Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ
ಬಿಎಚ್‌ಇಲ್‌ನಲ್ಲಿ ಉದ್ಯೋಗ, ನೇಮಕಾತಿ ಪತ್ರ ವಿತರಿಸಿದ ಎಚ್‌ಡಿಕೆ
Team Udayavani, Oct 19, 2024, 8:55 PM IST
ಮಂಡ್ಯ: ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿಯ ಗುಡ್ಡ ಕುಸಿತ ದುರಂತದಲ್ಲಿ ಪಾಲಕರನ್ನು ಕಳೆದುಕೊಂಡು ಅನಾಥಳಾಗಿದ್ದ ಯುವತಿಗೆ ಮಂಡ್ಯದಲ್ಲಿ ನಡೆದ “ಮಂಡ್ಯ ಟೂ ಇಂಡಿಯಾ’ ಬೃಹತ್ ಉದ್ಯೋಗ ಮೇಳದಲ್ಲಿ ಉದ್ಯೋಗ ಲಭಿಸಿದ್ದು, ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ನೇಮಕಾತಿ ಪತ್ರ ವಿತರಿಸಿದರು.
ಜು. 16ರಂದು ಸಂಭವಿಸಿದ ಶಿರೂರು ಗುಡ್ಡ ಕುಸಿತದಲ್ಲಿ ಮೃತರಾದ ಜನಾರ್ದನ್ ನಾಯ್ಕ ಪುತ್ರಿ ಕೃತ್ತಿಕಾ ಜೆ.ನಾಯ್ಕಗೆ ಕೇಂದ್ರ ಸರಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪೆನಿ (ಬಿಎಚ್‌ಇಲ್)ಯಲ್ಲಿ ಉದ್ಯೋಗ ದೊರೆತಿದೆ. ಈ ಹಿಂದೆ ದುರಂತ ಸ್ಥಳಕ್ಕೆ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾಗ ಕೃತ್ತಿಕಾಗೆ ಉದ್ಯೋಗ ನೀಡುವ ಭರವಸೆ ನೀಡಿದ್ದರು. 6150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ನೇರ ನೇಮಕಾತಿ ಪತ್ರ ನೀಡಲಾಗಿದೆ. ಉಳಿದವರಿಗೂ ಡಿಸೆಂಬರ್ ವೇಳೆಗೆ ಉದ್ಯೋಗ ಕೊಡಿಸಲಾಗುವುದು ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.