ಇಂದು ಮೋದಿ ಪವರ್ ಶೋ: ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ
ಬೆಳಗಾವಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Team Udayavani, Feb 27, 2023, 7:00 AM IST
ಬೆಂಗಳೂರು/ಶಿವಮೊಗ್ಗ/ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಕ್ಕೆ ದಿನಗಣನೆ ಆರಂಭ ಆಗುತ್ತಿರುವಂತೆಯೇ, ಸೋಮವಾರ ಮಲೆ ನಾಡು ಹಾಗೂ ಗಡಿನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಿರುಸಿನ ಪ್ರವಾಸ ನಡೆಸಲಿದ್ದಾರೆ.
ಪ್ರಧಾನಿ ಮೋದಿ ಅವರು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಹಾಗೂ ಬೆಳಗಾವಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವುದರ ಜತೆಗೆ ಸುಮಾರು 10 ಕಿ.ಮೀ. ರೋಡ್‌ಶೋ ನಡೆಸಲಿದ್ದಾರೆ. ಹಲವು ರಾಜಕೀಯ ಸಂದೇಶಗಳನ್ನೂ ಹೊತ್ತು ತರಲಿ ರುವ ಮೋದಿ, ರಾಜ್ಯ ಬಿಜೆಪಿಗೆ ಶಕ್ತಿ ತುಂಬಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟಿದ ದಿನದಂದೇ ಅವರ ಕನಸಾದ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸುವುದರೊಂದಿಗೆ ತಾವು ಬಿಎಸ್‌ವೈ ಅವರನ್ನು ಕಡೆಗಣಿಸಿಲ್ಲ ಎಂಬ ಸೂಚ್ಯ ಸಂದೇಶವೂ ಈ ಭೇಟಿಯ ಹಿಂದಿದೆ. “ಚುನಾವಣ ರಾಜಕೀಯ’ದಿಂದ ನಿವೃತ್ತಿ ಘೋಷಿಸಿದ ಬಳಿಕ ಯಡಿಯೂರಪ್ಪ ಅವರ ತವರು ಜಿಲ್ಲೆಗೆ ಆಗಮಿಸಲಿರುವ ಪ್ರಧಾನಿ, ಬಿಎಸ್‌ವೈ ಅವರ ಶಕ್ತಿಯನ್ನು ಪೂರ್ಣಪ್ರಮಾಣದಲ್ಲಿ ಚುನಾವಣೆಗೆ ಬಳಸಿಕೊಳ್ಳುವ ಇರಾದೆ ಹೊಂದಿರುವುದು ಸ್ಪಷ್ಟವಾಗಿದೆ.
ಸೋಮವಾರ ಬೆಳಗ್ಗೆ 11.30 ಕ್ಕೆ ಪ್ರಧಾನಿಯವರು ಶಿವಮೊಗ್ಗಕ್ಕೆ ಆಗಮಿಸಲಿದ್ದು, ವಿಮಾನ ನಿಲ್ದಾಣ ಉದ್ಘಾ ಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಮಾನ ನಿಲ್ದಾಣದ ಉದ್ಘಾಟನೆ ಬಳಿಕ ನಡೆ ಯುವ ಸಮಾ ರಂಭ ದಲ್ಲಿ 1,789 ಕೋ. ರೂ.ಗಳ ಕಾಮಗಾರಿಗಳ ಉದ್ಘಾಟನೆ ಹಾಗೂ 3,337 ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸ್ಮಾರ್ಟ್‌ಸಿಟಿ ಕಾಮಗಾರಿಗಳು, ಶಿಮುಲ್ ಶಿವಮೊಗ್ಗ ಕೇಂದ್ರ ಡೇರಿ ಆವರಣದಲ್ಲಿ ಹಾಲು, ಮೊಸರು ಮತ್ತು ಮಜ್ಜಿಗೆ ಪ್ಯಾಕಿಂಗ್ ಘಟಕ ಕಟ್ಟಡ ಹಾಗೂ ನಗರದ ಎಪಿಎಂಸಿ ಆವರಣದಲ್ಲಿ “ಮ್ಯಾಮ್‌ಕೋಸ್’ ಆಡಳಿತ ಕಚೇರಿ ಕಟ್ಟಡ ಉದ್ಘಾ ಟನೆ ಸಹಿತ ಹಲವು ಕಾರ್ಯಕ್ರಮ ಇವೆ.
ಶ್ರೀಸಾಮಾನ್ಯರ ಸ್ವಾಗತ
ಅನಂತರ ಕುಂದಾನಗರಿ ಬೆಳಗಾವಿಗೆ ಮಧ್ಯಾಹ್ನ ಪ್ರಧಾನಿ ತೆರಳಲಿದ್ದು, ಅವರನ್ನು ರೈತ ಮಹಿಳೆ. ಆಟೋಚಾಲಕ, ಪೌರ ಕಾರ್ಮಿಕ ಮಹಿಳೆ, ನೇಕಾರ ಹಾಗೂ ಕಟ್ಟಡ ಕಾರ್ಮಿಕ- ಹೀಗೆ ಐವರು ಜನಸಾಮಾನ್ಯರು ಸ್ವಾಗತಿಸುವುದು ವಿಶೇಷ.
ಮಧ್ಯಾಹ್ನ 2 ಗಂಟೆಗೆ 10.5 ಕಿ.ಮೀ. ರೋಡ್ ಶೋ ದಲ್ಲಿ ಭಾಗವಹಿಸುತ್ತಾರೆ. ಅನಂತರ ಮಾಲಿನಿ ಸಿಟಿ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದ್ದು, ಅಲ್ಲಿ ಸುಮಾರು 2,200 ಕೋಟಿ ರೂ. ವೆಚ್ಚದ ನಾನಾ ಯೋಜನೆಗಳಿಗೆ ಚಾಲನೆ-ಶಂಕುಸ್ಥಾಪನೆ ಮಾಡಲಿದ್ದಾರೆ. ಇದೇ ವೇಳೆ ಅವರು, “ಕಿಸಾನ್ ಸಮ್ಮಾನ’ ಯೋಜನೆಯ 13ನೇ ಕಂತಿನ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಿದ್ದಾರೆ. 1,120 ಕೋ. ರೂ. ವೆಚ್ಚದ ಜಲಜೀವನ ಮಿಷನ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಪೂರ್ಣ ನವೀಕರಣಗೊಂಡ ರೈಲು ನಿಲ್ದಾಣ, ಬೆಳಗಾವಿ-ಘಟಪ್ರಭಾ ದ್ವಿಪಥ ರೈಲು ಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. 2 ಲಕ್ಷಕ್ಕೂ ಹೆಚ್ಚಿನ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.
ರಾಜ್ಯದಲ್ಲಿ ದೀರ್ಘ ರೋಡ್ ಶೋ
ಇದೇ ಮೊದಲ ಬಾರಿಗೆ ಬೆಳಗಾವಿಯಲ್ಲಿ ಆಯೋಜಿಸಿರುವ ಐತಿಹಾಸಿಕ ರೋಡ್ ಶೋದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಕಿತ್ತೂರ ಚನ್ನಮ್ಮ ವೃತ್ತ, ಬೋಗಾರ್ ವೇಸ್, ಕಪಿಲೇಶ್ವರ ಮಂದಿರ ರಸ್ತೆ ಸಹಿತ ಸುಮಾರು 10.5 ಕಿ.ಮೀ.ನಷ್ಟು ದೂರ ಸಾಗಿ ಯಡಿಯೂರಪ್ಪ ಮಾರ್ಗದಲ್ಲಿರುವ “ಮಾಲಿನಿ ಸಿಟಿ’ಯಲ್ಲಿ ನಿರ್ಮಿಸಿರುವ ಬೃಹತ್ ವೇದಿಕೆಯಲ್ಲಿ 2 ಲಕ್ಷಕ್ಕೂ ಅಧಿಕ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕರ್ನಾಟಕಕ್ಕೆ ಸಂಬಂಧಿಸಿ ಪ್ರಧಾನಿ ಇದೇ ಮೊದಲ ಬಾರಿಗೆ ಇಷ್ಟು ದೂರ ರೋಡ್ ಶೋ ನಡೆಸಲಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿ ಪ್ರವಾಸ ಕೈಗೊಂಡಿದ್ದಾಗ 8 ಕಿ.ಮೀ. ರೋಡ್ ಶೋ ನಡೆಸಿದ್ದರು.
ಮರೆಯಲಾಗದ ಕ್ಷಣ
ನರೇಂದ್ರ ಮೋದಿ ಅವರಿಂದ ವಿಮಾನ ನಿಲ್ದಾಣ ಉದ್ಘಾ ಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಸೋಮವಾರದ ದಿನ ಐತಿ ಹಾಸಿಕ ವಾಗಲಿದೆ. ಲಕ್ಷಾಂ ತರ ಜನರು ಆಗಮಿಸುವ ನಿರೀಕ್ಷೆ ಇದೆ. ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ನನ್ನ ಜೀವನ ದಲ್ಲಿಯೇ ಮರೆಯಲಾಗದ ಕ್ಷಣ.
– ಬಿ.ಎಸ್. ಯಡಿಯೂರಪ್ಪ,
ಮಾಜಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.