ಶಿರಾಡಿ ಘಾಟ್ ಬಂದ್ ಮಾಡುವುದಿಲ್ಲ: ಸಚಿವ ಸಿ. ಸಿ. ಪಾಟೀಲ್ ಸ್ಪಷ್ಟನೆ
Team Udayavani, Jul 11, 2022, 5:38 PM IST
ಸಕಲೇಶಪುರ: ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಶಿರಾಡಿಘಾಟ್ ದುರಸ್ತಿಯ ನಿಮಿತ್ತ ಈ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ ಮಾಡುವುದಿಲ್ಲ. ಆದರೆ ರಸ್ತೆ ದುರಸ್ತಿ ಕಾಮಗಾರಿ ಮುಂದುವರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಮತ್ತು ಶಿರಾಡಿ ಘಾಟ್ ನಡುವಿನ ಹೆದ್ದಾರಿ ಇತರ ಸೇತುವೆಗಳ ಕಾಮಗಾರಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಸಕಲೇಶಪುರ ಹಾಗೂ ಶಿರಾಡಿ ಘಾಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಶಿರಾಡಿಘಾಟ್ ಮೂಲಕ ಪ್ರತಿನಿತ್ಯ ಸರಾಸರಿ 30 ಸಾವಿರ ವಾಹನಗಳು ಸಂಚರಿಸುತ್ತವೆ. ಒಂದು ವೇಳೆ ರಸ್ತೆ ಬಂದ್ ಮಾಡಿದರೆ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತದೆ. ಆದ್ದರಿಂದ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟು, ಮತ್ತೊಂದು ಭಾಗದಲ್ಲಿ ದುರಸ್ತಿ ಕಾಮಗಾರಿಗಳಿಗೆ ಅವಕಾಶ ಮಾಡಿಕೊಡಲಾಗುವುದು, ತೀರಾ ಅನಿವಾರ್ಯವಾದರೆ ಮಾತ್ರ ಏಕಮುಖ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು, ಸದ್ಯಕ್ಕಂತೂ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಎಂದು ಸಮಜಾಯಿಷಿ ನೀಡಿದರು.
ಮಳೆ ಮತ್ತಿತರ ನೈಸರ್ಗಿಕ ಪ್ರಕೋಪಗಳಿಂದ ರಸ್ತೆಗಳು ಅಥವಾ ಸೇತುವೆಗಳು ಹಾನಿಗೊಳಗಾದರೆ ದುರಸ್ತಿ ಕಾಮಗಾರಿ ನಡೆಸುವುದಕ್ಕೆ ಯಾವುದೇ ಹಣಕಾಸು ತೊಂದರೆ ಇಲ್ಲ. ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ: ಸಚಿವ ಪ್ರಭು ಚವ್ಹಾಣ್
ಸ್ಥಳೀಯ ಶಾಸಕ ಕುಮಾರಸ್ವಾಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಡಾ. ಕೃಷ್ಣ ರೆಡ್ಡಿ, ಮತ್ತಿತರ ಅಧಿಕಾರಿಗಳು ಸಚಿವರ ಹೆದ್ದಾರಿ ಪರಿಶೀಲನೆ ಸಂದರ್ಭದಲ್ಲಿ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.