ್ಯ ಸರಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ (ಆ.31) ಆರಂಭವಾಗಲಿವೆ.ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಎತ್ತರವನ್ನು ತಲುಪಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಮಂಗಳವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ವಿಮಾನಯಾನ ಸೇವೆಗಳ ಮೊದಲ ಹೆಜ್ಜೆಯಾಗಿ ಇಂಡಿಗೋ ಸಂಸ್ಥೆಯು ವಿಮಾನವು ಗುರುವಾರ ಬೆಳಿಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.05ಕ್ಕೆ ಶಿವಮೊಗ್ಗ ತಲುಪಲಿದೆ. ಮೊದಲ ಯಾನದಲ್ಲಿ ತಾವೂ ಪ್ರಯಾಣಿಸಲಿದ್ದು, ಜೊತೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಮಲೆನಾಡು ಭಾಗದ ಜನಪ್ರತಿನಿಧಿಗಳೂ ಇರಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿದೊಡನೆಯೇ ವಾಟರ್ ಸೆಲ್ಯೂಟ್ ಮೂಲಕ ಸಂಭ್ರಮಾಚರಣೆ ಮಾಡಲಾಗುವುದು” ಎಂದಿದ್ದಾರೆ.
ಇದು ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು, ಇದಕ್ಕೆ 450 ಕೋಟಿ ರೂ. ವಿನಿಯೋಗಿಸಲಾಗಿದೆ. ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆ ಎಂಬಲ್ಲಿ 779 ಎಕರೆ ಜಾಗದಲ್ಲಿ ಏರ್‍ಪೋರ್ಟ್ ಮೈದಾಳಿದ್ದು, ಇದರಲ್ಲಿ ಏರ್‍ಬಸ್ ಮಾದರಿಯ ವಿಮಾನಗಳೂ ಬಂದಿಳಿಯುವ ಅನುಕೂಲಗಳನ್ನು ಕಲ್ಪಿಸಲಾಗಿದೆ. ಇದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ಅವರು ವಿವರಿಸಿದ್ದಾರೆ.
ಮುಂದಿನ ದಿನಗಳಲ್ಲಿ ಶಿವಮೊಗ್ಗದಿಂದ ದೆಹಲಿ, ಮುಂಬೈ, ಹೈದರಾಬಾದ್, ಚೆನ್ನೈ, ಗೋವಾ ಮುಂತಾದ ನಗರಗಳಿಗೆ ನೇರ ವಿಮಾನ ಸಂಪರ್ಕ ಕಲ್ಪಿಸಲು ಪ್ರಯತ್ನಿಸಲಾಗುವುದು. ತಕ್ಷಣಕ್ಕೆ ಬೆಂಗಳೂರಿನಲ್ಲಿ ಈ ಸ್ಥಳಗಳಿಗೆ ಕನೆಕ್ಟಿಂಗ್ ವಿಮಾನಗಳು ಲಭ್ಯ ಇರಲಿವೆ. ಜೊತೆಗೆ, ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ವಿಸ್ತರಿಸಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅದು ಅಂತಿಮ ಹಂತದಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮೂಲ ಯೋಜನೆಯಲ್ಲಿ ಈ ಏರ್‍ಪೋರ್ಟ್ ಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಇರಲಿಲ್ಲ. ಈಗ ಅದನ್ನು ಪರಿಷ್ಕರಿಸಿ, ಆ ಅನುಕೂಲವನ್ನೂ ನೀಡಲಾಗಿದೆ. 4,340 ಚದರ ಮೀಟರ್ ವಿಸ್ತೀರ್ಣದ ಪ್ರಯಾಣಿಕರ ಟರ್ಮಿನಲ್ ಮತ್ತು 3,050 ಮೀಟರ್ ಉದ್ದದ ರನ್‌ವೇಯನ್ನು ಇದು ಒಳಗೊಂಡಿದೆ. ಮುಂದಿನ ಮೂರು ವಾರಗಳ ವಿಮಾನಯಾನ ಟಿಕೆಟ್ ಮುಂಗಡವಾಗಿ ಬುಕಿಂಗ್ ಆಗಿದ್ದು, ಒಳ್ಳೆಯ ಬೇಡಿಕೆ ವ್ಯಕ್ತವಾಗಿದೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.