“ಅಶಿಸ್ತು  ವರ್ತನೆ’ ಶಾಗೆ ಬಿಎಸ್‌ವೈ ವರದಿ


Team Udayavani, Apr 27, 2017, 11:56 AM IST

bsy.jpg

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರಿಗೆ ವರದಿ ಸಲ್ಲಿಸಿದ್ದು, ಅದರಲ್ಲಿ ಕೆ.ಎಸ್‌.ಈಶ್ವರಪ್ಪ ಅವರ ನಡವಳಿಕೆ ಬಗ್ಗೆ ಹೈಕಮಾಂಡ್‌ ಬಳಿ ತೀವ್ರ ಅಸಮಾಧಾನ
ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ರಾಜ್ಯ ಘಟಕದ ತೀವ್ರ ಆಕ್ಷೇಪದ ನಡುವೆಯೂ ಕೆಲವರು ಸಂಘಟನೆ ಉಳಿಸಿ ಸಭೆ ನಡೆಸಲು ಮುಂದಾಗಿರುವುದು ಮತ್ತು ಅದರಲ್ಲಿ ಈಶ್ವರಪ್ಪ ಪಾಲ್ಗೊಳ್ಳುತ್ತಿರುವ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರಿಗೆ ವರದಿ ನೀಡಿರುವ ಯಡಿಯೂರಪ್ಪ, ಇದು ಸಂಘಟನೆಗೆ ಧಕ್ಕೆ ತರುವ ಯತ್ನ. ಹೀಗಾಗಿ ಸಭೆ ನಡೆಸುವವರಿಗೆ ಕಠಿಣ
ಸಂದೇಶ ರವಾನಿಸುವಂತೆ ಕೋರಿದ್ದರು. ಇದರ ಬೆನ್ನಲ್ಲೇ ಗುರುವಾರ ಸಂಘಟನೆ ಉಳಿಸಿ ಸಭೆ ನಡೆಸದಂತೆ ಅಮಿತ್‌
ಶಾ ಸೂಚನೆ ನೀಡಿದ್ದು, ಅದನ್ನು ಉಲ್ಲಂ ಸಿದರೆ ಪಕ್ಷದ ಉಳಿವಿಗೆ ಯಾವುದೇ ಕ್ರಮ ಕೈಗೊಳ್ಳಲು ಸಿದ್ಧ ಎಂಬ ಎಚ್ಚರಿಕೆ ಸಂದೇಶವನ್ನೂ ರವಾನಿಸಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿದ್ದ ಬಿಕ್ಕಟ್ಟು ಶಮನಕ್ಕೆ ಜ. 27ರಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ತಾವು ಸೂಚಿಸಿದ
ಎಲ್ಲಾ ಸಲಹೆಗಳನ್ನು ಪಾಲಿಸಲಾಗಿದೆ. ಕೆಲವು ಜಿಲ್ಲೆಗಳ ಅಧ್ಯಕ್ಷರ ಬದಲಾವಣೆ ಮಾಡಬೇಕು ಎಂಬ ಬೇಡಿಕೆಗೆ
ಸಂಬಂಧಿಸಿದಂತೆ ಮೂರು ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ.

ಸೊಗಡು ಶಿವಣ್ಣ ಸೇರಿದಂತೆ ನಾಲ್ವರು ಮುಖಂಡರ ಮೇಲಿನ ಶಿಸ್ತು ಕ್ರಮದ ಪ್ರಕ್ರಿಯೆ ಕೈಬಿಡಲಾಗಿದೆ. ಇನ್ನೂ ಅಸಮಾಧಾನವಿದ್ದರೆ ಅದನ್ನು ಪಕ್ಷದ ಒಳಗೆ ಬಗೆಹರಿಸಿಕೊಳ್ಳುವ ಬದಲು ಮಾಧ್ಯಮಗಳ ಮೂಲಕ ಅತೃಪ್ತಿ ವ್ಯಕ್ತಪಡಿಸುವ ಮೂಲಕ ಶಿಸ್ತು ಉಲ್ಲಂ ಸಲಾಗುತ್ತಿದೆ ಎಂದು ಈಶ್ವರಪ್ಪ ಸೇರಿ ಅಸಮಾಧಾನಿತ ಮುಖಂಡರ ನಡೆ ಬಗ್ಗೆ ಯಡಿಯೂರಪ್ಪ ಅವರು ಅಮಿತ್‌ ಶಾ ಅವರಲ್ಲಿ ಬೇಸರ ತೋಡಿಕೊಂಡಿದ್ದಾರೆಂದು ಹೇಳಲಾಗಿದೆ.

ಅಲ್ಲದೆ, ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಜ. 27ರ ಸಭೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌
ಅವರ ಸಮ್ಮುಖದಲ್ಲಿ ತಾವು ಮತ್ತು ಈಶ್ವರಪ್ಪ ಸಂಧಾನಕ್ಕೆ ಬಂದ ಬಳಿಕವೂ ಈಶ್ವರಪ್ಪ ಅವರು ಪಕ್ಷ ಸಂಘಟನೆಗಿಂತ
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಹೆಚ್ಚು ಗಮನಹರಿಸುತ್ತಿರುವುದು, ತಮ್ಮ ವಿರುದ್ಧ ತಿರುಗಿಬಿದ್ದಿರುವ ಕೆಲವು ಮುಖಂಡರ ಜತೆ ಸೇರಿ ಸಭೆ ಮಾಡುತ್ತಿರುವುದು ಮುಂತಾದ ಅಂಶಗಳನ್ನೂ ಯಡಿಯೂರಪ್ಪ ಅವರು ಅಮಿತ್‌ ಶಾ ಅವರ ಗಮನಕ್ಕೆ ತಂದಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.