ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ
Team Udayavani, May 12, 2021, 9:03 AM IST
ಬೆಂಗಳೂರು: ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೋವಿಡ್ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು. ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ. ಯೋಜನೆ ವ್ಯಾಪ್ತಿಗೆ ಕೋವಿಡ್ ಅನ್ನೂ ಸೇರಿಸುವುದು ಅಗತ್ಯವಾಗಿದೆ ಎಂದು ಎಚ್ ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.