![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Aug 22, 2022, 5:41 PM IST
ಶಿರಾಳಕೊಪ್ಪ: ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಶುರುವಾದ ಗಲಾಟೆಯಿಂದಾಗಿ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸೋಮವಾರ ದಿಢೀರ್ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.
ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ವಲಯ ಮಟ್ಟದ ಶಾಲಾ ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರಕ್ಕಾಗಿ ಗಲಾಟೆಯಾಗಿದೆ. ಮಕ್ಕಳೊಂದಿಗೆ ಬಂದಿದ್ದ ಪೋಷಕರು ಕೂಡ ಮಾತಿಗೆ ಮಾತು ಬೆಳೆಸಿದ್ದಾರೆ. ಬಳಿಕ ಕ್ರೀಡಾಂಗಣದಿಂದ ಹೊರ ಬಂದ ವೇಳೆ ಗಲಾಟೆ ಹೆಚ್ಚಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಯುವಕನ ಮೇಲೆ ಹಲ್ಲೆ
ಕ್ರೀಡಾಂಗಣದಿಂದ ಹೊರ ಬಂದ ಒಂದು ಕೋಮಿನ ಯುವಕರ ಗುಂಪು ಮತ್ತೊಂದು ಕೋಮಿನ ಗುಂಪಿನ ಯುವಕನ ಮೇಲೆ ಹಲ್ಲೆ ನಡೆಸಿದೆ. ಇದರಿಂದ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.
ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದು, ಗಸ್ತು ಆರಂಭಿಸಿದ್ದಾರೆ. ಗಲಾಟೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.